ಆದರ್ಶ ಗ್ರಾಮ ಕಾಮಗಾರಿ ಪೂರ್ಣಗೊಳಿಸಿ

­ಅನುದಾನ ಸಮರ್ಪಕ ಬಳಕೆಯಾಗಲಿ: ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಸೂಚನೆ

Team Udayavani, Feb 23, 2021, 6:17 PM IST

DC

ಚಿತ್ರದುರ್ಗ: ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಆಯ್ಕೆಯಾಗಿರುವ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಈ ತಿಂಗಳೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ, ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಆಯ್ಕೆಯಾಗಿರುವ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲು ನಗರದ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಆಯ್ಕೆಯಾಗಿರುವ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಂಡಿವೆ. ಅಧಿಕಾರಿಗಳು ಸರ್ಕಾರ ನೀಡಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು ಎಂದರು.

ಸಮಾಜಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಮತಾ ಮಾತನಾಡಿ, ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ಕೇಂದ್ರ  ಪುರಸ್ಕೃತ ಯೋಜನೆಯಾದ ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಜಿಲ್ಲೆಯಲ್ಲಿ 2018-19ನೇ ಸಾಲಿನಲ್ಲಿ ಶೇ. 50ಕ್ಕಿಂತ ಹೆಚ್ಚಿನ ಜನಸಂಖ್ಯೆ ಇರುವ ಪರಿಶಿಷ್ಟ ವರ್ಗದವರು ಇರುವ ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ. 2018-19ನೇ ಸಾಲಿಗೆ 7 ಗ್ರಾಮಗಳನ್ನು ಹಾಗೂ 2016-17ನೇ ಸಾಲಿನಲ್ಲಿ ಆಯ್ಕೆಯಾಗಿದ್ದ 40 ಗ್ರಾಮಗಳ ಪೈಕಿ ಹೆಚ್ಚುವರಿಯಾಗಿ 3 ಗ್ರಾಮಗಳನ್ನು ಮರು ಆಯ್ಕೆ ಮಾಡಲಾಗಿದೆ. ಹೊಸದಾಗಿ ಆಯ್ಕೆಯಾಗಿರುವ

7 ಗ್ರಾಮಗಳಿಗೆ ಸಂಬಂಧಿಸಿದಂತೆ ಪ್ರತಿ ಗ್ರಾಮದಲ್ಲಿ 40 ಲಕ್ಷ ರೂ. ಅಂದಾಜು ವೆಚ್ಚದಲ್ಲಿ ಹಾಗೂ ಹೆಚ್ಚುವರಿಯಾಗಿ ಆಯ್ಕೆಯಾಗಿರುವ 3 ಗ್ರಾಮಗಳಲ್ಲಿ ಪ್ರತಿ ಗ್ರಾಮಕ್ಕೆ 9.50 ಲಕ್ಷ ರೂ. ಅಂದಾಜು ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.

2018-19ನೇ ಸಾಲಿನಲ್ಲಿ ಹೊಳಲ್ಕೆರೆ ತಾಲೂಕಿನ ಕಾಲಘಟ್ಟ, ಹಿರಿಯೂರು ತಾಲೂಕಿನ ಭರಮಗಿರಿ, ಮೊಳಕಾಲ್ಮೂರು ತಾಲೂಕಿನ ಚಿಕ್ಕೇರಹಳ್ಳಿ ಗ್ರಾಮಗಳು ಹೆಚ್ಚುವರಿಯಾಗಿ ಆದರ್ಶ ಗ್ರಾಮ ಯೋಜನೆಯಡಿ ಮರು ಆಯ್ಕೆ ಆಗಿವೆ. 2019-20ನೇ ಸಾಲಿಗೆ ಚಿತ್ರದುರ್ಗ, ಚಳ್ಳಕೆರೆ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು ತಾಲೂಕಿನ 14 ಗ್ರಾಮಗಳು ಆಯ್ಕೆ ಆಗಿದ್ದು, ಪ್ರಸ್ತುತ 10 ಗ್ರಾಮಗಳಿಗೆ ಆದೇಶ ನೀಡಲಾಗಿದೆ. ಶಾಲಾ ಕೊಠಡಿ ನಿರ್ಮಾಣ, ಹೊಸ ಅಂಗನವಾಡಿ ಕಟ್ಟಡ ನಿರ್ಮಾಣ, ಅಂಗನವಾಡಿ ಕಟ್ಟಡಗಳ ದುರಸ್ತಿ, ಸಿ.ಸಿ. ರಸ್ತೆ ಮತ್ತು ಬಾಕ್ಸ್‌ ಚರಂಡಿ ನಿರ್ಮಾಣ, ಸಮುದಾಯ ಭವನ, ಶುದ್ಧ ಕುಡಿಯುವ ನೀರಿನ ಘಟಕ, ಬಯಲು ರಂಗಮಂದಿರ ನಿರ್ಮಾಣ, ಹೈಮಾಸ್ಟ್‌ ದೀಪ ಅಳವಡಿಕೆ, ಕ್ರೀಡಾ ಸಾಮಗ್ರಿಗಳು ಸೇರಿದಂತೆ ಇತರೆ ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆ ನೀಡಲಾಯಿತು.

ಸಭೆಯಲ್ಲಿ ಡಿಡಿಪಿಐ ಕೆ. ರವಿಶಂಕರ ರೆಡ್ಡಿ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅನುಷ್ಠಾನ ಅಧಿ ಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.