Chitradurga ಕಲುಷಿತ ನೀರಿನಲ್ಲಿ ವಿಬ್ರಿಯೊ ಕಾಲರಾ ಬ್ಯಾಕ್ಟೀರಿಯಾ ಪತ್ತೆ
Team Udayavani, Aug 9, 2023, 12:18 AM IST
ಚಿತ್ರದುರ್ಗ: ಕವಾಡಿಗರಹಟ್ಟಿ ಕಲುಷಿತ ನೀರಿನ ದುರಂತಕ್ಕೆ ಸಂಬಂಧಿ ಸಿದಂತೆ ಬೆಂಗಳೂರು ವೈದ್ಯಕೀಯ ಕಾಲೇಜು ಪ್ರಯೋಗಾಲಯದ ವರದಿ ಮಂಗಳವಾರ ಲಭ್ಯವಾಗಿದ್ದು, ಕಲುಷಿತ ನೀರಿನಲ್ಲಿ ವಿಬ್ರಿಯೊ ಕಾಲರಾ ಬ್ಯಾಕ್ಟೀರಿಯಾ ಪತ್ತೆ ಯಾಗಿರುವುದನ್ನು ಖಚಿತಪಡಿಸಿದೆ.
ವಾಂತಿ-ಭೇದಿಯಿಂದ ಅಸ್ವಸ್ಥರಾಗಿದ್ದ ಮೂವರ ಭೇದಿಯ ಮಾದರಿಗಳನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿತ್ತು.
ಇದರಲ್ಲಿ ಎರಡು ಮಾದರಿಗಳಲ್ಲಿ ವಿಬ್ರಿಯೊ ಬ್ಯಾಕ್ಟೀರಿಯಾ ಇರುವುದು ದೃಢಪಟ್ಟಿದೆ. ನೀರು ಕಲುಷಿತಗೊಂಡಿದ್ದರ ಪರಿಣಾಮ ಈ ಬ್ಯಾಕ್ಟೀರಿಯಾ ನೀರಿನಲ್ಲಿ ಸೇರಿರುವ ಸಾಧ್ಯತೆ ಇದೆ ಎನ್ನಲಾಗಿದೆ. ನಗರಸಭೆಯಿಂದ ಕವಾಡಿಗರಹಟ್ಟಿಗೆ ಪೂರೈಕೆ ಮಾಡಿದ್ದ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂದು ಆರೋಗ್ಯ ಇಲಾಖೆಯ ಜಿಲ್ಲಾ ಸರ್ವೇಕ್ಷಣ ಘಟಕ ಆ. 3ರಂದು ವರದಿ ನೀಡಿತ್ತು. ಕಾಲರಾ ಹರಡಬಹುದಾದ ಬ್ಯಾಕ್ಟೀರಿಯಾ ಕೂಡ ಪತ್ತೆಯಾಗಿತ್ತು. ಇದನ್ನು ಖಚಿತಪಡಿಸಿಕೊಳ್ಳಲು ಬೆಂಗಳೂರಿನ ವೈದ್ಯಕೀಯ ಕಾಲೇಜಿನ ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿತ್ತು ಎಂದು ಡಿಎಚ್‌ಒ ಡಾ| ಆರ್. ರಂಗನಾಥ್ ಮಾಹಿತಿ ನೀಡಿದ್ದಾರೆ.
ಇನ್ನೊಂದೆಡೆ ಕವಾಡಿಗರಹಟ್ಟಿ ಕಲುಷಿತ ನೀರು ಸೇವಿಸಿ ವಾಂತಿ-ಭೇದಿಯಿಂದ ಅಸ್ವಸ್ಥರಾಗಿ ಮಂಗಳವಾರ 9 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೇ ವೇಳೆ ಈವರೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 47 ಮಂದಿ ಗುಣ ಮುಖರಾಗಿ ಮನೆಗೆ ಮರಳಿದ್ದಾರೆ. ಈವರೆಗಿನ ಒಟ್ಟಾರೆ ಪ್ರಕರಣಗಳ ಸಂಖ್ಯೆ 223ಕ್ಕೆ ಏರಿಕೆಯಾಗಿದ್ದು, ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆಯಾದವರ ಸಂಖ್ಯೆ 170ಕ್ಕೆ ತಲುಪಿದೆ. ಪ್ರಸ್ತುತ 48 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ
Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು
Karavali Utsava: ಡಿ.21-ಜ.19: ಮಂಗಳೂರಿನಲ್ಲಿ ಕರಾವಳಿ ಉತ್ಸವ; ದ.ಕ ಜಿಲ್ಲಾಧಿಕಾರಿ ಮಾಹಿತಿ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.