ಆಧಾರ್‌-ಪಹಣಿ ಜೋಡಣೆ ಮಾಡಿಕೊಳ್ಳಿ

ಆಂದೋಲನ ಯಶಸ್ಸಿಗೆ ಸಹಕರಿಸಿ! ­ಸರ್ಕಾರದ ಸೌಲಭ್ಯ ಪಡೆಯಲು ಸಹಕಾರಿ: ಡಿಸಿ ಮನ್ನಿಕೇರಿ

Team Udayavani, Feb 13, 2021, 3:28 PM IST

DC Mannikeri

ಚಿತ್ರದುರ್ಗ: ರೈತರ ಅನುಕೂಲಕ್ಕಾಗಿ ಜಿಲ್ಲೆಯಲ್ಲಿ ಆಧಾರ್‌-ಪಹಣಿ ಜೋಡಣೆ ಆಂದೋಲನ ಹಮ್ಮಿಕೊಳ್ಳಲಾಗಿದೆ. ಇದನ್ನು ಸಂಪೂರ್ಣ ಯಶಸ್ವಿಗೊಳಿಸಲು ಎಲ್ಲರೂ ಸಹಕರಿಸಿ ಎಂದು ಜಿಲ್ಲಾ ಧಿಕಾರಿ ಕವಿತಾ ಎಸ್‌. ಮನ್ನಿಕೇರಿ ತಿಳಿಸಿದರು.

ಜಿಲ್ಲಾ ಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕೃಷಿ ಇಲಾಖೆಯಿಂದ ಹಮ್ಮಿಕೊಂಡಿದ್ದ ಮುಂಗಾರು ಹಂಗಾಮು ಸಿದ್ಧತೆ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕೃಷಿ ಮತ್ತು ವಿವಿಧ ಇಲಾಖೆಗಳ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲ ಮಾಡುವ ನಿಟ್ಟಿನಲ್ಲಿ ಆಧಾರ್‌ ಜೋಡಣೆ ಮಾಡಬೇಕಿದೆ. ಈವರೆಗೆ ಮಾಡಿಕೊಳ್ಳದ ರೈತರು ತಕ್ಷಣ ಆಧಾರ್‌-ಪಹಣಿ ಜೋಡಣೆ ಮಾಡಿಕೊಳ್ಳಬೇಕು. ಆಧಾರ್‌ ಜೋಡಣೆ ಆದರೆ ಸರ್ಕಾರದ ಸೌಲಭ್ಯಗಳು ಹಾಗೂ ಶೀಘ್ರದಲ್ಲಿ ಪರಿಹಾರ ಪಡೆದುಕೊಳ್ಳಲು ಸಹಾಯಕವಾಗಲಿದೆ ಎಂದು ಹೇಳಿದರು.

ಫ್ರೂಟ್ಸ್‌ ತಂತ್ರಾಂಶದಲ್ಲಿ ರೈತರು ತಮ್ಮ ಜಮೀನಿನ ವಿವರವನ್ನು ನೋಂದಾಯಿಸಿ ರೈತರ ಗುರುತಿನ ಚೀಟಿ ಸಂಖ್ಯೆ ಪಡೆದುಕೊಳ್ಳುವುದು ಅವಶ್ಯಕವಾಗಿರುತ್ತದೆ. ಫ್ರೂಟ್ಸ್‌ ಮಾಹಿತಿಯು ಕೃಷಿ ಮತ್ತು ಕೃಷಿ ಸಂಬಂಧಿ ತ ಇಲಾಖೆಗಳಿಂದ ದೊರೆಯುವ ಸೌಲಭ್ಯ ನೀಡುವ ಹೊರತಾಗಿಯು ಇತರೆ ಇಲಾಖೆಗಳಿಗೂ ಇದು ಸಹ ಉತ್ತಮ ಮಾಹಿತಿಯಾಗಿದೆ ಎಂದರು.

ಕಂದಾಯ ಇಲಾಖೆಯಿಂದ ಸಾಮಾಜಿಕ ಭದ್ರತೆ ಪಿಂಚಣಿ ನೀಡುವ ಫಲಾನುಭವಿಗಳನ್ನು ಆಯ್ಕೆ ಮಾಡುವಲ್ಲಿ ಅವಶ್ಯಕವಾಗಿದ್ದು, ಅಲ್ಲದೇ ಬೆಳೆ ವಿಮೆ, ಬೆಂಬಲ ಬೆಲೆ ಯೋಜನೆಯಡಿ ಫಲಾನುಭವಿಗಳಾಗಲು ಮಾಹಿತಿಯು ಅವಶ್ಯಕವಾಗಿದೆ ಎಂದು ತಿಳಿಸಿದರು.

ರೈತರು ತಮ್ಮ ಜಮೀನಿನ ಎಲ್ಲಾ ಪಹಣಿಗಳಿಗೆ ಆಧಾರ್‌ ಸಂಖ್ಯೆ ಮತ್ತು ಬ್ಯಾಂಕ್‌ ವಿವರಗಳನ್ನು ಈ ಕೂಡಲೇ ಜೋಡಣೆ ಮಾಡಲು ಬೆಲೆ ಸಮೀಕ್ಷೆಗೆ ಆಯ್ಕೆಯಾದ ನಿಮ್ಮ ಗ್ರಾಮದ ಖಾಸಗಿ ನಿವಾಸಿಗಳಿಗೆ, ನಾಡ ಕಚೇರಿ ಅಥವಾ ರೈತ ಸಂಪರ್ಕ ಕೇಂದ್ರ ಅಥವಾ ರೇಷ್ಮೆ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆ ಅ ಧಿಕಾರಿಗಳನ್ನು ಸಂಪರ್ಕಿಸಬಹುದು ಎಂದರು.

ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಕಳಪೆ ಮಾದರಿಗಳನ್ನು ಮಾರಾಟ ಮಾಡಿದವರ ವಿರುದ್ಧ ಶೀಘ್ರ ಕ್ರಮಕೈಗೊಳ್ಳಬೇಕು ಎಂದು ಕೃಷಿ ಇಲಾಖೆ ಅ ಧಿಕಾರಿಗಳಿಗೆ ಜಿಲ್ಲಾ ಕಾರಿ ಕವಿತಾ ಎಸ್‌.ಮನ್ನಿಕೇರಿ ಸೂಚಿಸಿದರು.

ಕಳಪೆ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಮಾರಾಟ ಮಾಡಿದವರ ವಿರುದ್ಧ ಮೊಕದ್ದಮೆ ಹೂಡಿ, ಆದಷ್ಟು ಬೇಗ ಪ್ರಕ್ರಿಯೆ ಮುಗಿಸಿ ಕ್ರಮ ಕೈಗೊಳ್ಳಲು ಮುಂದಾಗಬೇಕು ಎಂದು ತಿಳಿಸಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ಸದಾಶಿವ ಮಾತನಾಡಿ, ಆಧಾರ್‌-ಪಹಣಿ ಜೋಡಣಿ ಆಂದೋಲನ ಕುರಿತು ವ್ಯಾಪಕ ಪ್ರಚಾರದ ಮೂಲಕ ರೈತರಿಗೆ ಜಾಗೃತಿ ಮೂಡಿಸಬೇಕು. ಜಿಲ್ಲೆಯಲ್ಲಿ ಆಧಾರ್‌-ಪಹಣಿ ಜೋಡಣಿ ಬಹಳ ಕಡಿಮೆ ಇದೆ. ಹಾಗಾಗಿ ಹೆಚ್ಚು ಆಸಕ್ತಿ ವಹಿಸಿ ಕಾರ್ಯನಿರ್ವಹಿಸಬೇಕು ಎಂದು ಕೃಷಿ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿ 2020-21ನೇ ಸಾಲಿಗೆ ಮುಂಗಾರು ಹಂಗಾಮಿನಲ್ಲಿ 51,827 ಟನ್‌ ರಸಗೊಬ್ಬರ ವಿತರಿಸಲಾಗಿದೆ. ಇದರಲ್ಲಿ ಯೂರಿಯಾ 18 ಸಾವಿರ ಟನ್‌, ಡಿಎಪಿ 10 ಸಾವಿರ ಟನ್‌ ಗೊಬ್ಬರ ವಿತರಿಸಲಾಗಿದ್ದು, ಅದರಲ್ಲಿ, ಚಳ್ಳಕೆರೆ ತಾಲೂಕಿನಲ್ಲಿ 15 ಸಾವಿರ ಟನ್‌ ಮತ್ತು ಚಿತ್ರದುರ್ಗ ತಾಲೂಕಿನಲ್ಲಿ 18 ಸಾವಿರ ಟನ್‌ ರಸಗೊಬ್ಬರ ವಿತರಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಇದನ್ನೂ ಓದಿ :5 ಜಿಪಂ ಸ್ಥಾನ ಹೆಚ್ಚಳ-17 ತಾಪಂ ಕ್ಷೇತ್ರ ಕಡಿಮೆ

ಪ್ರಧಾನ ಮಂತ್ರಿ ಫಸಲ್‌ ಬಿಮಾ ಯೋಜನೆಯಡಿ 2020-21ನೇ ಸಾಲಿನಲ್ಲಿ ನೀರಾವರಿ ಬೆಳೆ ನೋಂದಣಿಗೆ ಮಾರ್ಚ್‌ 1 ಕೊನೆಯ ದಿನವಾಗಿದೆ. ನೀರಾವರಿ ಬೆಳೆಗಳಾದ ಭತ್ತ, ರಾಗಿ, ಶೇಂಗಾ ಮತ್ತು ಸೂರ್ಯ ಕಾಂತಿ ಬೆಳೆಗಳ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ ಎಂದರು. ಅಪರ ಜಿಲ್ಲಾಧಿಕಾರಿ ಬಾಲಕೃಷ್ಣ, ಉಪವಿಭಾಗಾ ಧಿಕಾರಿ ಪ್ರಸನ್ನ, ಕೃಷಿ ಉಪನಿರ್ದೇಶರಾದ ಹುಲಿರಾಜ್‌, ಪ್ರಭಾಕರ್‌, ಕೃಷಿ ಸಂಬಂಧಿ ತ ಇಲಾಖೆಗಳಾದ ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಅರಣ್ಯ ಇಲಾಖೆ, ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು ಮತ್ತು ಜಿಲ್ಲಾ ಪರಿಕರ ಮಾರಾಟಗಾರರ ಅಧ್ಯಕ್ಷರು, ಬಿತ್ತನೆ ಬೀಜ ಸರಬರಾಜುದಾರರು,

ಕೆಎಸ್‌ಎಸ್‌ಸಿ, ಕೆಒಎಫ್‌, ಎನ್‌ಎಸ್‌ಸಿ ಮತ್ತು ಖಾಸಗಿ ಮಾರಾಟಗಾರರು ಸೇರಿದಂತೆ ರೈತ ಮುಖಂಡರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.