ರೈತನಿಂದ ಮೆಕ್ಕೆಜೋಳ ನೆಲಸಮ
Team Udayavani, Jun 28, 2020, 9:55 AM IST
ಭರಮಸಾಗರ: ಬಿತ್ತನೆ ಮಾಡಿದ ಒಂದು ತಿಂಗಳ ಅವಧಿಯಲ್ಲೇ ಮೆಕ್ಕೆಜೋಳ ಬೆಳೆಗೆ ಬಿದ್ದ ಲದ್ದಿಹುಳು ನಿಯಂತ್ರಣ ಆಗದ ಕಾರಣ ರೈತ ಫಸಲನ್ನು ನೆಲಸಮಗೊಳಿಸಿರುವ ಘಟನೆ ಚಿತ್ರದುರ್ಗ ತಾಲೂಕಿನ ಬೀರಾವರ ಗ್ರಾಮದಲ್ಲಿ ಶನಿವಾರ ನಡೆದಿದೆ.
ರೈತ ಕುಬೇಂದ್ರ ಗೌಡ ಎಂಬುವವರು ಕಳೆದ ತಿಂಗಳ ಹದ ಮಳೆಗೆ ಎರಡೂವರೆ ಎಕರೆ ಜಮೀನಿನಲ್ಲಿ ಮೆಕ್ಕೆಜೋಳ ಬಿತ್ತನೆ ಮಾಡಿದ್ದರು. ಆರಂಭದಲ್ಲಿ ಅಲ್ಲೊಂದು ಇಲ್ಲೊಂದು ಹುಳು ಭಾದೆ ಕಾಣಿಸಿಕೊಂಡಿತ್ತು. ಕೃಷಿ ಇಲಾಖೆ ಸಲಹೆಯಂತೆ ಕೀಟನಾಶಕ ಸಿಂಪಡಣೆ ಮಾಡಲಾಗಿತ್ತು. ಆದರೂ ಹುಳು ಬಾಧೆ ಜಾಸ್ತಿಯಾಯಿತು. ಸಂಪೂರ್ಣ ಹೊಲ ಹಾಳಾಗುತ್ತಿರುವುದನ್ನು ಕಂಡ ರೈತ, ಎರಡೂವರೆ ಎಕರೆ ಜಮೀನಿನಲ್ಲಿನ ಸಂಪೂರ್ಣ ಮೆಕ್ಕೆಜೋಳ ಫಸಲನ್ನು ಟ್ರ್ಯಾಕ್ಟರ್ ಕುಂಟೆ ಬಳಸಿ ನೆಲಸಮಗೊಳಿಸಿದ್ದಾರೆ.
ಎರಡೆರಡು ಬಿತ್ತನೆ ಮಾಡುತ್ತಿರುವ ತಮಗೆ ಸಾಲದ ಶೂಲಕ್ಕೆ ತಳ್ಳುವಂತೆ ಮಾಡಿದೆ. ಸರಿಯಾದ ಕೀಟನಾಶಕಗಳು ಸಿಗುತ್ತಿಲ್ಲ.ಬೆಳೆ ನಾಶಪಡಿಸಿದರೂ ಏನಾಗಿದೆ ನಿನಗೆ ಎಂದು ಕೇಳುವವರೇ ಇಲ್ಲದಂತಾಗಿದೆ. ಈ ಎಲ್ಲಾ ಸಮಸ್ಯೆಗಳ ನಡುವೆ ಮೆಕ್ಕೆಜೋಳ ಬೆಳೆ ಬೆಳೆಯುವುದೇ ದುಬಾರಿಯಾಗಿದೆ ಎಂದು ರೈತ ಕುಬೇಂದ್ರ ಗೌಡ ಅಳಲು ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.