ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ


Team Udayavani, Nov 24, 2018, 12:21 PM IST

vij-1.jpg

ನಾಲತವಾಡ: ಇಲ್ಲಿನ ಪಟ್ಟಣ ಪಂಚಾಯತ್‌ನಲ್ಲಿ ವಸತಿ ಯೋಜನೆ ಅಡಿ ಹಗರಣ ನಡೆದಿದ್ದು ಕೂಡಲೇ ಆಯ್ಕೆ ಪಟ್ಟಿ ರದ್ದುಪಡಿಸಿ ಹೊಸದಾಗಿ ಆಯ್ಕೆ ಪ್ರಕ್ರಿಯೆ ನಡೆಸಿ ಅರ್ಹರಿಗೆ ಮನೆ ಹಂಚಿಕೆ ನಡೆಸುವುದು ಸೇರಿದಂತೆ ಕೆಲ ಪ್ರಮುಖ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಪಂ ಕಚೇರಿ ಎದುರು ಯುವಜನ ಸೇನೆ ಸಂಘಟನೆ ನಡೆಸುತ್ತಿರುವ ಧರಣಿ ಸತ್ಯಾಗ್ರಹ ಶುಕ್ರವಾರ ಎರಡು ದಿನ ಪೂರೈಸಿದೆ. ಶನಿವಾರದಿಂದ ಬೇಡಿಕೆ ಈಡೇರುವರೆಗೆ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲು ಸಂಘಟನೆ ಪದಾಧಿಕಾರಿಗಳು, ಸದಸ್ಯರು ತೀರ್ಮಾನಿಸಿದ್ದಾರೆ.

2017-18ನೇ ಸಾಲಿನ ಶಾಸಕರ ವಾಜಪೇಯಿ ನಗರ ವಸತಿ ಯೋಜನೆಯ 300 ಆಸರೆ ಮನೆಗಳ ವಿತರಣೆಯನ್ನು ಕಾನೂನು ಬಾಹೀರವಾಗಿ ನಡೆಸಲಾಗಿದೆ. ಕೆಲ ಸದಸ್ಯರೇ ಹಣ ಪಡೆದು ತಮಗೆ ಬೇಕಾದವರಿಗೆ ಮನೆ ಹಾಕಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಅದನ್ನು ಮರುಪರಿಶೀಲನೆ ಮಾಡಿ ಅರ್ಹರಿಗೆ ಮಾತ್ರ ಮನೆ ಒದಗಿಸಿಕೊಡಬೇಕು.
 
ಅಲ್ಲಿವರೆಗೂ ಈಗ ನಡೆಸಲಾಗುತ್ತಿರುವ ಜಿಪಿಎಸ್‌ ಕಾರ್ಯ ಸ್ಥಗಿತಗೊಳಿಸಬೇಕು. ಅವ್ಯವಹಾರದಲ್ಲಿ ಭಾಗಿಯಾಗಿರುವ ಮುಖ್ಯಾಧಿಕಾರಿ ಮಾರುತಿ ನಡುವಿನಕೇರಿ ಅವರನ್ನು ಅಮಾನತು ಮಾಡಬೇಕು. ಅಕ್ರಮವಾಗಿ ಹಣ ಪಡೆದ ಸದಸ್ಯರ ಸದಸ್ಯತ್ವ ಅನರ್ಹಗೊಳಿಸಬೇಕು. ಮಹಿಳೆಯರಿಗೆ ಶೌಚಾಲಯ ನಿರ್ಮಿಸಬೇಕು. ಪ್ರತಿ ವಾರ್ಡುಗಳಲ್ಲಿ ಶುದ್ಧ ಕುಡಿವ ನೀರಿನ ಘಟಕ ಸ್ಥಾಪಿಸಬೇಕು. ಯಾವುದಾದರೂ ವೃತ್ತವೊಂದರಲ್ಲಿ ಶರಣ ವೀರೇಶ್ವರರ ಪುತ್ಥಳಿ ನಿರ್ಮಿಸಬೇಕು. ಬೀದಿ ದೀಪ ಅಳವಡಿಸಬೇಕು. ಆರೋಗ್ಯ ಕೇಂದ್ರಕ್ಕೆ ತಜ್ಞ ವೈದ್ಯರ ನೇಮಿಸಬೇಕು ಮುಂತಾದ ಬೇಡಿಕೆ ಇಟ್ಟು ಧರಣಿ ನಡೆಸಲಾಗುತ್ತಿದೆ. 

ಶಾಸಕರ ಬೆಂಬಲಿಗರ ಕೈವಾಡ ಆರೋಪ: ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಸಂಘಟನೆ ಅಧ್ಯಕ್ಷ ಶಿವಾನಂದ ವಾಲಿ, ಶಾಸಕರ ಕೆಲ ಬೆಂಬಲಿಗರೆ ಅಕ್ರಮವಾಗಿ ಹಣ ವಸೂಲಿ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬರುತ್ತಿದೆ. ಇದು ಶಾಸಕರ ಹೆಸರಿಗೆ ಕಳಂಕ ತರುವಂಥದ್ದಾಗಿದೆ.

ಶಾಸಕರು ಈ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಿ ತಪ್ಪಿತಸ್ಥ ಬೆಂಬಲಿಗರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಲ್ಲದೆ ಮನೆ ವಿತರಿಸುವ ಕಮೀಟಿ ಅಧ್ಯಕ್ಷರು ಶಾಸಕರೇ ಆಗಿದ್ದು ಅರ್ಹರಿಗೆ ಮಾತ್ರ ಮನೆ ವಿತರಣೆ ಆಗುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಮಾತುಕತೆ ವಿಫಲ: ಧರಣಿ ವಿಷಯ ತಿಳಿದು ಮುದ್ದೇಬಿಹಾಳ ಪೊಲೀಸ್‌ ಠಾಣೆ ಪಿಎಸೈ ಮಲ್ಲಪ್ಪ ಮಡ್ಡಿ ಸ್ಥಳಕ್ಕೆ ಭೇಟಿ ನೀಡಿ ಅಹವಾಲು ಆಲಿಸಿದರು. ಬೇಡಿಕೆಗಳ ಕುರಿತ ಮನವಿ ಸಲ್ಲಿಸಿದಲ್ಲಿ ಅದನ್ನು ಸಂಬಂಧಿಸಿದವರಿಗೆ ರವಾನಿಸಿ ಬೇಡಿಕೆ ಈಡೇರಿಕೆ ನಿಟ್ಟಿನಲ್ಲಿ ಪ್ರಯತ್ನಿಸಲಾಗುತ್ತದೆ. 

ಅಲ್ಲಿತನಕ ಧರಣಿ ಕೈಬಿಡುವಂತೆ ಮನವಿ ಮಾಡಿಕೊಂಡರು. ಇದನ್ನೊಪ್ಪದ ಧರಣಿ ನಿರತರು ವಿಜಯಪುರ ಜಿಲ್ಲಾಧಿಕಾರಿಗಳು, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿಗಳು ಹಾಗೂ ಸ್ಥಳೀಯ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಕ್ರಮ ಕೈಗೊಳ್ಳುವವರೆಗೆ ಧರಣಿ ಮುಂದುವರಿಸುತ್ತೇವೆ ಎಂದು ತಿಳಿಸಿದರು.

ಮುತ್ತು ಹೊಸಮಠ, ಸಂಗಮೇಶ ಕೆಂಭಾವಿ, ಮಲ್ಲಿಕಾರ್ಜುನ ಕೆಂಭಾವಿ, ಮಾಳಿಂಗರಾಯ ವನಹಳ್ಳಿ, ಅಮರೇಶ ಲೊಟಗೇರಿ, ರಮೇಶ ಗಂಗನಗೌಡರ, ವರುಣಗೌಡ ಗಂಗನಗೌಡರ, ಮಹಾಂತೇಶ ಹೆಸರೂರ, ಗಂಗು ಜೋಗಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

1(3)

World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್‌ 17

1

Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.