ತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಗಳನ್ನು ಭೇಟಿ ಮಾಡಿದ ಗಯಾನಾ ಉಪಾಧ್ಯಕ್ಷ
Team Udayavani, Feb 24, 2023, 5:30 PM IST
ಭರಮಸಾಗರ: ಗಯಾನಾ ದೇಶದ ಭಾರತೀಯ ಸಂಜಾತ ಉಪಾಧ್ಯಕ್ಷ ಭರತ್ ಜಗದೇವ್ ರವರು ನವದೆಹಲಿಯಲ್ಲಿ ಸಿರಿಗೆರೆ ತರಳಬಾಳು ಮಠದ ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಭೇಟಿ ವೇಳೆ ಗಯಾನಾ ಉಪಾಧ್ಯಕ್ಷರು ಕರ್ನಾಟಕದ ಹಲವು ಜಿಲ್ಲೆ ಗಳಲ್ಲಿ ಜಾರಿಗೆ ತಂದಿರುವ ಏತನೀರಾವರಿ ಯೋಜನೆಗಳ ಮೂಲಕ 500 ಕ್ಕೂ ಹೆಚ್ಚು ಕೆರೆಗಳಿಗೆ ನೀರು ತುಂಬಿಸಿರುವ ಕುರಿತು ಮಾಹಿತಿ ಪಡೆದರು. ಶ್ರೀ ತರಳಬಾಳು ವಿದ್ಯಾಸಂಸ್ಥೆ ವತಿಯಿಂದ ರಾಜ್ಯ ಬಹುತೇಕ ಗ್ರಾಮಾಂತರ ಪ್ರದೇಶಗಳಲ್ಲಿ 50 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ಮತ್ತು ದಾಸೋಹ ಪಡೆಯುತ್ತಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ಗುಣಮಟ್ಟದ ಶಿಕ್ಷಣ ಕಲ್ಪಿಸುತ್ತಿರುವ ಡಾ.ಶ್ರೀಗಳ ಕಾರ್ಯವನ್ನು ಶ್ಲಾಘಿಸಿದರು.
ಗಯಾನಾ ದೇಶದಲ್ಲಿ ನಡೆಯಲಿರುವ ಸರ್ಕಾರಿ ವಿಶೇಷ ಕಾರ್ಯಕ್ರಮಗಳಿಗೆ ಪೂಜ್ಯ ಡಾ.ಶ್ರೀಗಳಿಗೆ ಭರತ್ ಜಗದೇವ್ ರವರು ಅಧಿಕೃತ ವಾಗಿ ಆಹ್ವಾನಿಸಿದರು.
ಭಾರತೀಯ ರಾಯಭಾರಿ ಕಚೇರಿ ಅಧಿಕಾರಿ ಶ್ರೀನಿವಾಸ್, ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ, ಬಿಜೆಪಿ ಯುವ ಮುಖಂಡ ಜಿ.ಎಸ್.ಅನಿತ್ ಕುಮಾರ್ ಇತರರಿದ್ದರು.
ಇದನ್ನೂ ಓದಿ: ಸಿಎಂ ಶಿಂಧೆ ಪುತ್ರನ ವಿರುದ್ಧ ಆರೋಪ: ಸಂಜಯ್ ರಾವತ್ ವಿರುದ್ಧ ಮತ್ತೊಂದು ಮಾನನಷ್ಟ ಕೇಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಏನು ಮಾರ್ಗಸೂಚಿ ಇಳಿದೆ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.