185 ಗ್ರಾಮಗಳಲ್ಲಿ ಬೆಳೆ ಹಾನಿ ಸಮೀಕ್ಷೆ
Team Udayavani, Sep 16, 2018, 5:32 PM IST
ಚಿತ್ರದುರ್ಗ: ಚಿತ್ರದುರ್ಗ ತಾಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದ್ದು, ತಾಲೂಕಿನ 185 ಕಂದಾಯ ಗ್ರಾಮಗಳಲ್ಲಿ ಏಕಕಾಲಕ್ಕೆ ಬೆಳೆ ಹಾನಿ ಸಮೀಕ್ಷೆ ಪ್ರಾರಂಭವಾಗಲಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ವೆಂಕಟೇಶ್ ತಿಳಿಸಿದರು.
ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಪಂ ಅಧ್ಯಕ್ಷ ವೇಣುಗೋಪಾಲ್ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಮಾಸಿಕ ಕೆಡಿಪಿ ಸಭೆಯಲ್ಲಿ ಕೃಷಿ ಇಲಾಖೆ ಕುರಿತು ಅವರು ಮಾಹಿತಿ ನೀಡಿದರು. ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆಗಳ ಅಧಿಕಾರಿಗಳು ಜಂಟಿ ಸಮೀಕ್ಷೆ ಮಾಡಿ ಸರ್ಕಾರಕ್ಕೆ ವರದಿ ನೀಡಲಿದ್ದೇವೆ ಎಂದರು.
ಬಹುತೇಕ ಫಸಲುಗಳು ಒಣಗಿ ಹೋಗಿದ್ದು ಮಳೆ ಬಂದರೂ ಯಾವುದೇ ಫಸಲು ಫಲ ನೀಡುವ ಗ್ಯಾರಂಟಿ ಇಲ್ಲ. ಸಮೀಕ್ಷೆ ಸಂದರ್ಭದಲ್ಲಿ ಪ್ರತಿ ಗ್ರಾಮದಲ್ಲಿ ಒಂದು ಎಕರೆಗಿಂತ ಕಡಿಮೆ ಇರುವ 5 ಸರ್ವೆ ನಂಬರ್‌ವಾರು ಬಿತ್ತನೆ ಮಾಡಿರುವ
ಬೆಳೆಗಳ ಸ್ಪಷ್ಟ ಚಿತ್ರಣ ನೀಡುವಂತೆ ಸೂಚಿಸಲಾಗಿದೆ. ಸಮೀಕ್ಷೆಗೂ ಮುನ್ನ ಗ್ರಾಮ ಮಟ್ಟದ ಅಧಿಕಾರಿಗಳಿಗೆ
ತರಬೇತಿ ನೀಡಲಾಗುತ್ತಿದೆ ಎಂದರು.
ಸಮೀಕ್ಷೆ ಸಂದರ್ಭದಲ್ಲಿ ಯಾವ ಬೆಳೆಯೂ ಕೈ ತಪ್ಪದಂತೆ ನೋಡಿಕೊಳ್ಳಲು ಜಾಗ್ರತೆ ವಹಿಸಲಾಗಿದೆ. ಆಯಾ ಗ್ರಾಮಗಳ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್ ಸದಸ್ಯರು ತಂಡದೊಂದಿಗೆ ಇದ್ದರೆ ಉತ್ತಮ. ಸಮೀಕ್ಷೆ ಅವಧಿಯಲ್ಲೇ ಕುಡಿಯುವ ನೀರಿನ ಸಮಸ್ಯೆ, ಮೇವಿನ ಕೊರತೆ ಸೇರಿದಂತೆ ಅನೇಕ ಸಮಸ್ಯೆಗಳನ್ನು ದಾಖಲು ಮಾಡಲಾಗುವುದು
ಎಂದು ಹೇಳಿದರು.
ತಾಪಂ ಅಧ್ಯಕ್ಷ ವೇಣುಗೋಪಾಲ ಮಾತನಾಡಿ, ಕಳೆದ ವರ್ಷ ಈರುಳ್ಳಿಗೆ ಬೆಳೆ ವಿಮೆ ಬರಲೇ ಇಲ್ಲ. ಜಿಲ್ಲಾಧಿಕಾರಿಯನ್ನು ಪ್ರಶ್ನಿಸಿದರೆ ಉತ್ತಮ ಬೆಳೆ ಬಂದಿದೆ ಎನ್ನುತ್ತಾರೆ. ಸಮೀಕ್ಷೆ ವೇಳೆ ಸರಿಯಾಗಿ ಬೆಲೆ ವಸ್ತುಸ್ಥಿತಿ ದಾಖಲು ಮಾಡದ ಕಾರಣ ಈರುಳ್ಳಿ ಬೆಳೆಗಾರರಿಗೆ ತೊಂದರೆಯಾಗಿದೆ. ಈ ಬಾರಿ ಅದು ಪುನರಾವರ್ತನೆ ಆಗಬಾರದು ಎಂದು ಸೂಚಿಸಿದರು.
ಬೆಸ್ಕಾಂ ಗ್ರಾಮಾಂತರ ಉಪವಿಭಾಗದ ಅಧಿಕಾರಿ ಮಾತನಾಡಿ, ತಾಲೂಕಿನಲ್ಲಿ ಬಡತನ ರೇಖೆಗಿಂತ ಕೆಳಗಿರುವ 3,384 ಕುಟುಂಬಗಳಿಗೆ ಕೇಂದ್ರ ಸರ್ಕಾರದ ದೀನ್‌ದಯಾಳ್ ಗ್ರಾಮ ವಿದ್ಯುತ್ ಯೋಜನೆಯಡಿ ವಿದ್ಯುತ್ ಸೌಲಭ್ಯ ಒದಗಿಸುವ ಗುರಿ ಹೊಂದಲಾಗಿದೆ.
ಇದುವರೆಗೂ 1,854 ಪೂರ್ಣಗೊಂಡಿದೆ. 1,530 ಬಾಕಿ ಇದ್ದು, ಎರಡೂಮೂರು ತಿಂಗಳಲ್ಲಿ ಸಂಪರ್ಕ ಕಲ್ಪಿಸಲಾಗುತ್ತದೆ. ಗ್ರಾಮ ಸ್ವರಾಜ್ ಹಾಗೂ ಸೌಭಾಗ್ಯ ಯೋಜನೆಯಡಿ ಎಪಿಎಲ್ ಕುಟುಂಬದವರು 500 ರೂ. ರಂತೆ ಎರಡು ಕಂತುಗಳಲ್ಲಿ ಬೆಸ್ಕಾಂಗೆ ಪಾವತಿ ಮಾಡಿದರೆ ಅವರು ಸಹ ಸವಲತ್ತು ಪಡೆಯಬಹುದು ಎಂದರು.
ನೂತನ ವಿದ್ಯುತ್ ಸಂಪರ್ಕ, ದುರಸ್ತಿ ವೇಳೆ ವಿದ್ಯುತ್ ಕಲ್ಪಿಸುವ ಸಂದರ್ಭದಲ್ಲಿ 200, 300 ರೂ. ಗಳನ್ನು ಲಂಚ ಪಡೆಯುತ್ತಿರುವ ದೂರುಗಳು ಕೇಳಿ ಬಂದಿವೆ ಎಂದು ಅಧ್ಯಕ್ಷರು ಬೇಸರ ವ್ಯಕ್ತಪಡಿಸಿದರು. ಆದರೆ ಬೆಸ್ಕಾಂನವರು ಇದನ್ನು ಪಡೆಯುತ್ತಿಲ್ಲ. ಗುತ್ತಿಗೆ ಪಡೆದವರು ಉಪ ಗುತ್ತಿಗೆ ನೀಡಿದ್ದು, ಅದರಲ್ಲಿ ಕೆಲವರು ಪಡೆದಿರಬಹುದು. ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಬೆಸ್ಕಾಂನ ಸೆಕ್ಷನ್ ಅಧಿಕಾರಿ ಸೇರಿ ಯಾರಾದರೂ ಹಣ ಕೇಳಿದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಗ್ಯಾಸ್ ರಹಿತ ಫಲಾನುಭವಿಗಳು ಉಜ್ವಲ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಹಾಕದಿದ್ದರೂ ಗ್ರಾಮಗಳಿಗೆ ತೆರಳಿ ನಾವೇ ಪತ್ತೆ ಮಾಡಿ ಗ್ಯಾಸ್ ಸಂಪರ್ಕ ಕಲ್ಪಿಸುತ್ತೇವೆ ಎಂದರು. ಸಭೆಯಲ್ಲಿ ತಾಪಂ ಉಪಾಧ್ಯಕ್ಷೆ ಶೋಭಾ, ಗ್ರಾಮೀಣ ಉಪವಿಭಾಗದ ಸಹಾಯಕ ನಿರ್ದೇಶಕ ಎಚ್. ಹನುಮಂತಪ್ಪ, ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ತಾಲೂಕು ಪಂಚಾಯತ್ ಕೆಡಿಪಿ, ಸಾಮಾನ್ಯ ಸಭೆಗಳಿಗೆ ಹಾಜರಾಗದ ಲೋಕೋಪಯೋಗಿ, ಸಣ್ಣ ನೀರಾವರಿ, ಅರಣ್ಯ
(ರೆಗ್ಯುಲರ್ ಫಾರೆಸ್ಟ್) ಇಲಾಖೆ ಅಧಿಕಾರಿಗಳಿಗೆ ಕೂಡಲೇ ಕಾರಣ ಕೇಳಿ ನೋಟಿಸ್ ನೀಡಿ ಶಿಸ್ತುಕ್ರಮ ಕೈಗೊಳ್ಳಬೇಕು. ಜಿಪಂ ಮಾಸಿಕ ಕೆಡಿಪಿ ಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸುತ್ತೇನೆ.
ವೇಣುಗೋಪಾಲ್, ತಾಪಂ ಅಧ್ಯಕ್ಷರು.
ಗ್ರಾಮಾಂತರ ಪ್ರದೇಶಗಳಲ್ಲಿ ಸರ್ಕಾರದ ವಿವಿಧ ಸೌಲಭ್ಯಗಳನ್ನು ನೀಡುವ ಸಂದರ್ಭದಲ್ಲಿ ಆಯಾ ಭಾಗದ ಸದಸ್ಯರಿಗೆ ಮಾಹಿತಿ ನೀಡಬೇಕು. ಎಲ್ಲ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯ ತಲುಪುವಂತಾಗಬೇಕು.
ಬೋರಯ್ಯ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.