ಗಡಿ ಭಾಗದ ಚೆಕ್‌ಪೋಸ್ಟ್‌ಗೆ ಚುನಾವಣಾಧಿಕಾರಿ ಭೇಟಿ
Team Udayavani, Apr 9, 2018, 5:06 PM IST
ಚಳ್ಳಕೆರೆ: ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆಂಧ್ರಪ್ರದೇಶಕ್ಕೆ ಹೊಂದಿಕೊಂಡಿರುವ ಹಲವಾರು ಪ್ರದೇಶಗಳಿವೆ. ಈ ಪ್ರದೇಶಗಳಲ್ಲಿ ಈಗಾಗಲೇ ಪೊಲೀಸ್ ಹಾಗೂ ಕಂದಾಯ ಇಲಾಖೆ ಸಹಯೋಗದೊಂದಿಗೆ ಚೆಕ್‌ಪೋಸ್ಟ್ ಸ್ಥಾಪಿಸಲಾಗಿದೆ. ಚುನಾವಣಾಧಿಕಾರಿ ಬಿ. ಆನಂದ್ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿ ಪರಿಶೀಲಿಸಿದರು.
ದೊಡ್ಡಚೆಲ್ಲೂರು, ಕಡೇಹುಡೆ, ಸಿದ್ದೇಶ್ವರನದುರ್ಗ, ಪಾತಪ್ಪನಗುಡಿ ಮುಂತಾದ ಪ್ರದೇಶಗಳಿಗೆ ದಿಢೀರ್ ಭೇಟಿ ನೀಡಿ ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳೊಂದಿಗೆ ಚರ್ಚೆ ನಡೆಸಿದರು. ಚೆಕ್‌ಪೋಸ್ಟ್ ಮೂಲಕ ಹಾದುಹೋಗುವ ಎಲ್ಲ ವಾಹನಗಳ ತಪಾಸಣೆ ನಡೆಸಬೇಕು. ಅನುಮಾನ ಕಂಡುಬಂದಲ್ಲಿ ಕೂಡಲೇ ಹಿರಿಯ ಅಧಿಕಾರಿಗಳ ಗಮನಕ್ಕೆ ತರುವಂತೆ ಸೂಚನೆ ನೀಡಿದರು.
ಗಡಿಭಾಗದಲ್ಲಿರುವ ಆಂಧ್ರಪ್ರದೇಶದ ಹಲವಾರು ಗ್ರಾಮಗಳ ಜನರಿಗೂ ತಾಲೂಕಿನ ಜನರಿಗೂ ಅನ್ಯೋನ್ಯತೆ ಇದೆ. ಹಾಗಾಗಿ ಅಕ್ರಮ ಮದ್ಯ ಸೇರಿದಂತೆ ಇನ್ನಿತರ ಚಟುವಟಿಕೆಗಳು ನಡೆಯುವ ಸಾಧ್ಯತೆ ಇದೆ. ಆದ್ದರಿಂದ ಸಿಬ್ಬಂದಿ ಜಾಗರೂಕರಾಗಿರಬೇಕು ಎಂದರು.
ಇದೇ ಸಂದರ್ಭದಲ್ಲಿ ವಿವಿಧ ಗ್ರಾಮಗಳಿಗೆ ತೆರಳಿ ವಿವಿ ಪ್ಯಾಟ್ ಬಳಕೆ ಬಗ್ಗೆ ಮತದಾರರೊಂದಿಗೆ ಚರ್ಚೆ ನಡೆಸಿದರು. ಚುನಾವಣಾ ಸಿಬ್ಬಂದಿ ಗ್ರಾಮೀಣ ಜನರಿಗೆ ಇನ್ನೂ ಹೆಚ್ಚಿನ ಮಾರ್ಗದರ್ಶನ ನೀಡುವ ಅವಶ್ಯಕತೆ ಇದೆ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ಜನರು ಈ ಬಗ್ಗೆ ತಿಳಿದುಕೊಳ್ಳುವ ಆಸಕ್ತಿ ಹೊಂದಿದ್ದು, ಸಂಬಂಧಪಟ್ಟ ಅಧಿಕಾರಿಗಳು ಜನರಿಗೆ ಸೂಕ್ತ ರೀತಿಯಲ್ಲಿ ತಿಳುವಳಿಕೆ ನೀಡಬೇಕೆಂದರು. ಈ ಸಂದರ್ಭದಲ್ಲಿ ಚುನಾವಣಾ ಸಿಬ್ಬಂದಿ ಶ್ರೀಧರ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
ByPolls; ಕಾಂಗ್ರೆಸ್ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.