ಜಿಲ್ಲೆಯಲ್ಲಿ ತಂಬಾಕು ನಿಷೇಧ ಕಾಯ್ದೆ ಪರಿಣಾಮಕಾರಿ ಜಾರಿಯಾಗಲಿ: ಡಿಸಿ
Team Udayavani, Sep 17, 2019, 2:24 PM IST
ಚಿತ್ರದುರ್ಗ: ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಚಿತ್ರದುರ್ಗ: ಜಿಲ್ಲೆಯನ್ನು ತಂಬಾಕು ನಿಷೇಧ ಕಾಯ್ದೆಯ ಉನ್ನತ ಅನುಷ್ಠಾನ ಕೇಂದ್ರವನ್ನಾಗಿ ಮಾಡಲು ಮುಂದಾಗಿದ್ದು, ಕಾಯ್ದೆ ಪರಿಣಾಮಕಾರಿಯಾಗಿ ಜಾರಿಯಾಗಬೇಕು ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಸಮನ್ವಯ ಸಮಿತಿಯ ತ್ತೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ, ಶಿಕ್ಷಣ ಸಂಸ್ಥೆಗಳ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಸೇರಿದಂತೆ ಕಾಯ್ದೆಯ ಉಲ್ಲಂಘನೆ ಪ್ರಕರಣಗಳನ್ನು ಪತ್ತೆ ಹಚ್ಚಿ ತಪ್ಪಿತಸ್ಥರಿಗೆ ದಂಡ ವಿಧಿಸಿ ದೂರು ದಾಖಲಿಸಬೇಕು. ಯಾವುದೇ ಪ್ರಕರಣಗಳನ್ನು ಕೇವಲ ದಂಡದಲ್ಲಿ ಮುಕ್ತಾಯ ಮಾಡಬಾರದು. ಜಿಲ್ಲೆಯಾದ್ಯಂತ ತಹಶೀಲ್ದಾರರು ಹಾಗೂ ತಾಲೂಕು ವೈದ್ಯಾಧಿಕಾರಿಗಳು ದಾಳಿ ನಡೆಸಬೇಕು. ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳು, ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್‌ನಿಲ್ದಾಣಗಳ ಆವರಣದಲ್ಲಿ ತಂಬಾಕು ನಿಷೇಧದ ಫಲಕವನ್ನು ಅಳವಡಿಸಬೇಕು ಎಂದರು.
ದಾಳಿ ನಡೆಸದ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ತಂಬಾಕು ನಿಯಂತ್ರಣ ಕಾಯ್ದೆ ಅನ್ವಯ ಯಾವುದೇ ಶಾಲೆ, ಕಾಲೇಜು ಶಿಕ್ಷಣ ಸಂಸ್ಥೆ ಆವರಣದಿಂದ 100 ಮೀಟರ್ ಅಂತರದಲ್ಲಿ ಸಿಗರೇಟ್, ಬೀಡಿ ಅಥವಾ ಇತರೆ ಯಾವುದೇ ಬಗೆಯ ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಷೇಧಿಸಲಾಗಿದೆ. ಕಾಯ್ದೆ ಉಲ್ಲಂಘನೆಯಾದಲ್ಲಿ ಶಿಕ್ಷಾರ್ಹ ಅಪರಾಧವಾಗುತ್ತದೆ. ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳು, ಶಿಕ್ಷಣ ಸಂಸ್ಥೆಗಳ ಗೋಡೆಗಳ ಮೇಲೆ ಎಚ್ಚರಿಕೆ ಸಂದೇಶವನ್ನು ಬರೆಸಬೇಕು. ಎಲ್ಲ ಶಾಲಾ- ಕಾಲೇಜುಗಳ ಗೋಡೆಗಳ ಮೇಲೆ ಗೋಡೆಬರಹ ಬರೆಸಿದ ಕುರಿತು ಫೋಟೋ ಸಹಿತ ವರದಿಯನ್ನು ಡಿಡಿಪಿಐ ಹಾಗೂ ಡಿಡಿಪಿಯು ಅವರು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬೇಕು. ಕಾಯ್ದೆ ಉಲ್ಲಂಘನೆಯಾಗದ ರೀತಿ ಜಾಗ್ರತೆ ವಹಿಸುವುದು ಆಯಾ ಶಾಲಾ-ಕಾಲೇಜುಗಳ ಮುಖ್ಯಸ್ಥರ ಹೊಣೆ. ತಪ್ಪಿದಲ್ಲಿ ಆಯಾ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರನ್ನೇ ಹೊಣೆಯಾಗಿಸಿ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು.
ಇದುವರೆಗೆ ಕಾಯ್ದೆ ಉಲ್ಲಂಘನೆಗೆ ಸಂಬಂಧಿಸಿದಂತೆ ತಂಬಾಕು ತನಿಖಾ ದಳದಿಂದ 778 ಪ್ರಕರಣಗಳನ್ನು ದಾಖಲಿಸಿ 62,220 ರೂ. ದಂಡ ವಸೂಲಿ ಮಾಡಲಾಗಿದೆ. ಪೊಲೀಸ್ ಇಲಾಖೆಯಿಂದ ಈ ವರ್ಷ 6389 ಪ್ರಕರಣಗಳನ್ನು ದಾಖಲಿಸಿ 4.30 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ಜಿ.ಪಿ. ರೇಣುಪ್ರಸಾದ್, ಜಿಲ್ಲಾ ಸಲಹೆಗಾರ ಪ್ರಭುದೇವ್, ತಾಲೂಕು ವೈದ್ಯಾಧಿಕಾರಿ ಡಾ| ಸಿ. ಕಂಬಾಳಿ, ಜಿಪಂ ಉಪ ಕಾರ್ಯದರ್ಶಿ ಮಹಮ್ಮದ್ ಮುಬೀನ್, ತಹಶೀಲ್ದಾರ್ ವೆಂಕಟೇಶಯ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.