ದುಡಿಯೋಣ ಬಾ ಅಭಿಯಾನದಡಿ ನಿರಂತರ ಉದ್ಯೋಗ

ಮಾರ್ಚ್‌ 15 ರಿಂದ ಜೂನ್‌ ಅಂತ್ಯದವರೆಗೂ ಅಭಿಯಾನ: ಡಾ| ಕೆ.ನಂದಿನಿದೇವಿ

Team Udayavani, Apr 6, 2022, 4:05 PM IST

employment

ಚಿತ್ರದುರ್ಗ: ತಾಲೂಕಿನ ಗೋನೂರು ಗ್ರಾಮಕ್ಕೆ ಮಂಗಳವಾರ ಬೆಳಗ್ಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಕೆ.ನಂದಿನಿದೇವಿ ಭೇಟಿ ನೀಡಿ ನರೇಗಾ ಯೋಜನೆಯಡಿ ‘ದುಡಿಯೋಣು ಬಾ’ ಅಭಿಯಾನದಡಿ ಕೈಗೊಂಡಿರುವ ಚಟುವಟಿಕೆಗಳನ್ನು ವೀಕ್ಷಿಸಿದರು. ಗ್ರಾಮದ ಜನಪ್ರತಿನಿಧಿಗಳು, ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರು ಹಾಗೂ ಸಾರ್ವಜನಿಕರೊಂದಿಗೆ ಗ್ರಾಮದ ಮನೆಮನೆಗೆ ತೆರಳಿ ಕರಪತ್ರಗಳನ್ನು ಹಂಚುವ ಮೂಲಕ ದುಡಿಯೋಣ ಬಾ ಯೋಜನೆ ಕುರಿತು ಜಾಗೃತಿ ಮೂಡಿಸಿದರು.

ನಂತರ ಘನತ್ಯಾಜ್ಯ ವಿಲೇವಾರಿ ಘಟಕ ವೀಕ್ಷಿಸಿದರು. ಈ ವೇಳೆ ಮಾತನಾಡಿದ ಅವರು, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮೀಣ ಪ್ರದೇಶದ ಎಲ್ಲರಿಗೂ ಬೇಸಿಗೆಯಲ್ಲಿ ನಿರಂತರ ಉದ್ಯೋಗ ಕಲ್ಪಿಸಲು ಮಾರ್ಚ್‌ 15 ರಿಂದ ಜೂನ್‌ ಅಂತ್ಯದವರೆಗೂ ‘ದುಡಿಯೋಣ ಬಾ’ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು. ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಭಾಗದ ಜನರಿಗೆ ನಿರಂತರ ಉದ್ಯೋಗ ಒದಗಿಸುವುದು ಮತ್ತು ಅದರ ಮೂಲಕ ಗ್ರಾಮದ ನೈಸರ್ಗಿಕ ಜಲ ಸಂಪನ್ಮೂಲಗಳ ಅಭಿವೃದ್ಧಿ, ಹಸಿರೀಕರಣ ಮತ್ತು ಅರ್ಹ ಫಲಾನುಭವಿಗಳ ವೈಯಕ್ತಿಕ ಆಸ್ತಿಗಳನ್ನು ಸುಸ್ತಿರ ಮಾಡುವ ಮೂಲಕ ಉದ್ಯೋಗ ಅವಕಾಶಗಳನ್ನು ಸೃಷ್ಟಿಸಲು ಕ್ರಮವಹಿಸಲಾಗುತ್ತಿದೆ ಎಂದರು.

ಉದ್ಯೋಗ ಚೀಟಿಯಲ್ಲಿ ಕುಟುಂಬ ಸದಸ್ಯರ ಹೆಸರು ಹೊಸದಾಗಿ ಸೇರ್ಪಡೆ, ಆಧಾರ್‌ ಅಥವಾ ಬ್ಯಾಂಕ್‌ ಖಾತೆ ನಂಬರ್‌ ತಿದ್ದುಪಡಿ ಅಥವಾ ಹೊಸ ಉದ್ಯೋಗ ಚೀಟಿ ಮತ್ತು ಬೇಸಿಗೆಯಲ್ಲಿ ಉದ್ಯೋಗಕ್ಕಾಗಿ ಬೇಡಿಕೆ ಸಲ್ಲಿಸಲು ಗ್ರಾಮ ಪಂಚಾಯಿತಿಗೆ ಭೇಟಿ ನೀಡಬಹುದಾಗಿದೆ ಎಂದರು.

ಗೋನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಟಿ.ಗೀತಾ, ಸದಸ್ಯರಾದ ಮಂಜುನಾಥ್‌, ಮಾಳಿಗೆ ಪಾಪಯ್ಯ, ಸಾಕಮ್ಮ, ಬಸವರಾಜ್‌, ಪಾಪಣ್ಣ, ಕೃಷ್ಣಮೂರ್ತಿ, ಮಲ್ಲಿಕಾರ್ಜುನ, ಕಾಟಯ್ಯ, ರಾಘವೇಂದ್ರ, ಕಮಲಮ್ಮ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಚ್‌.ಹನುಮಂತಪ್ಪ, ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಸಹಾಯಕ ನಿರ್ದೇಶಕ ಪಿ.ಟಿ. ಧನಂಜಯ, ಪಿಡಿಒ ಎಚ್‌.ಯರ್ರಿಸ್ವಾಮಿ ಮತ್ತಿತರರಿದ್ದರು.

ಟಾಪ್ ನ್ಯೂಸ್

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.