ಮೊಬೈಲ್ ಆ್ಯಪ್‌ನಿಂದ ಸಮೀಕ್ಷೆ ನಡೆಸಿ
Team Udayavani, Aug 14, 2020, 3:23 PM IST
ಹಿರಿಯೂರು: ಮೊಬೈಲ್ ಆ್ಯಪ್ ಬಳಸಿಕೊಂಡು ಬೆಳೆ ಸಮೀಕ್ಷೆ ನಡೆಸಿ ನಿಗದಿತ ಸಮಯದಲ್ಲಿ ಅಪ್ ಲೋಡ್ ಮಾಡುವ ಬಗ್ಗೆ ಸೂಚನೆ ನೀಡಿದ್ದು, ಅದರಂತೆ ರೈತರು ಕೈಗೊಳ್ಳಬೇಕು ಎಂದು ತಹಶೀಲ್ದಾರ್ ಜಿ.ಎಚ್. ಸತ್ಯನಾರಾಯಣ ಹೇಳಿದರು.
ನಗರದ ಕೃಷಿ ಇಲಾಖೆ ಆವರಣದಲ್ಲಿ ಕೃಷಿ ಇಲಾಖೆ ಹಮ್ಮಿಕೊಂಡಿದ್ದ ಬೆಳೆ ಸಮೀಕ್ಷೆ 2020 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೃಷಿ ಸಚಿವರ ಮತ್ತು ತೋಟಗಾರಿಕೆ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೃಷಿ ಸಚಿವರು ತೀರ್ಮಾನಿಸಿದಂತೆ ರೈತರು ತಮ್ಮ ಜಮೀನುಗಳಲ್ಲಿ (ಹಿಸ್ಸಾವಾರು) ತಾವು ಬೆಳೆದ ಬೆಳೆಗಳ ಛಾಯಾಚಿತ್ರವನ್ನು ಡಿಪಿಎಆರ್(ಇ-ಆಡಳಿತ) ರವರ ಹೊಸದಾಗಿ ಅಭಿವೃದ್ಧಿ ಪಡಿಸಿರುವ ರೈತರು ಇಲಾಖೆಯ ಹೆಚ್ಚಿನ ಪ್ರಯೋಜನ, ಕೃಷಿ ತಂತ್ರಜ್ಞಾನದ ಬಳಕೆ ಬಗ್ಗೆ ಇಲಾಖೆಗೆ ಮಾಹಿತಿ ನೀಡುವಂತೆ ತಿಳಿಸಿದರು.
ರೈತರು ನಿಗದಿತ ಸಮಯದೊಳಗೆ ತಾವು ಬೆಳೆದ ಬೆಳೆಗಳ ಛಾಯಾಚಿತ್ರವನ್ನು ತೆಗೆದು ತಂತ್ರಾಂಶದ ಜ್ಞಾನವುಳ್ಳ ಯುವಕರು ಖಾಸಗಿ ನಿವಾಸಿಗಳ ಜತೆಗೆ ತಮ್ಮ ಜಮೀನುಗಳಲ್ಲಿ ಬೆಳೆದ ಬೆಳೆಗಳನ್ನು ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಮೂಲಕ ಅಪ್ ಲೋಡ್ ಮಾಡಿಸಬೇಕು ಎಂದರು. ಒಂದು ಪಕ್ಷ ಮೇಲಿನ ಎರಡು ಚಟುವಟಿಕೆಗಳು ಆಗದಿದ್ದಲ್ಲಿ ಖಾಸಗಿ ನಿವಾಸಿಗಳು ಮತ್ತು ಸರ್ಕಾರದ ಸಿಬ್ಬಂದಿಯು ಬೆಳೆ ಸಮೀಕ್ಷೆ ಕೈಗೊಳ್ಳಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಕೃಷಿ ಇಲಾಖೆ ವಿವಿಧ ಆಟೋಗಳ ಮೂಲಕ ಬೆಳೆ ಸಮೀಕ್ಷೆ ಕುರಿತು ರೈತರಲ್ಲಿ ಜಾಗೃತಿ ಮೂಡಿಸಲು ಆಟೋಗಳ ಮೂಲಕ ಪ್ರಚಾರ ಕಾರ್ಯಕ್ರಮ ಆರಂಭಿಸಿತು. ತಹಶೀಲ್ದಾರ್ ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ತಾಲೂಕಿನ ವಿವಿಧ ರೈತರ ಜಮೀನುಗಳಿಗೆ ತೆರಳಿ ಬೇಳೆ ಸಮೀಕ್ಷೆ ನಡೆಸಿ ಮಾಹಿತಿ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
MUST WATCH
ಹೊಸ ಸೇರ್ಪಡೆ
SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್ ಶುರು?
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.