ಸಂತ್ರಸ್ತರಿಗೆ ಸಕಾಲದಲ್ಲಿ ಸೌಲಭ್ಯ ತಲುಪಿಸಿ: ಡಿಸಿ ಕವಿತಾ
Team Udayavani, Jul 17, 2021, 12:08 PM IST
ಚಿತ್ರದುರ್ಗ: ಕೋವಿಡ್-19ರ ನೆಪ ಹೇಳದೆ ದೌರ್ಜನ್ಯ ಪ್ರಕರಣಗಳಲ್ಲಿ ನೊಂದಿರುವ ಸಂತ್ರಸ್ತರಿಗೆ ಸಕಾಲದಲ್ಲಿ ಸೌಲಭ್ಯ ತಲುಪಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ 2021ನೇ ಸಾಲಿನ 3ನೇ ತ್ತೈಮಾಸಿಕಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲೆ ನಡೆದ ದೌರ್ಜನ್ಯ ಪ್ರಕರಣಗಳಲ್ಲಿ ನೊಂದಿರುವ ಸಂತ್ರಸ್ತರಿಗೆ ಪರಿಹಾರ,ಪುನರ್ವಸತಿ ಸೇರಿದಂತೆ ಸರ್ಕಾರದ ಸೌಲಭ್ಯತಲುಪಿಸಲು ವಿಳಂಬ ಮಾಡದೇ ಸಕಾಲದಲ್ಲಿ ಸೌಲಭ್ಯ ತಲುಪಿಸಬೇಕು ಎಂದು ತಾಕೀತು ಮಾಡಿದರು.
ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಸಿದ್ದಮ್ಮ ಹಾಗೂ ಅರುಣಕುಮಾರ್ ಮಾತನಾಡಿ, ಭರಮಸಾಗರ ಹೋಬಳಿಯ ಇಸಾಮುದ್ರ ಗೊಲ್ಲರಹಟ್ಟಿಯಲಂಬಾಣಿಹಟ್ಟಿಯಲ್ಲಿ ಈಚೆಗೆ ವಿಷಾಹಾರಸೇವನೆಯಿಂದ ಮೃತಪಟ್ಟವರಿಗೆ ತಲಾ 5 ಲಕ್ಷರೂ. ಪರಿಹಾರ ಮಂಜೂರು ಮಾಡುವಂತೆ ಸಭೆಯ ಗಮನಕ್ಕೆ ತಂದರು.
ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಮಾಹಿತಿ ಸಂಗ್ರಹಿಸಲಾಗಿದ್ದು, ಪ್ರಯೋಗಾಲಯದವರದಿ ಹಾಗೂ ಪೊಲೀಸ್ ವರದಿ ಬಂದ ನಂತರವಿಶೇಷ ಪ್ರಕರಣ ಎಂದು ಪರಿಗಣಿಸಿ ಪರಿಹಾರ ಮಂಜೂರಾತಿಗೆ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ತಿಳಿಸಿದರು.
88.64 ಲಕ್ಷ ರೂ. ಪರಿಹಾರ: 2021ನೇ ಸಾಲಿನಲ್ಲಿ ದೌರ್ಜನ್ಯ ನಿಯಂತ್ರಣ ಕಾಯ್ದೆ 1989ರ ಅಡಿಯಲ್ಲಿ 2021ರ ಫೆಬ್ರವರಿ 01 ರಿಂದ ಜೂ.30 ರವರೆಗೆ ಒಟ್ಟು 27 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, ದೌರ್ಜನ್ಯಪ್ರಕರಣಗಳಿಗೆ ಸಂಬಂಧಪಟ್ಟಂತೆ ಒಟ್ಟು 88.64 ಲಕ್ಷ ರೂ. ಪರಿಹಾರ ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಉಪನಿರ್ದೇಶಕರಾದ ಮಮತಾ ಸಭೆಗೆ ಮಾಹಿತಿ ನೀಡಿದರು.
3 ಕೊಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ 12.37 ಲಕ್ಷ ರೂ. ಪರಿಹಾರ ಧನ ನೀಡಲಾಗಿದೆ. 1 ಅತ್ಯಾಚಾರ ಮತ್ತು 2 ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ 4 ಲಕ್ಷ ರೂ. ಪರಿಹಾರ ಧನ ನೀಡಲಾಗಿದೆ. 18 ಜಾತಿ ನಿಂದನೆ, ಇತರೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 14.25 ಲಕ್ಷ ರೂ. ಪರಿಹಾರ ಧನ ಮಂಜೂರು ಮಾಡಲಾಗಿದೆ. 3 ಪರಿಹಾರ, ಪುನರ್ವಸತಿಗೆ ಸಂಬಂಧಿಸಿದಂತೆ 58.01 ಲಕ್ಷ ರೂ. ಪರಿಹಾರ ಧನ ಮಂಜೂರು ಮಾಡಲಾಗಿದೆ. ವಿಶೇಷ ಜಿಲ್ಲಾ ಸತ್ರ ನ್ಯಾಯಾಲಯ ಹಾಗೂ ವಿಶೇಷ ಸರ್ಕಾರಿ ಅಭಿಯೋಜಕರ ಕಚೇರಿಯಲ್ಲಿ2021ರ ಜನವರಿ 01 ರಿಂದ ಜೂನ್ 30 ರವರೆಗೆಹಿಂದಿನ ಬಾಕಿ ಇದ್ದ 62 ಪ್ರಕರಣಗಳು, ಜೂನ್‌ಮಾಹೆಯ 04 ಪ್ರಕರಣಗಳು ಸೇರಿದಂತೆ ಒಟ್ಟು66 ಪ್ರಕರಣಗಳು ಬಾಕಿ ಉಳಿದಿವೆ ಎಂದು ಸಭೆಗೆ ತಿಳಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಾಗುವ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಪ್ರತ್ಯೇಕ ನ್ಯಾಯಾಲಯಕ್ಕೆ ಸರ್ಕಾರಕ್ಕೆ ಪ್ರಸ್ತಾವನೆಸಲ್ಲಿಸಲಾಗಿದ್ದು, ಇಲಾಖೆ ಹಾಗೂ ಸರ್ಕಾರದಪ್ರಕ್ರಿಯೆ ಹಂತದಲ್ಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಮಮತಾ ತಿಳಿಸಿದರು.
ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಎಸ್‌ಪಿ ಜಿ.ರಾಧಿಕಾ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಭಕ್ತಪ್ರಹ್ಲಾದ್, ರಾಜಣ್ಣ, ಪೋಲಯ್ಯ, ಗೌರಮ್ಮ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.