ಭರಮಸಾಗರ: ಭಾರಿ ಮಳೆ; ಎರಡು ಗ್ರಾಮಗಳ ಸಂಪರ್ಕ ಕಡಿತ
Team Udayavani, Oct 11, 2022, 1:12 PM IST
ಭರಮಸಾಗರ: ಧಾರಾಕಾರ ಮಳೆಯಿಂದಾಗಿ ಸಮೀಪದ ಕೋಗುಂಡೆ ಗ್ರಾಮದ ಬಳಿ ನದಿಯಂತೆ ಹರಿಯುತ್ತಿರುವ ದೊಡ್ಡಹಳ್ಳದ ಕಾರಣ ಕೋಗುಂಡೆ ಮತ್ತು ಕೋಡಿಹಳ್ಳಿ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.
ಅ. 11ರ ಸೋಮವಾರ ಸುರಿದ ಧಾರಾಕಾರ ಮಳೆಯಿಂದಾಗಿ ಭರಮಸಾಗರ ದೊಡ್ಡಕೆರೆ ಕೊಡಿ ಬಿದ್ದು ನೀರು ಹರಿಯುವುದರ ಜೊತೆಗೆ ಕೆರೆಯ ಸುರಕ್ಷತೆ ದೃಷ್ಟಿಯಿಂದ ಸೋಮವಾರ ಸಂಜೆ ದೊಡ್ಡಕೆರೆ ಏರಿ ಅಗೆಯಲಾಗಿತ್ತು. ಇದರೊಂದಿಗೆ ನಂದಿಹಳ್ಳಿ, ಚೌಲಿಹಳ್ಳಿ ಗ್ರಾಮಗಳ ಸುತ್ತಮುತ್ತ ವಿಪರೀತ ಮಳೆ ಸುರಿದ ಕಾರಣ ಈ ಎಲ್ಲಾ ನೀರು ದೊಡ್ಡಹಳ್ಳದ ಮೂಲಕ ಹರಿದು ಸಾಗುವ ಮಾರ್ಗದಲ್ಲಿ ಕೋಗುಂಡೆ ಮತ್ತು ಕೋಡಿಹಳ್ಳಿ ಗ್ರಾಮಗಳನ್ನು ಸಂಪರ್ಕಿಸುವ ರಸ್ತೆ ಸೇತುವೆ ಮೇಲೆ ಹತ್ತಾರು ಅಡಿ ಎತ್ತರದವರೆಗೆ ಮಂಗಳವಾರ ಹರಿಯುತ್ತಿರುವ ಕಾರಣ ಎರಡು ಗ್ರಾಮಗಳ ನಡುವೆ ಸಂಪರ್ಕ ಕಡಿತಗೊಂಡಿದೆ.
ಎರಡು ಹಳ್ಳಿಗಳ ಜನರು ಹಳ್ಳದ ಎರಡು ಕಡೆಗಳ ಬಳಿ ಬಂದು ನೀರು ಹರಿಯುವ ದೃಶ್ಯ ಕಣ್ತುಂಬಿಕೊಂಡರು. ಮಹಿಳೆಯರು, ಮಕ್ಕಳು, ಯುವಕರು ಸೇರಿದಂತೆ ಎರಡು ಹಳ್ಳಿಯ ಜನರು ಹಳ್ಳದ ಎರಡು ದಂಡೆಗಳ ಮೇಲೆ ನಿಂತಿದ್ದರು. ಹಳ್ಳದ ಎರಡು ಬದಿಯಲ್ಲಿನ ಹೊಲ -ತೋಟಗಳಿಗೆ ನೀರು ನುಗ್ಗಿದ್ದು, ಅಪಾರ ಬೆಳೆ ನಷ್ಟ ಸಂಭವಿಸಿದೆ ಎಂದು ಹಳ್ಳಿಗರು ಅಳಲು ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.