ಮನೆಯ ನಾಲ್ವರನ್ನು ವಿಷವಿಕ್ಕಿ ಕೊಂದ ಬಾಲಕಿ!
ಗೊಲ್ಲರಹಟ್ಟಿಯ ನಿಗೂಢ ಸಾವಿನ ಪ್ರಕರಣ ಭೇದಿಸಿದ ಪೊಲೀಸರು
Team Udayavani, Oct 17, 2021, 10:58 PM IST
ಸಾಂದರ್ಭಿಕ ಚಿತ್ರ.
ಸಿರಿಗೆರೆ: ಭರಮಸಾಗರ ಹೋಬಳಿ ಇಸಾಮುದ್ರ ಗೊಲ್ಲರಹಟ್ಟಿಯಲ್ಲಿ ನಡೆದಿದ್ದ ನಾಲ್ವರ ನಿಗೂಢ ಸಾವಿನ ರಹಸ್ಯವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮನೆಯ ಹಿರಿಯ ಮಗಳೇ ಮುದ್ದೆಗೆ ವಿಷ ಬೆರೆಸಿ ನಾಲ್ವರನ್ನು ಕೊಂದಿರುವುದು ತನಿಖೆಯಿಂದ ತಿಳಿದು ಬಂದಿದೆ.
ಪ್ರಕರಣದ ವಿವರ
ಜು.12ರಂದು ಸಂಜೆ ಕೂಲಿ ಕೆಲಸ ಮುಗಿಸಿಕೊಂಡು ಮನೆಗೆ ಬಂದ ತಾಯಿ ಅಡುಗೆ ಮಾಡಲು ಪರಿಕರ, ತರಕಾರಿ ಸಿದ್ಧ ಮಾಡಿಟ್ಟುಕೊಂಡಿದ್ದಳು. ಅದೇ ಸಮಯಕ್ಕೆ ವಿದ್ಯುತ್ ಕೈಕೊಟ್ಟಿತ್ತು. ಈ ಸಂದರ್ಭವನ್ನು ಬಳಸಿಕೊಂಡು ಮುದ್ದೆ ಮಾಡಲು ಒಲೆಯ ಮೇಲಿರಿಸಿದ್ದ ಪಾತ್ರೆಗೆ ದುಷ್ಕರ್ಮಿಗಳು ವಿಷ ಬೆರೆಸಿದ್ದರೆಂದು ಭಾವಿಸಲಾಗಿತ್ತು.
ಈ ಪ್ರಕರಣದಲ್ಲಿ ಒಂದೇ ಕುಟುಂಬದ ತಿಪ್ಪಾ ನಾಯ್ಕ (45), ಸುಧಾಬಾಯಿ (40), ರಮ್ಯಾ (16) ಹಾಗೂ ಗುಂಡಿಬಾಯಿ (80) ಮೃತಪಟ್ಟಿದ್ದರು. ಜೀವನ್ಮರಣ ಹೋರಾಟ ನಡೆಸಿದ್ದ ರಾಹುಲ್ ಆಸ್ಪತ್ರೆಯಲ್ಲಿ ಚೇತರಿಸಿಕೊಂಡಿದ್ದಾರೆ.
ಪೊಲೀಸರು ವಿವಿಧ ಆಯಾಮಗಳಿಂದ ತನಿಖೆ ನಡೆಸಿದ್ದರು. ಅಡುಗೆ ಮಾಡಲು ಬಳಸಿದ್ದ ಪಾತ್ರೆ, ಆಹಾರ ಪದಾರ್ಥಗಳನ್ನು ವಿಧಿ ವಿಜ್ಞಾನ ಸಂಸ್ಥೆಗೆ ರವಾನಿಸಿದ್ದರು. ತಂದೆ, ತಾಯಿ, ಅಜ್ಜಿ ಮತ್ತು ಅಕ್ಕನ ಸಾವಿಗೆ ಕಾರಣರಾದವರನ್ನು ಪತ್ತೆ ಹಚ್ಚಬೇಕೆಂದು ರಾಹುಲ್ ಪೊಲೀಸರಿಗೆ ದೂರು ನೀಡಿದ್ದರು.
ಇದನ್ನೂ ಓದಿ:ಒಂದು ಡೋಸ್ ಪಡೆದವರಿಗೆ ಸ್ಥಳೀಯ ರೈಲು ಮತ್ತು ಮಾಲ್‌ಗಳಲ್ಲಿ ಪ್ರವೇಶ ಸಾಧ್ಯತೆ
ಸುಳಿವು ಕೊಟ್ಟ ಅನ್ನ, ಸಾರು
ಮನೆಯಲ್ಲಿ ಎಲ್ಲರೂ ಮುದ್ದೆ ಊಟ ಮಾಡಿದರೆ, ತನಗೆ ಮುದ್ದೆ ಬೇಡವೆಂದು ಹಟ ಹಿಡಿದು ಅನ್ನ ಮತ್ತು ಸಾರು ಮಾಡಿ ಉಂಡಿದ್ದ ಹಿರಿಯ ಮಗಳನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಡಿಸಿದ್ದರು. ಆಗ ಮುದ್ದೆಗೆ ವಿಷ ಹಾಕಿದ್ದು ತಾನೇ ಎಂದು ಒಪ್ಪಿಕೊಂಡಿದ್ದಾಳೆ.
ಬೈಗುಳವೇ ಶಾಪವಾಯ್ತು
ಮನೆಯಲ್ಲಿ ಬಡತನವಿದ್ದುದರಿಂದ ತನ್ನನ್ನು ಕೂಲಿ ಕೆಲಸಕ್ಕೆ ಹೋಗುವಂತೆ ಒತ್ತಾಯಿಸುವುದು, ವಿನಾ ಕಾರಣ ಬಯ್ಯುತ್ತಿದ್ದರು. ಇದೇ ಕಾರಣಕ್ಕೆ ವಿಷ ಬೆರೆಸಿದ್ದಾಗೆ 17 ವರ್ಷದ ಆರೋಪಿಯು ಒಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
ByPolls; ಕಾಂಗ್ರೆಸ್ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
MUDA CASE: ರಾಜಕೀಯ ಸುದ್ದಿಗಾಗಿ ಇ.ಡಿ. ಯತ್ನ : ಹರಿಪ್ರಸಾದ್ ಆರೋಪ
ಪ್ರೀತಿಸುವಂತೆ ಸಹಪಾಠಿಯ ಒತ್ತಡ: ಕಾಲೇಜಿನ 3ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.