ಆಧುನಿಕ ಯುಗದಲ್ಲಿ ಸಂಸ್ಕಾರ ಕಣ್ಮರೆ
Team Udayavani, May 14, 2018, 5:48 PM IST
ಚಿತ್ರದುರ್ಗ: ಆಧುನಿಕ ಯುಗದಲ್ಲಿ ಸಂಸ್ಕಾರ, ಮೌಲ್ಯಗಳು ಕಣ್ಮರೆಯಾಗಿವೆ. ಎಲ್ಲರೂ ಹಣ, ಅಧಿಕಾರದ ಹಿಂದೆ ಬಿದ್ದಿದ್ದಾರೆಯೇ ವಿನಃ ಭಕ್ತಿಯ ಮಾರ್ಗದಲ್ಲಿ ಹೋಗುವವರು ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಹೊಸದುರ್ಗ ಕುಂಚಿಟಿಗ ಮಹಾಸಂಸ್ಥಾನ ಮಠದ ಡಾ| ಶಾಂತವೀರ ಸ್ವಾಮೀಜಿ ವಿಷಾದಿಸಿದರು.
ಬೆಂಗಳೂರಿನ ಮಂಜುನಾಥ ನಗರದಲ್ಲಿ ಭಾನುವಾರ ವೀರಾಂಜನೇಯಸ್ವಾಮಿ ನೂತನ ದೇವಸ್ಥಾನದ ಕುಂಭಾಭಿಷೇಕ ಹಾಗೂ ಕಳಶ ಸ್ಥಾಪನೆ ನೆರವೇರಿಸಿ ಶ್ರೀಗಳು ಆಶೀರ್ವಚನ ನೀಡಿದರು.
ಆತ್ಮ ನಿವೇದನೆ ಮಾಡಿಕೊಳ್ಳಲು ಪ್ರತಿಯೊಬ್ಬರೂ ದೇವಸ್ಥಾನಕ್ಕೆ ಹೋಗಿ ದೇವರನ್ನು ಪೂಜಿಸಬೇಕೇ ವಿನಃ
ಆತ್ಮವಂಚನೆ ಮಾಡಿಕೊಳ್ಳಬಾರದು. ಮನುಷ್ಯರಾದ ಮೇಲೆ ಎಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ತಪ್ಪು ಮಾಡುವುದು ಸಹಜ. ಆದರೆ ದೇವಸ್ಥಾನಕ್ಕೆ ಹೋದ ಮೇಲೆ ದೇವರ ಸನ್ನಿಧಿಯಲ್ಲಿ ತಪ್ಪನ್ನು ತಿದ್ದಿಕೊಂಡು ಸರಿಯಾದ ಮಾರ್ಗದಲ್ಲಿ ಹೋಗುವುದನ್ನು ಕಲಿಯಬೇಕು ಎಂದರು.
ದೇವಸ್ಥಾನಗಳನ್ನು ಕಟ್ಟುವವರು ಸಂಖ್ಯೆ ಜಾಸ್ತಿ ಇದೆ. ಭಕ್ತಿ ಮನಸ್ಸಿನಲ್ಲಿ ಇರಬೇಕು. ಆಡಂಬರಕ್ಕಾಗಿ ಪೂಜೆ ಮಾಡಿ ಭಕ್ತಿಯನ್ನು ಮತ್ತೂಬ್ಬರ ಎದುರು ಪ್ರದರ್ಶಿಸಲು ಹೋದರೆ ನಿಜವಾಗಿಯೂ ದೇವರು ಮೆಚ್ಚುವುದಿಲ್ಲ. ಹಾಗಾಗಿ ದೇವಸ್ಥಾನಗಳನ್ನು ಕಟ್ಟುವುದಕ್ಕಿಂತ ಮುಖ್ಯವಾಗಿ ಮನಸ್ಸುಗಳನ್ನು ಕಟ್ಟುವ ಮೂಲಕ ಸಮಾಜದಲ್ಲಿ ಸಾಮರಸ್ಯ,
ಸಹಬಾಳ್ವೆಯನ್ನು ರೂಪಿಸಿಬೇಕಾಗಿದೆ ಎಂದರು.
ಶ್ರೀ ಚಂದ್ರಶೇಖರನಾಥ ಸ್ವಾಮೀಜಿ, ಎಲೆರಾಂಪುರದ ಕುಂಚಿಟಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ
ಶ್ರೀ ಹನುಮಂತನಾಥ ಸ್ವಾಮೀಜಿ, ದೇವಸ್ಥಾನದ ಅಧ್ಯಕ್ಷ ಕೃಷ್ಣಪ್ಪ, ಮಂಜು, ಶಿವಭದ್ರಯ್ಯ ಮೊದಲಾದವರು
ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.