ಡಿಸಿ ಸೂಚನೆ: ನಗರಸಭೆಯಿಂದ ಅಕ್ರಮ ಗೂಡಂಗಡಿ ತೆರವು
Team Udayavani, Aug 4, 2017, 2:47 PM IST
ಚಿತ್ರದುರ್ಗ: ನಗರದ ರೋಟರಿ ಕ್ಲಬ್ ಮುಂಭಾಗದಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಗೂಡಂಗಡಿಗಳನ್ನು ಜಿಲ್ಲಾಧಿಕಾರಿಯವರ ಆದೇಶದ ಮೇರೆಗೆ ನಗರಸಭೆ ಸಿಬ್ಬಂದಿ ಗುರುವಾರ ತೆರವುಗೊಳಿಸಿದರು.
ನಗರದ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಕಳೆದ ಮೂರು ತಿಂಗಳ ಹಿಂದೆ ಏಕಾಏಕಿ ಅಕ್ರಮವಾಗಿ ಗೂಡಂಗಡಿಗಳು ತಲೆ ಎತ್ತಿದ್ದವು. ಈ ಬಗ್ಗೆ ಸಾರ್ವಜನಿಕರ ದೂರುಗಳು ಕೇಳಿಬಂದಿದ್ದವು. ರೋಟರಿ ಭವನ ಮುಂಭಾಗದ ರಸ್ತೆಯ ಅಕ್ಕ ಪಕ್ಕದಲ್ಲಿ ಹೆಚ್ಚಿನ ಜನಸಂದಣಿಯಿದ್ದು ಗೂಡಂಗಡಿಗಳಿಗೆ
ತೆರಳುವಾಗ ರಸ್ತೆಯಲ್ಲೇ ವಾಹನಗಳನ್ನು ನಿಲ್ಲಿಸಿ ಹೋಗುತ್ತಿದ್ದರಿಂದ ಸಾರ್ವಜನಿಕರು ದಿನ ನಿತ್ಯ ಕಿರಿಕಿರಿ ಅನುಭವಿಸುತ್ತಿದ್ದರು. ಅಲ್ಲದೆ ಈ ಜಾಗದಲ್ಲಿ ಒಂದು ಉದ್ಯಾನವನವಿದ್ದು ಅದನ್ನು ಸಂಪೂರ್ಣ ಮುಚ್ಚಿ ಹೋಗುವ ಮಾದರಿಯಲ್ಲಿ ಸಾಲಾಗಿ ಗೂಡಂಗಡಿಗಳು ತಲೆ ಎತ್ತಿದ್ದವು. ಜಿಲ್ಲಾಧಿಕಾರಿ ವಾಸಿರೆಡ್ಡಿ ವಿಜಯ ಜೋತ್ಸಾ° ಅಧಿಕಾರ ವಹಿಸಿಕೊಂಡ ಬಳಿಕ ನಗರ ಪ್ರದಕ್ಷಿಣೆ ಮಾಡಿದ್ದರು. ರಸ್ತೆ ಪಕ್ಕದಲ್ಲಿ ಅಕ್ರಮವಾಗಿ ನಿರ್ಮಿಸಿರುವ ಗೂಡಂಗಡಿಗಳನ್ನು ತೆರವುಗೊಳಿಸುವಂತೆ ಆದೇಶ ಹೊರಡಿಸಿದ್ದರು. ಇದರಿಂದ ಪುಟ್‌ಪಾತ್ ಮೇಲಿನ ಗೂಡಂಗಡಿಗಳ ತೆರವು ಕಾರ್ಯ
ಮುಂದುವರೆದಿದೆ.
ಜಿಲ್ಲಾಧಿಕಾರಿಯವರ ಕ್ರಮದಿಂದಾಗಿ ಜನರಿಗೆ ಪುಟ್‌ಪಾತ್‌ನಲ್ಲಿ ನಡೆದುಕೊಂಡು ಹೋಗಲು ಅನುಕೂಲವಾಗಿದೆ. ಅಲ್ಲದೆ ನಗರ ಸುಂದರವಾಗಿ ಕಾಣಲು ಸಹಕಾರಿಯಾಗಿದೆ. ಬೆಳಗ್ಗೆಯಿಂದಲೇ ನಗರಸಭೆ ಸಿಬ್ಬಂದಿಗಳು ಗೂಡಂಗಡಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಆರಂಭಿಸಿದರು.
ಸರ್ಕಾರಿ ಆಸ್ಪತ್ರೆಯ ಬಸ್‌ನಿಲ್ದಾಣದಿಂದ ತುರುವನೂರು ರಸ್ತೆ ಮಾರ್ಗವಾಗಿ ಆರ್‌ಟಿಒ ಕಚೇರಿ ಮುಂಭಾಗದಲ್ಲಿ ಸಾಕಷ್ಟು ಗೂಡಂಗಡಿಗಳಿವೆ. ಜಿಲ್ಲಾಧಿ ಕಾರಿಯವರು ಅಲ್ಲಿನ ಗೂಡಂಗಡಿಗಳನ್ನೂ ತೆರವುಗೊಳಿಸಿ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಪರ್ಯಾಯ ವ್ಯವಸ್ಥೆಗೆ ವ್ಯಾಪಾರಸ್ಥರ ಆಗ್ರಹ
ಚಿತ್ರದುರ್ಗ: ರೋಟರಿ ಕ್ಲಬ್ ಮುಂಭಾಗದಲ್ಲಿದ್ದ ಗೂಡಂಗಡಿಗಳನ್ನು ತೆರವುಗೊಳಿಸಿರುವುದನ್ನು ವಿರೋಧಿಸಿ ಹಾಗೂ ಪರ್ಯಾಯ ವ್ಯವಸ್ಥೆ ಮಾಡುವಂತೆ ಗೂಡಂಗಡಿಗಳ ಮಾಲೀಕರು ಜಿಲ್ಲಾಡಳಿತವನ್ನು ಒತ್ತಾಯಿಸಿದರು. ಜಿಲ್ಲಾಇಕಾರಿಯವರ ಸೂಚನಾದೇಶದ ಮೇರೆಗೆ ನಗರಸಭೆ ಸಿಬ್ಬಂದಿ ಗೂಡಂಗಡಿ ತೆರವು ಕಾರ್ಯಾಚರಣೆ ನಡೆಸಿದೆ. ಏಕಾಏಕಿ ತೆರವು ಕಾರ್ಯ ಮಾಡಿದ್ದರಿಂದ ಜೀವನ ನಿರ್ವಹಣೆಗೆ ಚಿಂತೆಯಾಗಿದೆ. ಪರ್ಯಾಯ ವ್ಯವಸ್ಥೆ ಕಲ್ಪಿಸಿ ತೆರವು ಕಾರ್ಯಕ್ಕೆ ಮುಂದಾಗಬೇಕಿತ್ತು ಎಂದು ಸಂತ್ರಸ್ತರು ಜಿಲ್ಲಾಧಿಕಾರಿಗಳ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದರು.
ಗೂಡಂಗಡಿಗಳಿಂದ ಬರುತ್ತಿದ್ದ ಆದಾಯದಲ್ಲಿ ಜೀವನ ಕಟ್ಟಿಕೊಂಡಿದ್ದೇವೆ. ಪದೇ ಪದೇ ಗೂಡಂಗಡಿಗಳ ತೆರವು ಕಾರ್ಯ ಮಾಡಿದರೆ ಹತ್ತಾರು ಸಾವಿರ ರೂ. ಗಳನ್ನು ಖರ್ಚು ಮಾಡಿ ಗೂಡಂಗಡಿಗಳನ್ನು ನಿರ್ಮಿಸಿರುತ್ತೇವೆ. ಈ ಸಾಲದ ಹೊರೆ, ಮಕ್ಕಳ ಶಿಕ್ಷಣ, ಕುಟುಂಬ ನಿರ್ವಹಣೆ
ಕಷ್ಟವಾಗಲಿದೆ ಎಂದು ನೋವು ತೋಡಿಕೊಂಡರು. ಜಿಲ್ಲಾ ಕೇಂದ್ರಕ್ಕೆ ಅದರಲ್ಲೂ ಜಿಲ್ಲಾಧಿಕಾರಿ ಕಚೇರಿ ವೃತ್ತ, ಕೋರ್ಟ್, ತಾಲೂಕು ಕಚೇರಿಗಳಿಗೆ ಪ್ರತಿದಿನ ಗ್ರಾಮೀಣ ಪ್ರದೇಶಗಳ ನೂರಾರು ಜನ ಆಗಮಿಸುತ್ತಾರೆ. ಕಡಿಮೆ ದರದಲ್ಲಿ ಅವರಿಗೆ ತಿಂಡಿ, ಊಟ ನೀಡುತ್ತೇವೆ. ಅಲ್ಪಸ್ವಲ್ಪ
ಹಣ ತರುವ ರೈತರು, ಬಡವರು ಬೀದಿ ಬದಿಯಲ್ಲೇ ಏನೋ ತಿಂದು ಹೋಗುತ್ತಾರೆ. ಇದಕ್ಕೆಲ್ಲ ಜಿಲ್ಲಾಡಳಿತ ಕಲ್ಲು ಹಾಕಿದೆ ಎಂದು ದೂರಿದರು.
ಗೂಡಂಗಡಿ ತೆರವು ಮಾಡುವುದು ಸುಲಭ. ಆದರೆ ಅದರ ಹಿಂದಿನ ಶ್ರಮ, ನೋವು, ನಲಿವುಗಳನ್ನು ಅರಿಯಬೇಕು. ಕಾನೂನು ರೀತ್ಯ ಜಾಗ ಗುರುತಿಸಿ ಅಂಗಡಿಗಳನ್ನು ಇಟ್ಟುಕೊಳ್ಳಲು ಅನುಕೂಲ ಮಾಡಿಕೊಡುವಂತೆ ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.