ಸರ್ಕಾರದ ಹುಳುಕು ಮುಚ್ಚಿಕೊಳ್ಳಲು ದಕ್ಷ ಅಧಿಕಾರಿಗಳ ಎತ್ತಂಗಡಿ: ನವೀನ್
Team Udayavani, Jul 20, 2017, 11:43 AM IST
ಚಿತ್ರದುರ್ಗ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಮೂರು ವರ್ಷಗಳಲ್ಲಿ 30ಕ್ಕೂ ಹೆಚ್ಚು ಬಿಜೆಪಿ ಮತ್ತು
ಆರೆಸ್ಸೆಸ್ ಕಾರ್ಯಕರ್ತರ ಹತ್ಯೆಯಾಗಿದೆ. ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಸೋತಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೊದಲು ರಾಜ್ಯದ ಜನತೆಗೆ ರಕ್ಷಣೆ ನೀಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎಸ್. ನವೀನ್ ಒತ್ತಾಯಿಸಿದರು.
ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಬುಧವಾರ ನಗರದಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಅವರು
ಮಾತನಾಡಿದರು. ಕಾಂಗ್ರೆಸ್ ಸರ್ಕಾರದ ಹುಳುಕು ಮುಚ್ಚಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಕ್ಷ ಅಧಿಕಾರಿಗಳನ್ನು ಎತ್ತಂಗಡಿ ಮಾಡುತ್ತಿದ್ದಾರೆ. ನಿದ್ದೆಯಲ್ಲಿರುವ ಭ್ರಷ್ಟ ಸರ್ಕಾರವನ್ನು ಎಚ್ಚರಿಸುವುದಕ್ಕಾಗಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆಗೆ ಮುಂದಾಗಿದೆ. ಇಲ್ಲಿಯವರೆಗೆ ರಾಜ್ಯದಲ್ಲಿ ನಡೆದಿರುವ ಬಿಜೆಪಿ ಹಾಗೂ ಆರೆಸ್ಸೆಸ್ ಕಾರ್ಯಕರ್ತರ ಹತ್ಯೆ ಬಗ್ಗೆ ರಾಷ್ಟ್ರೀಯ ತನಿಖಾ
ದಳದಿಂದ ತನಿಖೆಯಾಗಬೇಕು ಎಂದರು.
ಪ್ರತಿಭಟನೆಯಲ್ಲಿ ಮಾಜಿ ಶಾಸಕರಾದ ಎಂ. ಚಂದ್ರಪ್ಪ, ಪಿ. ರಮೇಶ್, ಬಿಜೆಪಿ ವಿಭಾಗೀಯ ಸಹಪ್ರಭಾರಿ ಜಿ.ಎಂ. ಸುರೇಶ್, ಮಾಜಿ
ಅಧ್ಯಕ್ಷರಾದ ಟಿ.ಜಿ. ನರೇಂದ್ರನಾಥ್, ಸಿದ್ದೇಶ್ ಯಾದವ್, ಡಿ.ಟಿ. ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ, ಮುರಳಿ, ರತ್ನಮ್ಮ, ಮುಖಂಡರಾದ ಜೈಪಾಲ್, ನಾಗರಾಜ ಬೇದ್ರೆ, ದಗ್ಗೆ ಶಿವಪ್ರಕಾಶ್, ನರೇಂದ್ರ, ಶ್ಯಾಮಲಾ ಶಿವಪ್ರಕಾಶ್, ಮಹೇಶ್ವರಪ್ಪ, ನೆಲ್ಲಿಕಟ್ಟೆ ಜಗದೀಶ್, ಚಿತ್ರ ರವಿ, ಶಂಭು, ಶಿವಣ್ಣ ಆಚಾರ್, ಅರುಣ್, ವಿಜಯಕುಮಾರ್, ಶೈಲಜಾ ರೆಡ್ಡಿ, ಹನುಮಕ್ಕ,
ದಾಕ್ಷಾಯಿಣಿ, ಚಂದ್ರಿಕಾ ಲೋಕನಾಥ್, ರೇಖಾ, ಮೋಹನ್ ಸಿರಿಗೆರೆ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.