ಚುನಾವಣಾ ವೆಚ್ಚ ಮಿತಿ ಮೀರದಿರಲಿ
Team Udayavani, Mar 30, 2018, 11:15 AM IST
ಚಿತ್ರದುರ್ಗ: ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಚುನಾವಣಾ ವೆಚ್ಚವಾಗಿ 28 ಲಕ್ಷ ರೂ. ವರೆಗೆ ವೆಚ್ಚ ಮಾಡಲು ಅವಕಾಶವಿದೆ. ಚುನಾವಣೆಯಲ್ಲಿ ಖರ್ಚು ಮಾಡಬಹುದಾದ ಎಲ್ಲಾ ವಸ್ತುಗಳ ದರಗಳನ್ನು ಅಂತಿಮಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವಿ.ವಿ. ಜ್ಯೋತ್ಸ್ನಾ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ರಾಜಕೀಯ ಪಕ್ಷಗಳ ಮುಖಂಡರು, ವಿವಿಧ ಮುದ್ರಣಾಲಯಗಳ ಮಾಲೀಕರು ಹಾಗೂ ಮಾಧ್ಯಮದವರೊಂದಿಗೆ ಸಭೆ ನಡೆಸಿದ ಅವರು ಚುನಾವಣಾ ವೆಚ್ಚಗಳ ದರವನ್ನು ಅಂತಿಮಗೊಳಿಸಿ ಮಾತನಾಡಿದರು.
ಚುನಾವಣಾ ಸಂದರ್ಭದಲ್ಲಿ ಕಣದಲ್ಲಿನ ಪ್ರತಿ ಅಭ್ಯರ್ಥಿಗಳಿಗೆ 28 ಲಕ್ಷ ರೂ.ವರೆಗೆ ವೆಚ್ಚ ಮಾಡಲು ಅವಕಾಶ ಇದೆ. ಇದರ ಮಿತಿ ದಾಟಿದಲ್ಲಿ ಅಭ್ಯರ್ಥಿ ಆಯ್ಕೆಯಾದರೂ ಸಹ ಅನರ್ಹರಾಗುತ್ತಾರೆ. ರ್ಯಾಲಿ ವೇಳೆ ಉಪಯೋಗಿಸುವ ಪೆಂಡಾಲ್, ಕುರ್ಚಿ, ಶಾಮಿಯಾನ, ಜನರೇಟರ್, ಪ್ಲೆಕ್ಸ್, ಕರಪತ್ರ, ಮೈಕ್ ಸೇರಿದಂತೆ ಪ್ರತಿಯೊಂದಕ್ಕೂ ಲೆಕ್ಕ ನೀಡಬೇಕಾಗುತ್ತದೆ. ಅಭ್ಯರ್ಥಿಗೆ
ಅವರ ಸ್ವಂತ ವಾಹನವಾದರೆ ಒಂದಕ್ಕೆ ಮಾತ್ರ ಇಂಧನ, ವಾಹನ ಚಾಲಕರ ಭತ್ಯೆ ಲೆಕ್ಕಕ್ಕೆ ತೆಗೆದುಕೊಳ್ಳಲಾಗುತ್ತದೆ.
ಸ್ವಂತ ವಾಹನಗಳು ಒಂದಕ್ಕಿಂತ ಹೆಚ್ಚು ಇದ್ದು ಅವುಗಳನ್ನು ಉಪಯೋಗಿಸಿದಲ್ಲಿ ಅವುಗಳ ಬಾಡಿಗೆ ವೆಚ್ಚವನ್ನು ಅಭ್ಯರ್ಥಿಯ ಲೆಕ್ಕಕ್ಕೆ ತೆಗೆದುಕೊಳ್ಳಲಾಗುತ್ತದೆ. ವಿದ್ಯುನ್ಮಾನ ಮಾಧ್ಯಮ, ಸಾಮಾಜಿಕ ಜಾಲತಾಣ. ಕೇಬಲ್ ಟಿವಿಗಳಲ್ಲಿ ನೀಡುವ ಜಾಹೀರಾತನ್ನೂ ಲೆಕ್ಕಕ್ಕೆ ತೆಗೆದುಕೊಳ್ಳಲಾಗುತ್ತದೆ. ವಿದ್ಯುನ್ಮಾನ ಮಾಧ್ಯಮಗಳಲ್ಲಿ ಜಾಹೀರಾತು ನೀಡಲು ಪೂರ್ವ ಪ್ರಮಾಣೀಕರಣ ಪ್ರಮಾಣಪತ್ರ
ಪಡೆದುಕೊಳ್ಳಬೇಕಾಗುತ್ತದೆ. ಮುದ್ರಣ ಮಾಧ್ಯಮಗಳಲ್ಲಿ ನೀಡಲಾಗುವ ಜಾಹೀರಾತುಗಳು ಸೇರಿದಂತೆ ಇತರೆ ಎಲ್ಲಾ ವೆಚ್ಚಗಳನ್ನು ಸಹ ಅಭ್ಯರ್ಥಿಯ ವೆಚ್ಚವಾಗಿ ಪರಿಗಣಿಸಲಾಗುತ್ತದೆ. ಕಾನೂನಾತ್ಮಕ ವೆಚ್ಚಗಳಿಗೆ ಅವಕಾಶ ಇದ್ದು, ಕಾನೂನು ಬಾಹಿರ ವೆಚ್ಚಗಳಿಗೆ ಅವಕಾಶವಿಲ್ಲ. ಅಭ್ಯರ್ಥಿಗಳು ಚುನಾವಣಾ ಲೆಕ್ಕವನ್ನು ಕರಾರುವಾಕ್ ಆಗಿ ನಿಗದಿತ ಅವ ಧಿಯಲ್ಲಿ ನೀಡಬೇಕಾಗುತ್ತದೆ. ಫಲಿತಾಂಶ
ಬಂದು 30 ದಿನಗಳೊಳಗಾಗಿ ಅಂತಿಮ ಖರ್ಚಿನ ವಿವರವನ್ನು ನೀಡಬೇಕಾಗುತ್ತದೆ ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ. ಸಂಗಪ್ಪ, ಉಪವಿಭಾಗಾಧಿಕಾರಿ ಹಾಗೂ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿ ವಿಜಯಕುಮಾರ್ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಭಾಗವಹಿಸಿದ್ದರು ಎಲ್ಲಾ ರಾಜಕೀಯ ಪಕ್ಷದವರು
ಚುನಾವಣಾ ಆಯೋಗದ ನಿರ್ದೇಶನವನ್ನು ಕಡ್ಡಾಯವಾಗಿ ಪಾಲಿಸಬೇಕು. ರ್ಯಾಲಿ ನಡೆಸಲು ನಿಗದಿತ ನಮೂನೆಯಲ್ಲಿ ಪ್ರಮಾಣಪತ್ರದೊಂದಿಗೆ ಅರ್ಜಿ ಸಲ್ಲಿಸಬೇಕು. ಅದರಲ್ಲಿ ಉಪಯೋಗಿಸುವ ಪ್ರತಿ ವಸ್ತುವಿನ ದರದ ವಿವರವನ್ನು ನೀಡಬೇಕಾಗುತ್ತದೆ. ವೆಚ್ಚದ ದರಗಳ ಬಗ್ಗೆ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರಿಗೆ ಕ್ರೋಢೀಕೃತ ಪುಸ್ತಕ ಒದಗಿಸಲಾಗಿದೆ. ಚುನಾವಣಾಧಿಕಾರಿಗಳ
ಕಚೇರಿಯಲ್ಲೂ ವಿವರ ಲಭ್ಯವಿದೆ.
●ವಿ.ವಿ. ಜ್ಯೋತ್ಸ್ನಾ, ಜಿಲ್ಲಾಧಿಕಾರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kollegala: ಮರಳೆಕಾಯಿ ತಿಂದು ವಾಂತಿ-ಭೇದಿ; 13 ಜನರು ಆಸ್ಪತ್ರೆಗೆ ದಾಖಲು
Max Movie: ಅಂತೂ ಬಂದೇ ಬಿಡ್ತು ʼಮ್ಯಾಕ್ಸ್ʼ ರಿಲೀಸ್ ಡೇಟ್.. ಫ್ಯಾನ್ಸ್ ಖುಷ್
Congress ಸರಕಾರ 2018 ರಲ್ಲಿ ಜಿ.ಟಿ.ದೇವೇಗೌಡರನ್ನು ಬಂಧಿಸಲು ಮುಂದಾಗಿತ್ತು: ರೇವಣ್ಣ ಬಾಂಬ್
Simple Life: ಬದುಕು ನಿರಾಡಂಬರವಾಗಿರಲಿ
Mangaluru: Spam Call ಪತ್ತೆಗೆ ಎಐ ತಂತ್ರಜ್ಞಾನ ಬಳಕೆ… ಏರ್‌ಟೆಲ್ ನಿಂದ ಹೊಸ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.