Chitradurga; 4860 ಕೋಟಿ ರೂ. ಬೆಳೆ ಪರಿಹಾರಕ್ಕಾಗಿ ಕೇಂದ್ರಕ್ಕೆ ಒತ್ತಾಯ: ಸಿದ್ದರಾಮಯ್ಯ
Team Udayavani, Oct 6, 2023, 2:41 PM IST
ಚಿತ್ರದುರ್ಗ: ರಾಜ್ಯದಲ್ಲಿ ಬರಪರಿಸ್ಥಿತಿಯಿಂದ ವಾಸ್ತವಿಕವಾಗಿ ಸುಮಾರು 30 ಸಾವಿರ ಕೋಟಿ ರೂ. ಬೆಳೆಹಾನಿಯಾಗಿದೆ. ಎನ್ ಡಿಆರ್ ಎಫ್ ಮಾರ್ಗಸೂಚಿಯಂತೆ 4860 ಕೋಟಿ ರೂ. ಪರಿಹಾರವನ್ನು ಕೋರಲಾಗಿದ್ದು, ಈ ಮೊತ್ತವನ್ನು ಬಿಡುಗಡೆ ಮಾಡಬೇಕೆಂದು ಕೇಂದ್ರವನ್ನು ಒತ್ತಾಯಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಚಿತ್ರದುರ್ಗದ ಮುರುಘಾ ಮಠದ ಆವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಜ್ಯದ ಬರಪರಿಸ್ಥಿತಿಯ ಅಧ್ಯಯನಕ್ಕಾಗಿ ಕೇಂದ್ರ ಬರ ಅಧ್ಯಯನ ತಂಡ ಆಗಮಿಸಿರುವ ಬಗ್ಗೆಪ್ರತಿಕ್ರಿಯೆ ನೀಡುತ್ತಾ, ಕೇಂದ್ರದ ಅಧ್ಯಯನ ತಂಡಕ್ಕೆ ರಾಜ್ಯದಲ್ಲಿ ತಲೆದೋರಿರುವ ಬರಪರಿಸ್ಥಿತಿಯ ವಸ್ತುಸ್ಥಿತಿಯನ್ನು ಈಗಾಗಲೇ ವಿವರಿಸಲಾಗಿದೆ. ಒಟ್ಟು 236 ತಾಲ್ಲೂಕುಗಳಲ್ಲಿ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಸುಮಾರು 30 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಬೆಳೆಹಾನಿ ಸಂಭವಿಸಿದೆ. 42 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸುಮಾರು ಶೇ. 52 ರಷ್ಟು ಬೆಳೆಹಾನಿಯಾಗಿದೆ. ಕೃಷ್ಣಾ ಮೇಲ್ದಂಡೆ ಹಾಗೂ ನಾರಾಯಣಪುರ ಜಲಾಶಯಗಳನ್ನು ಹೊರತುಪಡಿಸಿ, ಕಾವೇರಿ ಸೇರಿದಂತೆ ಇನ್ನುಳಿದ ಜಲಾನಯನ ಪ್ರದೇಶಗಳಲ್ಲಿ ನೀರಿರುವುದಿಲ್ಲ. ಕೇಂದ್ರದ ಮಾರ್ಗಸೂಚಿಯಂತೆ 4860 ಕೋಟಿ ರೂ.ಗಳ ಪರಿಹಾರವನ್ನು ಕೇಂದ್ರದಿಂದ ಕೋರಲಾಗಿದೆ. ಈ ಬಾರಿ ಹಸಿರು ಬರ ಉಂಟಾಗಿದೆ. ಕೇಂದ್ರದ ಅಧ್ಯಯನ ತಂಡ ಮೂರು ತಂಡಗಳಲ್ಲಿ ರಾಜ್ಯದ 11 ಜಿಲ್ಲೆಗಳಿಗೆ ಭೇಟಿ ನೀಡುತ್ತಿದೆ. ಅವರು ಕೇಂದ್ರಕ್ಕೆ ವರದಿ ಸಲ್ಲಿಸಿದ ನಂತರ, ವರದಿ ಆಧರಿಸಿದಂತೆ ಕೇಂದ್ರ ಪರಿಹಾರ ನೀಡಲಿದೆ ಎಂದು ತಿಳಿಸಿದರು.
ಭದ್ರಾ ಮೇಲ್ದಂಡೆ ಯೋಜನೆಗೆ ಪ್ರಾಧಾನ್ಯತೆ : ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನದಲ್ಲಿನ ವಿಳಂಬವಾಗುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಹಿಂದಿನ ಸರ್ಕಾರದವರು ಈ ಯೋಜನೆಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ಯೋಜನೆಯೆಂದು ಘೋಷಿಸಿ, 5300 ಕೋಟಿ ರೂ. ಬಿಡುಗಡೆ ಮಾಡಲಿದೆ ಎಂದಿದ್ದರು. ಆದರೆ ಇದುವರೆಗೆ ಕೇಂದ್ರದಿಂದ ಯಾವುದೇ ಹಣ ಬಿಡುಗಡೆಯಾಗಿಲ್ಲ. ಈ ಮೊತ್ತವನ್ನು ಆದಷ್ಟು ಬೇಗನೆ ಬಿಡುಗಡೆಗೊಳಿಸುವಂತೆ ಕೇಂದ್ರಕ್ಕೆ ಮತ್ತೊಮ್ಮೆ ಕೋರಲಾಗಿದೆ. ನಮ್ಮ ಸರ್ಕಾರವು ನೀರಾವರಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುತ್ತದೆ. ಕೃಷ್ಣಾ ಮೇಲ್ದಂಡೆ ಯೋಜನೆಗೆ ವಿಶೇಷ ಪ್ರಾಧಾನ್ಯತೆ ನೀಡಲಾಗುವುದು. ಪ್ರಸಕ್ತ ವರ್ಷ ಹಾಗೂ ಮುಂದಿನ ವರ್ಷವೂ ಕೂಡ ಈ ಯೋಜನೆಗೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದರು.
7ನೇ ವೇತನ ಆಯೋಗದ ಅಧ್ಯಕ್ಷರೊಂದಿಗೆ ಮಾತನಾಡಿದ್ದು, ವರದಿ ಸಲ್ಲಿಕೆಯಾದ ನಂತರ ತೀರ್ಮಾನ ಕೈಗೊಳ್ಳಲಾಗುವುದು. ನಿಗಮ ಮಂಡಳಿಗಳ ಅಧ್ಯಕ್ಷರನ್ನು ನೇಮಕ ಮಾಡಲಾಗುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.