ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೀದಿಗಿಳಿದರು.

Team Udayavani, Feb 12, 2019, 10:23 AM IST

cta-6.jpg

ಚಿತ್ರದುರ್ಗ: ಸಮಾನ ಕೆಲಸಕ್ಕೆ ಸಮಾನ ವೇತನ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಎಐಟಿಯುಸಿ ಹಾಗೂ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್‌ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.

ದಾವಣಗೆರೆ ರಸ್ತೆಯಲ್ಲಿರುವ ಕಮ್ಯೂನಿಸ್ಟ್‌ ಪಕ್ಷದ ಕಾರ್ಯಾಲಯದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಂಗನವಾಡಿ ಕಾರ್ಯಕರ್ತೆಯರಿಗೆ ಕಡಿಮೆ ವೇತನ ನೀಡುತ್ತಿವೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಕನಿಷ್ಠ ವೇತನ ತಿಂಗಳಿಗೆ ಹದಿನೆಂಟು ಸಾವಿರ ರೂ. ನಿಗದಿಪಡಿಸಬೇಕು. ಕಾರ್ಯಕರ್ತೆಯರಿಗೆ 6000 ಮತ್ತು ಸಹಾಯಕಿಯರಿಗೆ 3000 ರೂ. ಪಿಂಚಣಿ ನೀಡುವ ಯೋಜನೆ ಜಾರಿಯಾಗಬೇಕು. ಸೇವಾ ಹಿರಿತನದ ಆಧಾರದ ಮೇಲೆ ವೇತನವನ್ನು ಹೆಚ್ಚಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಘೋಷಣೆ ಮಾಡಿರುವ ಗೌರವಧನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಇಎಸ್‌ಐ ಮತ್ತು ಪಿಎಫ್‌ ಜಾರಿ ಮಾಡಬೇಕು ಎಂದು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಸಿ. ಸುರೇಶ್‌ಬಾಬು ಮಾತನಾಡಿ, ಹತ್ತಾರು ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕನಿಷ್ಠ ವೇತನ, ಕೆಲಸದ ಭದ್ರತೆ, ಪಿಂಚಣಿ, ಇಎಸ್‌ಐ,

ಭವಿಷ್ಯ ನಿಧಿ ಸೇಇದಂತೆ ಯಾವುದೇ ಸವಲತ್ತುಗಳಿಲ್ಲದೆ ದುಡಿಯುತ್ತಿದ್ದಾರೆ. 2011ರಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ ಗೌರವಧನ ಹೆಚ್ಚಳ ಮಾಡಿರುವುದನ್ನು ಬಿಟ್ಟರೆ ಇದುವರೆಗೂ ಯಾವುದೇ ಸರ್ಕಾರಗಳು ಗೌರವಧನವನ್ನು ಹೆಚ್ಚಿಸಿಲ್ಲ. ಕಾರ್ಯಕರ್ತೆಯರು ಮಾಸಿಕ ಮೂರು ಸಾವಿರ ರೂ. ಹಾಗೂ ಸಹಾಯಕಿಯರು 1500 ರೂ.ಗಳಿಗೆ ಕಳೆದ ಒಂಭತ್ತು ವರ್ಷಗಳಿಂದ ದುಡಿಯುತ್ತಿದ್ದಾರೆ. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಕಳೆದ ನಾಲ್ಕೂವರೆ ವರ್ಷಗಳಿಂದ ನಯಾಪೈಸೆ ಜಾಸ್ತಿ ಮಾಡಿಲ್ಲ. ಅಕ್ಟೋಬರ್‌ 2018ಕ್ಕೆ ಅನ್ವಯವಾಗುವಂತೆ ಕೇಂದ್ರ ಸರ್ಕಾರ ಶೇ. 50 ರಷ್ಟು ಹೆಚ್ಚಳ ಮಾಡಿ ಆದೇಶಿಸಿದ್ದರೂ ಇನ್ನೂ ಜಾರಿಗೆ ಬಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಜೆಟ್‌ನಲ್ಲಿ ಘೋಷಣೆ ಮಾಡಿರುವ ಗೌರವಧನವನ್ನು ಕೂಡಲೆ ಬಿಡುಗಡೆ ಮಾಡಿದರು. ಇಎಸ್‌ಐ ಮತ್ತು ಪಿಎಫ್‌ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಜಮುನಾಬಾಯಿ, ಭಾಗ್ಯಮ್ಮ, ವಿನೋದಮ್ಮ, ರತ್ನಮ್ಮ, ಗಣೇಶ್‌, ಸತ್ಯಕೀರ್ತಿ, ಸಾವಿತ್ರಮ್ಮ, ರಾಧಮ್ಮ ಸೇರಿದಂತೆ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

BGT: Another shock for Team India; After Virat and Rahul, another batsman is injured

BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್‌, ರಾಹುಲ್‌ ಬಳಿಕ ಮತ್ತೊಬ್ಬ ಬ್ಯಾಟರ್‌ ಗೆ ಗಾಯ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

BGT: Another shock for Team India; After Virat and Rahul, another batsman is injured

BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್‌, ರಾಹುಲ್‌ ಬಳಿಕ ಮತ್ತೊಬ್ಬ ಬ್ಯಾಟರ್‌ ಗೆ ಗಾಯ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.