ಕಾಂಗ್ರೆಸ್ ನಾಯಕರು ಸಣ್ಣತನದ ಹೇಳಿಕೆ ನೀಡೋದು ಬಿಡಲಿ
Team Udayavani, Aug 22, 2021, 6:34 PM IST
ಚಿತ್ರದುರ್ಗ: ಕಾಂಗ್ರೆಸ್ ರಾಷ್ಟ್ರೀಯ ಪಕ್ಷವಾಗಿ ಸಣ್ಣತನದ ಮಾತನಾಡಬಾರದು. ಕೊರೊನಾ ಕೇವಲ ಕರ್ನಾಟಕ ಅಥವಾ ಭಾರತಕ್ಕೆ ಮಾತ್ರವಲ್ಲ, ಇಡೀ ವಿಶ್ವವನ್ನೇ ಆವರಿಸಿತ್ತು ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಾಶೀರ್ವಾದ ಯಾತ್ರೆ ಕುರಿತು ಕಾಂಗ್ರೆಸ್ ನಾಯಕರು ಟೀಕೆ ಮಾಡುತ್ತಿದ್ದಾರೆ. ಆದರೆ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಮಾತನಾಡಬೇಕು. ಕ್ಷುಲ್ಲಕ ಭಾಷೆ ಬಳಸಲು ಇವರಿಗೆಲ್ಲ ಯಾಕೆ ಮನಸ್ಸು ಬರುತ್ತದೋ ಗೊತ್ತಿಲ್ಲ ಎಂದರು. ಕಾಂಗ್ರೆಸ್ ನಾಯಕರ ಬಳಿ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡಲು ಏನೂ ಇಲ್ಲ. ಒಂದೂ ಆರೋಪವಿಲ್ಲದೆ ಏಳು ವರ್ಷಗಳ ಆಡಳಿತ ನಡೆದಿದೆ.
ಅದಕ್ಕಾಗಿ ಇಲ್ಲಸಲ್ಲದ್ದನ್ನು ಹೇಳುತ್ತಿದ್ದಾರೆ. ಮಾತನಾಡುವಾಗ ಗಾಂಭೀರ್ಯತೆ ಇರಲಿ. ಜನಾಶೀರ್ವಾದ ಯಾತ್ರೆಯಲ್ಲಿ ಜನ ಭಾವನಾತ್ಮಕವಾಗಿ ಸೇರಿದ್ದಾರೆ. ಕಾಂಗ್ರೆಸ್‌ನವರು ಕೂಡ ಎಲ್ಲಾ ಕಡೆ ಜನರನ್ನು ಸೇರಿಸುತ್ತಿದ್ದಾರೆ. ಕೋವಿಡ್ ನಿಯಮ ಪಾಲಿಸುವುದು ನಮ್ಮ ಧರ್ಮ. ಮಾಜಿ ಸಚಿವ ವಿನಯ ಕುಲಕರ್ಣಿ ಸೇರಿದಂತೆ ಎಲ್ಲರಿಗೂ ಒಂದೇ ನಿಯಮ ಎಂದು ತಿಳಿಸಿದರು. ಸಚಿವ ಆನಂದ ಸಿಂಗ್ ಮುನಿಸಿನ ಕುರಿತು ಪ್ರತಿಕ್ರಿಯಿಸಿದ ಸೋಮಣ್ಣ, ಅವರಿಗೆ ಯಾವ ಮುನಿಸೂ ಇಲ್ಲ. ಸಿಎಂ ಜೊತೆ ಚರ್ಚಿಸಿದ್ದಾರೆ.
ಆನಂದ್ ಸಿಂಗ್ ಚಿನ್ನದಂತವರು. ಎಳೆಯ ಮಗುವಿನ ರೀತಿ. ನಿನ್ನೆಯಿಂದ ಅವರ ಕಚೇರಿ ತೆರೆದಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.