ಉತ್ತಮ ತರಬೇತಿಯಿಂದ ಅಪಘಾತಕ್ಕೆ ತಡೆ

ರಾಜ್ಯದ ವಿವಿಧೆಡೆ ಚಾಲಕರ ತರಬೇತಿ ಕೇಂದ್ರ ಸ್ಥಾಪನೆ!  ­ಸಾರಿಗೆ ಸಂಸ್ಥೆ ನೌಕರರ ತರಕ್ಷಣೆಗೆ ಬದ್ಧ: ಡಿಸಿಎಂ ಸವದಿ

Team Udayavani, Mar 22, 2021, 9:32 PM IST

laxman savadi

ಚಿತ್ರದುರ್ಗ: ಅಪಘಾತಗಳ ಪ್ರಮಾಣ ಕಡಿಮೆಯಾಗಲು ಚಾಲಕರಿಗೆ ಉತ್ತಮ ತರಬೇತಿ ಅಗತ್ಯ ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದರು.

ಹೊಳಲ್ಕೆರೆ ತಾಲೂಕಿನ ಬಸಾಪುರ ಬಳಿ ಭಾನುವಾರ ಕೆಎಸ್‌ಆರ್‌ಟಿಸಿ ಚಿತ್ರದುರ್ಗ ವಿಭಾಗದಿಂದ ಹಮ್ಮಿಕೊಂಡಿದ್ದ ಚಾಲಕರ ತರಬೇತಿ ಕೇಂದ್ರದ ಉದ್ಘಾಟನೆ ಹಾಗೂ ನೂತನ ಬಸ್‌ ಘಟಕದ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ದೇಶದಲ್ಲಿ ಪ್ರತಿ ವರ್ಷ 1.50 ಲಕ್ಷ ಜನ ರಸ್ತೆ ಅಪಘಾತದಲ್ಲಿ ಅಸುನೀಗುತ್ತಿದ್ದಾರೆ. ಹಾಗಾಗಿ ಚಾಲಕ ರಿಗೆ ಉತ್ತಮ ತರಬೇತಿ ನೀಡಿದರೆ ಅಪಘಾತ ಸಂಖ್ಯೆ ಕಡಿಮೆಯಾಗಲಿದೆ. ಈ ನಿಟ್ಟಿನಲ್ಲಿ ಬೆಂಗಳೂರು, ಹುಬ್ಬಳ್ಳಿ, ಚಿತ್ರದುರ್ಗ, ದಾವಣಗೆರೆ ಮತ್ತಿತರ ಕಡೆಗಳಲ್ಲಿ ಚಾಲಕರ ತರಬೇತಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದರು. ಕೊರೊನಾದಿಂದಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಬಹಳಷ್ಟು ತೊಂದರೆಯಾಯಿತು. ವಿಶೇಷವಾಗಿ ಸಾರಿಗೆ ಇಲಾಖೆಗೆ ಹೆಚ್ಚಿನ ತೊಂದರೆಯಾಗಿದೆ. ಎರಡು ತಿಂಗಳ ಲಾಕ್‌ಡೌನ್‌ ಭಾರೀ ಸಂಕಷ್ಟ ತಂದೊಡ್ಡಿತು. ಸಾರಿಗೆ ಇಲಾಖೆಯ ವ್ಯಾಪ್ತಿಯಲ್ಲಿ ನಾಲ್ಕು ನಿಗಮಗಳಿದ್ದು, 1.30ಲಕ್ಷ ಸಿಬ್ಬಂದಿ ಇದ್ದಾರೆ. ವರ್ಷಕ್ಕೆ ನಾಲ್ಕು ಸಾವಿರ ಕೋಟಿ ಆದಾಯದ ನಿರೀಕ್ಷೆ ಇತ್ತು. ಇದು ಸಂಪೂರ್ಣ ನಿಂತು ಹೋಯಿತು. ಸುಮಾರು ಮೂರು ಸಾವಿರ ಕೋಟಿಯಷ್ಟು ನಷ್ಟ ಅನುಭವಿಸಬೇಕಾಯಿತು. ಈ ಪರಿಸ್ಥಿತಿಯಲ್ಲಿ ಸಾರಿಗೆ ಸಿಬ್ಬಂದಿ ಆತಂಕಕ್ಕೆ ಒಳಗಾದರು. ಆದರೆ ಸರ್ಕಾರದಿಂದ 1900 ಕೋಟಿ ರೂ. ಪಡೆದು ಎಲ್ಲಾ ಸಿಬ್ಬಂದಿಗಳಿಗೆ ಒಂದು ರೂಪಾಯಿಯನ್ನೂ ಕಡಿತ ಮಾಡದೆ ವೇತನ ನೀಡಲಾಗಿದೆ. ಈಗ ಬರುತ್ತಿರುವ ಆದಾಯ ಇಂಧನ ತುಂಬಿಸಲೂ ಸಾಕಾಗುತ್ತಿಲ್ಲ ಎಂದರು.

ನಿಗಮಗಳನ್ನು ಲಾಭದತ್ತ ಮುನ್ನಡೆಸುವ ಗುರಿ: ಸಾರಿಗೆ ಇಲಾಖೆಯ ನಾಲ್ಕು ನಿಗಮಗಳನ್ನು ಸದೃಢಗೊಳಿಸುವ ಅಗತ್ಯವಿದೆ. ನಿಗಮದ ನೌಕರರು ಆತಂಕಕ್ಕೆ ಒಳಗಾಗಬಾರದು. ಮುಂದಿನ ದಿನಮಾನಗಳಲ್ಲಿ ನಾಲ್ಕು ನಿಗಮಗಳನ್ನು ಹಾನಿಯಿಂದ ಹೊರಗಡೆ ತಂದು ಲಾಭದಾಯಕ ನಿಗಮಗಳನ್ನಾಗಿ ಮಾಡುವುದರ ಜೊತೆಗೆ ಸಾರಿಗೆ ನೌಕರರ ಭಾವನೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಲಾಗುವುದು ಎಂದರು. ಹೊಳಲ್ಕೆರೆ ಶಾಸಕ ಹಾಗೂ ಕೆಎಸ್‌ಆರ್‌ಟಿಸಿ ಅಧ್ಯಕ್ಷ ಎಂ. ಚಂದ್ರಪ್ಪ ಮಾತನಾಡಿ, ಚಾಲಕರ ತರಬೇತಿ ಕೇಂದ್ರದ ಎದುರಿನಲ್ಲಿ ಬಸ್‌ ಡಿಪೋ ನಿರ್ಮಾಣಕ್ಕೆ ಆರು ಎಕರೆ ಜಮೀನು ನೀಡಲಾಗಿದೆ. ಈಗಾಗಲೇ ಹಣ ಬಿಡುಗಡೆ ಮಾಡಲಾಗಿದೆ. ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಬಸ್‌ ಡಿಪೋದಲ್ಲೂ ಕೆಲಸ ಮಾಡುವ ಅವಕಾಶ ಸಿಗಬೇಕು ಎಂದು ಉದ್ದೇಶವಿದೆ ಎಂದರು.

ಕುಡಿಯುವ ನೀರಿಗಾಗಿ ಸರ್ಕಾರ 319 ಕೋಟಿ ರೂ. ಅನುದಾನ ನೀಡಿದೆ. ಚಿಕ್ಕಜಾಜೂರು ಪಕ್ಕದ ಕೋಟಿಹಾಳ್‌ ಹತ್ತಿರ 250 ಕೋಟಿ ರೂ. ವೆಚ್ಚವದಲ್ಲಿ 220 ಮೆಗಾ ವ್ಯಾಟ್‌ವಿದ್ಯುತ್‌ ಸರಬರಾಜು ಮಾಡುವ ಕೆಲಸ ನಡೆದಿದೆ. ತಾಲೂಕಿನ ಎಲ್ಲ ಕೆರೆಗಳಿಗೆ ಮುಂದಿನ ದಿನಗಳಲ್ಲಿ ನೀರು ತುಂಬಿಸುವ ಕೆಲಸವಾಗಲಿದೆ ಎಂದರು. ಕೆಎಸ್‌ಆರ್‌ಟಿಸಿ ಚಿತ್ರದುರ್ಗ ವಿಭಾಗದ ವಿಭಾಗೀಯ ನಿಯಂತ್ರಣಾ ಧಿಕಾರಿ ಜಿ. ವಿಜಯಕುಮಾರ್‌ ಮಾತನಾಡಿ, ಜಿಲ್ಲೆಯಲ್ಲಿ ವಿಭಾಗ ಪ್ರಾರಂಭವಾದ ನಂತರ ಸುಮಾರು 295 ಬಸ್ಸುಗಳಲ್ಲಿ 260 ಬಸ್ಸುಗಳು ಕಾರ್ಯಾಚರಣೆ ಮಾಡುತ್ತಿವೆ. ಸುಮಾರು 75 ಸಾವಿರ ಜನರಿಗೆ ಸಾರಿಗೆ ಸೌಲಭ್ಯ ನೀಡಲಾಗುತ್ತಿದೆ. ಚಾಲಕರ ತರಬೇತಿ ಕೇಂದ್ರ 9.36 ಎಕರೆ ವಿಸ್ತೀರ್ಣ ಹೊಂದಿದ್ದು, 16 ಕೋಟಿ ರೂ. ವೆಚ್ಚದಲ್ಲಿ ತರಬೇತಿ ಕೇಂದ್ರ ನಿರ್ಮಾಣ ಮಾಡಲಾಗಿದೆ. ಇಲ್ಲಿ ಪ್ರತಿ ತಿಂಗಳು ಭಾರೀ ವಾಹನ ಹಾಗೂ ಲಘು ವಾಹನ ತರಬೇತಿ ಕಾರ್ಯಕ್ರಮಗಳನ್ನು ಉಚಿತವಾಗಿ ನೀಡಲಾಗುತ್ತಿದೆ ಎಂದರು.

ಜಿ.ಪಂ ಅಧ್ಯಕ್ಷೆ ಶಶಿಕಲಾ ಸುರೇಶ್‌ಬಾಬು, ಖನಿಜ ನಿಗಮದ ಅಧ್ಯಕ್ಷ ಎಸ್‌. ಲಿಂಗಮೂರ್ತಿ, ತಾಪಂ ಅಧ್ಯಕ್ಷೆ ಸುಜಾತಾ ಧನಂಜಯ ನಾಯ್ಕ, ಜಿಪಂ ಸದಸ್ಯರಾದ ಕೆ.ಸಿ. ಮಹೇಶ್ವರಪ್ಪ, ತಿಪ್ಪೇಸ್ವಾಮಿ, ಕೆಎಸ್‌ಆರ್‌ಟಿಸಿ ಎಂಡಿ ಶಿವಯೋಗಿ ಕಳಸದ ಮತ್ತಿತರರು ಭಾಗವಹಿಸಿದ್ದರು.

 

ಟಾಪ್ ನ್ಯೂಸ್

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Gangolli, Ajekaru; ಮಹಿಳೆಯರಿಗೆ ಜೀವ ಬೆದರಿಕೆ

death

Belthangady : ಸೊಪ್ಪು ತರಲು ಹೋಗಿದ್ದ ವ್ಯಕ್ತಿ ಆಕಸ್ಮಿಕ ಸಾ*ವು

baby

Sullia: ಒಂಟಿಯಾಗಿ ಪತ್ತೆಯಾದ ಮಗು ಪೋಷಕರ ಮಡಿಲಿಗೆ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

suicide (2)

Manipal: ಬಾವಿಗೆ ಬಿದ್ದು ಕಾರ್ಮಿಕ ಸಾ*ವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police crime

Gangolli, Ajekaru; ಮಹಿಳೆಯರಿಗೆ ಜೀವ ಬೆದರಿಕೆ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

death

Belthangady : ಸೊಪ್ಪು ತರಲು ಹೋಗಿದ್ದ ವ್ಯಕ್ತಿ ಆಕಸ್ಮಿಕ ಸಾ*ವು

baby

Sullia: ಒಂಟಿಯಾಗಿ ಪತ್ತೆಯಾದ ಮಗು ಪೋಷಕರ ಮಡಿಲಿಗೆ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.