ಧಾರ್ಮಿಕ ಕಾರ್ಯಕ್ಕೆ ವಿಧ್ಯುಕ್ತ ಚಾಲನೆ
Team Udayavani, Mar 24, 2021, 9:05 PM IST
ನಾಯಕನಹಟ್ಟಿ: ತಿಪ್ಪೇರುದ್ರಸ್ವಾಮಿ ದೇವಾಲಯದಲ್ಲಿ ಸೋಮವಾರ ಕಂಕಣಧಾರಣೆ ಹಾಗೂ ವಾರೋತ್ಸವಗಳೊಂದಿಗೆ ಜಾತ್ರೆಯ ಧಾರ್ಮಿಕ ಆಚರಣೆಗಳಿಗೆ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನೀಕೇರಿ ದೀಪ ಬೆಳಗುವುದರ ಮೂಲಕ ಚಾಲನೆ ನೀಡಿದರು.
ಮಾ. 29 ರಂದು ತಿಪ್ಪೇರುದ್ರಸ್ವಾಮಿ ರಥೋತ್ಸವ ಜರುಗಲಿದೆ. ಈ ಹಿನ್ನೆಲೆಯಲ್ಲಿ ಒಂದು ವಾರದ ಮುಂಚೆ ಧಾರ್ಮಿಕ ವಿಧಿ ವಿಧಾನಗಳು ಆರಂಭಗೊಂಡಿವೆ. ಒಳಮಠದ ಕಂಕಣ ಧಾರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಧಿಕಾರಿ ಕವಿತಾ ಎಸ್. ಮನ್ನೀಕೇರಿ ದೀಪ ಬೆಳಗಿ ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಂಡರು.
ವಾರೋತ್ಸವ ಹಾಗೂ ಕಂಕಣಧಾರಣೆ ಕಾರ್ಯಗಳು ಒಂದೇ ಬಾರಿ ಜರುಗಿದವು. ದೇವಾಲಯದ ಒಳಾಂಗಣದಲ್ಲಿ ಅಲಂಕೃತ ಕುಂಭಗಳು ಹಾಗೂ ದೀಪಗಳೊಂದಿಗೆ ಕಂಕಣ ಧಾರಣೆ ಮಾಡಲಾಯಿತು. ರಥೋತ್ಸವದಲ್ಲಿ ಪಾಲ್ಗೊಳ್ಳುವ ಪ್ರಮುಖರಿಗೆ ಕಂಕಣಧಾರಣೆ ಮಾಡಲಾಯಿತು. ಅಲಂಕೃತವಾದ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಲಾಯಿತು. ನಂತರ ದೇವಾಲಯದ ಒಳಾಂಗಣದಲ್ಲಿ ಮೂರು ಬಾರಿ ಪ್ರದಕ್ಷಿಣೆ ಮಾಡಲಾಯಿತು. ಭಕ್ತರು ದೇವಾಲಯದ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು.
ಉತ್ಸವದಲ್ಲಿ ನಂದಿಧ್ವಜ ದೇವಾಲಯದ ಮಂಗಳ ವಾದ್ಯಗಳಿದ್ದವು. ಪಟ್ಟಣ ಹಾಗೂ ಸುತ್ತಲಿನ ಭಕ್ತರು ಪಾಲ್ಗೊಂಡಿದ್ದರು. ಮಂಗಳವಾರದಿಂದ ನಂತರದ ಭಾನುವಾರದವರೆಗೆ ಪ್ರತಿದಿನ ದಿನೋತ್ಸವಗಳು ಜರುಗಲಿವೆ. ಪ್ರತಿದಿನ ಒಂದು ಗಜ,ಅಶ್ವ, ನವಿಲು ಸೇರಿದಂತೆ ವಾಹನಗಳ ಉತ್ಸವ ಜರುಗಲಿದೆ. ರಥೋತ್ಸವಕ್ಕಾಗಿ ಹೊರಮಠ, ಒಳಮಠಗಳಲ್ಲಿ ವಿಶೇಷ ದೀಪಾಲಂಕಾರ ಮಾಡಲಾಗಿದೆ. ಕಂಕಣ ಧಾರಣೆ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಎಂ. ಮಲ್ಲಿಕಾರ್ಜುನ, ದೇವಾಲಯದ ಇಒ ಮಂಜುನಾಥ ಬಿ. ವಾಲಿ, ಪಪಂ ಅಧ್ಯಕ್ಷ ಎನ್. ಮಹಾಂತಣ್ಣ, ರಾಜಸ್ವ ನಿರೀಕ್ಷಕ ಚೇತನ್, ಸಿಬ್ಬಂದಿ ಸತೀಶ್ ಪುರೋಹಿತ ಎಸ್.ವೈ. ಮುರುಳಿಕೃಷ್ಣ ಸೇರಿದಂತೆ ಪಟ್ಟಣದ ಪ್ರಮುಖರು, ಜನಪ್ರತಿನಿಧಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.