ಕುರುಬ ಪದ ಎಸ್‌ಟಿಗೆ ಸೇರಿಸಲು ಹೋರಾಟ
ಫೆ. 7ರ ಬೆಂಗಳೂರು ಸಮಾವೇಶದಲ್ಲಿ 10 ಲಕ್ಷ ಮಂದಿ ಪಾಲ್ಗೊಳ್ಳುವ ನಿರೀಕ್ಷೆ: ಕನಕಶ್ರೀ
Team Udayavani, Jan 24, 2021, 3:38 PM IST
ಚಿತ್ರದುರ್ಗ: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಹೊಸದಾಗಿ ಸೇರಿಸಬೇಕಿಲ್ಲ. ಈಗಾಗಲೇ ಆ ಸೌಲಭ್ಯ ಸಿಕ್ಕಿದೆ. ಆದರೆ ಬಿಟ್ಟು
ಹೋಗಿರುವ ಆರು ಪದಗಳನ್ನಷ್ಟೇ ಸೇರಿಸಬೇಕಿದೆ ಎಂದು ಕಾಗಿನೆಲೆ ಮಹಾಸಂಸ್ಥಾನದ ಶ್ರೀ ನಿರಂಜನನಾಂದಪುರಿ ಸ್ವಾಮೀಜಿ ಹೇಳಿದರು.
ಕುರುಬರನ್ನು ಎಸ್‌ಟಿಗೆ ಸೇರಿಸಲು ಕಾಗಿನೆಲೆಯಿಂದ ಆರಂಭವಾಗಿರುವ ಪಾದಯಾತ್ರೆ ಶನಿವಾರ ನಗರಕ್ಕೆ ಆಗಮಿಸಿದ ವೇಳೆ
ಸುದ್ದಿಗೋಷ್ಠಿ ಯಲ್ಲಿ ಶ್ರೀಗಳು ಮಾತನಾಡಿದರು. ಜೇನುಕುರುಬ, ಕಾಡುಕುರುಬ, ಗೊಂಡ, ರಾಜಗೊಂಡ, ಕಾಟನಾಯಕನ್, ಕುರುಮನ್, ಪದಗಳು ಎಸ್. ಟಿ. ಪಟ್ಟಿಯಲ್ಲಿವೆ. ಆದರೆ ಕುರುಬ ಎನ್ನುವ ಪದ ಮಾತ್ರ ಬಿಟ್ಟು ಹೋಗಿದೆ. ಇದು ಕೂಡ ಸೇರ್ಪಡೆ ಮಾಡಬೇಕು ಎನ್ನುವುದು ನಮ್ಮ ಒತ್ತಾಯ. ಅದಕ್ಕಾಗಿ ಐತಿಹಾಸಿಕ ಬೃಹತ್ ಪಾದಯಾತ್ರೆ ಆರಂಭಿಸಲಾಗಿದೆ ಎಂದರು.
ಕೊಡಗು, ಕಲಬುರ್ಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಯ ಕೆಲವರು ಪರಿಶಿಷ್ಟ ಪಂಗಡದ ಸೌಲಭ್ಯ ಪಡೆಯುತ್ತಿದ್ದಾರೆ. ಕೊಡಗು ಜಿಲ್ಲೆಯ
ವ್ಯಾಪ್ತಿಗೆ ಮಾತ್ರ ಕುರುಬ ಸಮುದಾಯಕ್ಕೆ ಸೌಲಭ್ಯ ಕಲ್ಪಿಸಲಾಗಿದೆ. ಇದನ್ನು ರಾಜ್ಯದ ಎಲ್ಲೆಡೆ ವಿಸ್ತರಿಸಬೇಕು. ಹಾಲುಮತ ಸೇರಿದಂತೆ ಇತರ 6 ಪದಗಳಿಂದ ಗುರುತಿಸುವ ಕುರುಬ ಸಮು ದಾಯದ ಪರ್ಯಾಯ ಹೆಸರುಗಳನ್ನು ಪಟ್ಟಿಗೆ ಸೇರಿಸಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ : ಸೋಡಿಗದ್ದೆ ಮಹಾಸತಿ ಜಾತ್ರೋತ್ಸವ ಆರಂಭ
ಫೆ. 7 ರಂದು ಬೆಂಗಳೂರಿನಲ್ಲಿ ನಡೆಯುವ ಸಮಾವೇಶದಲ್ಲಿ 10 ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಸಮಾವೇಶಕ್ಕೆ ಸಕಲ ಸಿದ್ಧತೆ
ಮಾಡಿಕೊಳ್ಳಲಾಗುತ್ತಿದೆ. ಪಾದಯಾತ್ರೆಗೆ ಅಭೂತ ಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಭಕ್ತರನ್ನು ಕಣ್ತುಂಬಿಕೊಂಡಾಗ ನಡಿಗೆಯ ದಣಿವು
ಮಾಯವಾಗುತ್ತದೆ ಎಂದರು.
ಹೊಸದುರ್ಗ ಶಾಖಾ ಮಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಮಾತನಾಡಿ, ರಾಜ್ಯ ಮತ್ತು ಕೇಂದ್ರ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಪಾದಯಾತ್ರೆ ನಡೆಸಲಾಗುತ್ತಿದೆ. ಹಲವು ಪದಗಳಿಂದ ಗುರುತಿಸುವ ಸಮುದಾಯ ಮೀಸಲಾತಿ ಸೌಲಭ್ಯದಿಂದ
ವಂಚಿತವಾಗಿದೆ. ಸರ್ಕಾರ ಸರಿಯಾಗಿ ಸ್ಪಂದಿಸದೇ ಇದ್ದರೆ ಹೋರಾಟವನ್ನು ತೀವ್ರಗೊಳಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು. ಫೆ. 7 ರಂದು ಪಾದಯಾತ್ರೆ ಬೆಂಗಳೂರು ತಲುಪಲಿದ್ದು, ಅಲ್ಲಿ ಬೃಹತ್ ಸಮಾವೇಶ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಿದ್ದೇವೆ. ಅಷ್ಟಕ್ಕೂ ಸ್ಪಂದಿಸದಿದ್ದರೆ 1 ತಿಂಗಳು ಗಡುವು ನೀಡಿ ನಂತರ ದೆಹಲಿಯ ಸಂಸತ್ ಭವನಕ್ಕೆ ನಮ್ಮ ಹೋರಾಟ ತೆಗೆದುಕೊಂಡು ಹೋಗುತ್ತೇವೆ. ಅಲ್ಲಿ ಧರಣಿ ನಡೆಸುತ್ತೇವೆ ಎಂದರು.
ಇದನ್ನೂ ಓದಿ : ರೈತರ ಟ್ರ್ಯಾಕ್ಟರ್ ರ‍್ಯಾಲಿಗೆ ಮಾರ್ಗಗಳನ್ನು ಸೂಚಿಸಿದ ದೆಹಲಿ ಪೊಲೀಸರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Indore; ಭಿಕ್ಷುಕರ ಬಗ್ಗೆ ಮಾಹಿತಿ ಹಂಚಿಕೊಂಡರೆ ನಾಗರಿಕರಿಗೆ 1,000 ರೂ. ಬಹುಮಾನ!
Anmol Bishnoi; ಅಪರಾಧ ಜಾಲದ ಪ್ರಾಬಲ್ಯ ಸ್ಥಾಪಿಸಲು ಬಾಬಾ ಸಿದ್ದಿಕ್ ಹ*ತ್ಯೆ!
Ullala: ಲಾರಿ-ಬೈಕ್ ಅಪಘಾತ: ಮೆಡಿಕಲ್ ಅಂಗಡಿ ಮಾಲೀಕ ದಾರುಣ ಮೃತ್ಯು
ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.