ಕೃಷಿಯೊಂದಿಗೆ ಹೈನುಗಾರಿಕೆ ಮಾಡಿ: ಶಶಿಕಲಾ
Team Udayavani, Sep 26, 2020, 7:55 PM IST
ಸಾಂದರ್ಭಿಕ ಚಿತ್ರ
ಚಿತ್ರದುರ್ಗ: ರೈತರು ಕೃಷಿಯ ಜತೆಗೆ ಉಪಕಸುಬಾಗಿ ಹೈನುಗಾರಿಕೆಯಂತಹ ಮಾಡಿದರೆ ಹೆಚ್ಚುಲಾಭವಾಗುತ್ತದೆ ಎಂದು ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶಬಾಬು ಸಲಹೆ ನೀಡಿದರು.
ಜಿಪಂ ಮಿನಿ ಸಭಾಂಗಣದಲ್ಲಿ ನಡೆದ ಪಶುಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆ ಸೌಲಭ್ಯಗಳ ಕುರಿತು ಅರಿವು ನೆರವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೃಷಿ ಕೆಲಸದ ಜತೆಗೆ ಹೈನುಗಾರಿಕೆ, ಕುರಿ ಕೋಳಿ ಸಾಗಾಣಿಕೆ ಮತ್ತಿತರ ಉಪಕಸುಬು ಅನುಸರಿಸಬೇಕು. ಇದರಿಂದ ಕುಟುಂಬಕ್ಕೆ ಮತ್ತಷ್ಟು ಆರ್ಥಿಕ ಲಾಭ ಸಿಗುವುದರಿಂದ ಉತ್ತಮ ಬದುಕು ಕಟ್ಟಿಕೊಳ್ಳಬಹುದು. ಒಂದು ವೇಳೆ ಒಂದು ಬೆಳೆಯಲ್ಲಿ ನಷ್ಟ ಅನುಭವಿಸಿದರೆ ಮತ್ತೂಂದರಲ್ಲಿ ಲಾಭ ಸಿಗುತ್ತದೆ ಎಂದು ತಿಳಿಸಿದರು.
ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ ಉಪನಿರ್ದೇಶಕ ಡಾ.ಕೃಷ್ಣಪ್ಪ ಮಾತನಾಡಿ, ರೈತರು ಕೃಷಿ ಜತೆಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ ಮಾಡಬೇಕು. ಇತ್ತೀಚೆಗೆ ಕುರಿ ಸಾಗಾಣಿಕೆ ಉಪ ಕಸುಬಿಗಿಂತ ಉದ್ಯಮವಾಗಿ ಬದಲಾಗುತ್ತಿರುವುನ್ನು ಗಮನಿಸಬಹುದು ಎಂದರು.
ಕೋವಿಡ್-19 ಬಂದಂಹ ಸಂದರ್ಭದಲ್ಲಿ ವಲಸೆ ಹೋದವರು ಮತ್ತೆ ತಮ್ಮ ತಮ್ಮ ಗ್ರಾಮಗಳಿಗೆ ಆಗಮಿಸಿ ಸಾಕಷ್ಟು ಜನರು ಹೈನುಗಾರಿಕೆಯಲ್ಲಿ ತೊಡಗಿರುವುದನ್ನು ಕಾಣಬಹುದಾಗಿದೆ. ಇದು ನಿರುದ್ಯೋಗ ಸಮಸ್ಯೆಗೆ ಪರ್ಯಾಯವಾಗಿದೆ ಎಂದು ಹೇಳಿದರು.
ಭಾರತ ಹಾಲು ಉತ್ಪಾದನೆಯಲ್ಲಿ ಜಗತ್ತಿನಲ್ಲೇ ಮೊದಲ ಸ್ಥಾನದಲ್ಲಿದೆ. ವಿಶ್ವ ಆರೋಗ್ಯ ಸಂಸ್ಥೆಯ ಶಿಫಾರಸಿನಂತೆ ಒಬ್ಬ ಮನುಷ್ಯ ಆರೋಗ್ಯವಾಗಿರಲು ದಿನಕ್ಕೆ 300 ಗ್ರಾಂ ನಷ್ಟು ಹಾಲು, ವರ್ಷಕ್ಕೆ 11 ಕೆಜಿ ಮಾಂಸ, 190 ಮೊಟ್ಟೆ ಸೇವನೆ ಮಾಡಬೇಕು ಎಂದು ಹೇಳಿದೆ ಎಂದರು.
ಜಿಲ್ಲೆಯಲ್ಲಿ ಒಟ್ಟು 2,15,566 ಜಾನುವಾರುಗಳಿದ್ದು, ಇದರಲ್ಲಿ 3.39 ಲಕ್ಷ ದನ, ಎಮ್ಮೆಗಳಿವೆ. 17.5 ಲಕ್ಷ ಕುರಿ, ಮೇಕೆಗಳಿವೆ. 20,70,000 ಕೋಳಿಗಳಿದ್ದು, ಇವುಗಳ ಆರೋಗ್ಯ ಸಂರಕ್ಷಣೆಗೆ ರೋಗಗಳ ನಿಯಂತ್ರಣಕ್ಕೆ ಇಲಾಖೆಯು ಜಿಲ್ಲೆಯಾದ್ಯಂತ ಪಶುಚಿಕಿತ್ಸಾ ಕೇಂದ್ರಗಳು, ಪಶು ಆಸ್ಪತ್ರೆ, ಪಶು ಚಿಕಿತ್ಸಾಲಯಗಳು, ಜಿಲ್ಲಾ ಮಟ್ಟದಲ್ಲಿ ಸಂಚಾರಿ ಪಶು ಚಿಕಿತ್ಸಾಲಯಗಳು, ಪಾಲಿ ಕ್ಲಿನಿಕ್‌ನಲ್ಲಿ ತಜ್ಞ ವೈದ್ಯರು ಇಲಾಖೆಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು.
2020-21ನೇ ಸಾಲಿನಲ್ಲಿ ಏಪ್ರಿಲ್‌ನಿಂದ ಈವರೆಗೆ ಗಳಲೆ ರೋಗದ ವಿರುದ್ಧ 2.8 ಲಕ್ಷ ಜಾನುವಾರುಗಳಿಗೆ ಲಸಿಕೆ ಹಾಕಿದ್ದೇವೆ. ಚಪ್ಪೆ ರೋಗದ ವಿರುದ್ಧ ದನಗಳಿಗೆ 46 ಸಾವಿರ ಜಾನುವಾರುಗಳಿಗೆ, ಕುರಿಸಿಡುಬು ವಿರುದ್ಧ 48,919 ಕುರಿಗಳಿಗೆ ಲಸಿಕೆ, ಪಿಪಿಆರ್ ವಿರುದ್ಧ 7.29 ಲಕ್ಷ ಕುರಿ ಮತ್ತು ಮೇಕೆಗೆ ಲಸಿಕೆ ಹಾಕಲಾಗಿದೆ ಎಂದು ಮಾಹಿತಿ ನೀಡಿದರು. ಪಶುಪಾಲನಾ ಇಲಾಖೆ ಹಾಗೂ ಜಿಪಂ ಅಧಿಕಾರಿ,ಸಿಬ್ಬಂದಿಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.