ಪರಿಸರ ಕಾಳಜಿ ಬೆಳೆಸಿಕೊಳ್ಳುವುದು ಅಗತ್ಯ
Team Udayavani, Jan 30, 2019, 9:53 AM IST
ಚಳ್ಳಕೆರೆ: ಶಿಕ್ಷಣ ಇಲಾಖೆ ಹಲವಾರು ಬದಲಾವಣೆಗಳ ಮೂಲಕ ಶಿಕ್ಷಣ ಕ್ರಾಂತಿಯನ್ನೇ ಮಾಡುತ್ತಿದೆ. ಶಾಲೆಗಳಲ್ಲಿ ಕಲಿಯುವ ವಿದ್ಯಾರ್ಥಿಗಳಲ್ಲಿ ವೃತ್ತಿಪರ ಶಿಕ್ಷಣ, ಜ್ಞಾನದ ಜೊತೆಗೆ ಪರಿಸರ ಜಾಗೃತಿಯುಂಟು ಮಾಡುವ ಕೆಲಸವೂ ನಡೆದಿದೆ. ಈ ನಿಟ್ಟಿನಲ್ಲಿ ವೃತ್ತಿ ಶಿಕ್ಷಕರ ಕಾರ್ಯ ಶ್ಲಾಘನೀಯ ಎಂದು ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದ ಅಧಿಕಾರಿ ಹಾಗೂ ಪರಿವೀಕ್ಷಕ ಸಿ.ಎಂ. ತಿಪ್ಪೇಸ್ವಾಮಿ ಹೇಳಿದರು.
ನಗರದ ಹೊರವಲಯದ ಆದರ್ಶ ವಿದ್ಯಾಲಯದ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ವೃತ್ತಿ ಶಿಕ್ಷಕರ ಸಮಾವೇಶದಲ್ಲಿ ಶಿಕ್ಷಣ ಇಲಾಖೆ ಹೊರ ತಂದಿರುವ ‘ಹಸಿರು ಸಿರಿ’ ಕೃತಿಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಈ ಕೃತಿಯಲ್ಲಿ ಶಾಲಾ ಆವರಣದಲ್ಲಿ ಪರಿಸರ ಜಾಗೃತಿ ಮೂಡಿಸುವ ಬಗ್ಗೆ ಗಮನ ಸೆಳೆಯಲಾಗಿದೆ. ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕದ ಜ್ಞಾನವನ್ನು ಅರಿತರೆ ಸಾಲದು, ಬದಲಾಗಿ ಬದುಕಿಗೆ ಅಮೂಲ್ಯವಾದ ಪರಿಸರ ಕಾಳಜಿ ಬಗ್ಗೆಯೂ ಅರಿತುಕೊಳ್ಳಬೇಕೆಂದರು.
ಜಿಲ್ಲಾ ಶಿಕ್ಷಣಾಧಿಕಾರಿ ಪಿ. ರಾಮಯ್ಯ ಮಾತನಾಡಿ, ನಗರ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆಯ ಜೊತೆಗೆ ಕೃಷಿ ಬಗ್ಗೆಯೂ ಮಾಹಿತಿ ನೀಡಬೇಕಿದೆ. ನಗರ ಪ್ರದೇಶದ ವಿದ್ಯಾರ್ಥಿಗಳು ಕೃಷಿಯ ಬಗ್ಗೆ ಹೆಚ್ಚು ತಿಳಿದುಕೊಳ್ಳುವ ಅವಶ್ಯಕತೆ ಇದೆ. ಕೃಷಿಯೇ ಎಲ್ಲರ ಬದುಕಿಗೆ ಆಧಾರವಾಗಿರುವುದರಿಂದ ಶಾಲಾ ಹಂತದಲ್ಲೇ ವಿದ್ಯಾರ್ಥಿಗಳಿಗೆ ಇದರ ಬಗ್ಗೆ ತಿಳಿವಳಿಕೆ ನೀಡಬೇಕು ಎಂದು ಕರೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್. ವೆಂಕಟೇಶಪ್ಪ ಪ್ರಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳಿಗೆ ಕಲಿಕೆ ಜೊತೆಗೆ ನೈಸರ್ಗಿಕ ಸಂಪತ್ತು ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಮಹತ್ವಪೂರ್ಣವಾದುದು. ಪ್ರತಿಯೊಂದು ಶಾಲೆಯಲ್ಲೂ ಶಿಕ್ಷಕರು ಪಠ್ಯೇತರ ಚಟುವಟಿಕೆಗಳನ್ನು ಹೆಚ್ಚೆಚ್ಚು ಹಮ್ಮಿಕೊಳ್ಳಬೇಕಿದೆ. ಶಾಲಾ ಆವರಣದಲ್ಲಿ ಕೈತೋಟ ಬೆಳೆಸುವ ಮೂಲಕ ಗಿಡಮರ ಸಂರಕ್ಷಣೆಯ ಬಗ್ಗೆ ತಿಳಿಸಿಕೊಡಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆದರ್ಶ ಶಾಲೆಯ ಮುಖ್ಯ ಶಿಕ್ಷಕ ಶ್ರೀನಿವಾಸ್ ವಹಿಸಿದ್ದರು. ವಿಷಯ ಪರಿವೀಕ್ಷಕರಾದ ಸುನೀತಾ, ಗೋವಿಂದಪ್ಪ, ಕೃಷಿ ಅಧಿಕಾರಿ ಗಿರೀಶ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.