ಭೋವಿ ಶ್ರೀ, ಅರವಿಂದ ಲಿಂಬಾವಳಿ,ಗೂಳಿಹಟ್ಟಿ, ಚಂದ್ರಪ್ಪ ಹತ್ಯೆಗೆ ಸಂಚು
ಕೆಎಸ್‌ಪಿ ಆ್ಯಪ್ ಮೂಲಕ ಚಿತ್ರದುರ್ಗ ಪೊಲೀಸರಿಗೆ ಸಂದೇಶ ರವಾನೆ
Team Udayavani, Jul 16, 2022, 6:35 AM IST
ಚಿತ್ರದುರ್ಗ: ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಹಾಗೂ ಭೋವಿ ಸಮುದಾಯದ ಶಾಸಕರ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬರ್ಥದ ಸಂದೇಶ ಪೊಲೀಸರಿಗೆ ತಲುಪಿದ್ದು, ಈ ಬಗ್ಗೆ ಹೊಳಲ್ಕೆರೆ ಠಾಣೆಯಲ್ಲಿ ದೂರು ದಾಖಲಾಗಿದೆ.
ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಶಾಸಕರಾದ ಅರವಿಂದ ಲಿಂಬಾವಳಿ, ಗೂಳಿಹಟ್ಟಿ ಡಿ.ಶೇಖರ್ ಹಾಗೂ ಎಂ.ಚಂದ್ರಪ್ಪ ಸೇರಿ ಹಲವರ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ಬೆದರಿಕೆ ಸಂದೇಶ ಕರ್ನಾಟಕ ರಾಜ್ಯ ಪೊಲೀಸ್ (ಕೆಎಸ್‌ಪಿ) ಆ್ಯಪ್ ಮೂಲಕ ಚಿತ್ರದುರ್ಗ ಪೊಲೀಸರಿಗೆ ಸಂದೇಶ ಬಂದಿದೆ. ಭೋವಿ ಸಮುದಾಯಕ್ಕೆ ಸೇರಿದ ಹಲವು ಮುಖಂಡರು ಹಾಗೂ ಅವರ ಕುಟುಂಬ ಅಪಾಯದಲ್ಲಿದೆ ಎಂದು ಸಂದೇಶದಲ್ಲಿ ಎಚ್ಚರಿಕೆ ನೀಡಲಾಗಿದೆ.
ಅನ್ಯ ಜಾತಿಗೆ ಸೇರಿದ ಕೆಲವರು ಭೋವಿ ವಡ್ಡರ ಸಂಘದ ಹೆಸರಿನಲ್ಲಿ ಸಮುದಾಯದ ನಾಯಕರ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದಾರೆ. ಪ್ರಧಾನಿ ಮೋದಿ ಹಾಗೂ ಬಿಜೆಪಿ ಬೆಂಬಲಿಸದಂತೆ ತಪ್ಪು ಸಂದೇಶ ರವಾನಿಸುತ್ತಿದ್ದಾರೆ.
ಸ್ವಾಮೀಜಿ ಹಾಗೂ ಇನ್ನೂ ಕೆಲವರ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಸಂದೇಶದಲ್ಲಿ ಉಲ್ಲೇಖೀಸಲಾಗಿದೆ. ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರಿಗೆ ಭದ್ರತೆ ನೀಡುವಂತೆ ಕೋರಿ ಭೋವಿ ಗುರುಪೀಠ ಪೊಲೀಸರಿಗೆ ಮನವಿ ಮಾಡಿದೆ. ಮಠದ ಆಸ್ತಿ ಹಾಗೂ ಸ್ವಾಮೀಜಿಗೆ ದುಷ್ಕರ್ಮಿಗಳಿಂದ ಅಪಾಯ ಎದುರಾಗುವ ಸಾಧ್ಯತೆ ಇದ್ದು, ಸೂಕ್ತ ರಕ್ಷಣೆ ನೀಡುವಂತೆ ಮಠದ ಸಿಇಒ ಗೌನಹಳ್ಳಿ ಗೋವಿಂದಪ್ಪ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
ByPolls; ಕಾಂಗ್ರೆಸ್ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.