Siddaramaiah ವಿರುದ್ಧ “ಹರಿ’ಹಾಯುವುದು ಸಲ್ಲ: ಈಶ್ವರಾನಂದಪುರಿ ಸ್ವಾಮೀಜಿ
Team Udayavani, Sep 13, 2023, 12:26 AM IST
ಹೊಸದುರ್ಗ: ಪ್ರಬುದ್ಧ ರಾಜಕಾರಣಿಯಾಗಿರುವ ಬಿ.ಕೆ.ಹರಿಪ್ರಸಾದ ಅವರಿಂದ ಹೊಟ್ಟೆಕಿಚ್ಚಿನ ಮಾತುಗಳನ್ನು ನಾವು ನಿರೀಕ್ಷೆ ಮಾಡಿರಲಿಲ್ಲ. ಸಿಎಂ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಿದಾಕ್ಷಣ ಅವರು ಯಾವ ಸಾಧನೆಯನ್ನೂ ಮಾಡಲು ಆಗುವುದಿಲ್ಲ ಎಂದು ಕಾಗಿನೆಲೆ ಕನಕ ಗುರುಪೀಠದ ಹೊಸದುರ್ಗ ಶಾಖಾ ಮಠದ ಈಶ್ವರಾನಂದಪುರಿ ಸ್ವಾಮೀಜಿ ಹೇಳಿದರು.
ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣದ ನಿಮಿತ್ತ ನಡೆದ ಧಾರ್ಮಿಕ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಶ್ರೀಗಳು, ಸಿದ್ದರಾಮಯ್ಯ ಅವರನ್ನು ನೋಡಿ ರಾಜ್ಯದ ಜನ ಮತ ಹಾಕಿದ್ದಾರೆ. ರಾಜ್ಯದ ಜನರ ಆಶೀರ್ವಾದ, 136 ಶಾಸಕರ ಬೆಂಬಲ, ಹೈಕಮಾಂಡ್ ನಿರ್ಧಾರದಿಂದ ಸಿದ್ದರಾಮಯ್ಯ 2ನೇ ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಸ್ಥಾನಮಾನ ಸಿಕ್ಕಿಲ್ಲ ಎನ್ನುವ ಕಾರಣಕ್ಕೆ ಸಿದ್ದರಾಮಯ್ಯ ವಿರುದ್ಧ ಮಾತನಾಡುವುದನ್ನು ನಾವು ಸಹಿಸುವುದಿಲ್ಲ. ರಾಷ್ಟ್ರ ರಾಜಕಾರಣದಲ್ಲಿ ಅನುಭವವುಳ್ಳ ಬಿ.ಕೆ. ಹರಿಪ್ರಸಾರ್ ಅವರಿಂದ ಇಂತಹ ಮಾತುಗಳನ್ನು ನಾವು ನಿರೀಕ್ಷೆ ಮಾಡಿರಲಿಲ್ಲ ಎಂದರು.
ಒಬ್ಬನೇ ಒಬ್ಬ ಕುರುಬ ಮಂತ್ರಿ
ಲಿಂಗಾಯತ, ಒಕ್ಕಲಿಗ ಮುಖ್ಯಮಂತ್ರಿ ಆದಾಗ ಸ್ವಜಾತಿ ಸಚಿವರೇ ಹೆಚ್ಚಾಗಿ ಇರುತ್ತಾರೆ. ಆದರೆ ಸಿದ್ದರಾಮಯ್ಯ ಸಚಿವ ಸಂಪುಟ ಬಸವಣ್ಣನ ಅನುಭವ ಮಂಟಪದ ಮಾದರಿಯಲ್ಲಿದೆ. ಅಲ್ಲಿ ಎಲ್ಲ ಜಾತಿ, ಜನಾಂಗದವರಿಗೂ ಸಚಿವ ಸ್ಥಾನ ನೀಡಿದ್ದಾರೆ. ಮೊದಲ ಬಾರಿ ಮುಖ್ಯಮಂತ್ರಿ ಆದಾಗ ಕುರುಬ ಸಮಾಜದ ಒಬ್ಬರು ಮಾತ್ರ ಸಚಿವರಾಗಿದ್ದರು. ಈ ಬಾರಿಯೂ ಒಬ್ಬರಿಗೆ ಮಾತ್ರ ಅವಕಾಶ ನೀಡಿದ್ದಾರೆ. ಸಿದ್ದರಾಮಯ್ಯ ಎಂದಿಗೂ ಜಾತಿ ರಾಜಕಾರಣ ಮಾಡಿಲ್ಲ ಎಂಬುದನ್ನು ಹರಿಪ್ರಸಾದ್ ಅರ್ಥ ಮಾಡಿಕೊಳ್ಳಬೇಕು ಎಂದರು.
ಕನ್ನಡಿಗರ ಆಸ್ತಿ
ಸಿದ್ದರಾಮಯ್ಯ ತಮ್ಮ ರಾಜಕೀಯ ಜೀವನದುದ್ದಕ್ಕೂ ಬಡವರ, ಮಹಿಳೆಯರ, ದಲಿತರ ಪರವಾಗಿ ಧ್ವನಿ ಎತ್ತಿದ ಜನ ನಾಯಕ. ಶೋಷಿತ, ಧ್ವನಿ ಇಲ್ಲದ ಜನಾಂಗಗಳಿಗೆ, ಅವಕಾಶ ವಂಚಿತರಿಗೆ ರಾಜಕೀಯ ಶಕ್ತಿ ತುಂಬಿದವರು. ಅವರ ರಾಜಕೀಯ ಜೀವನ ಆದರ್ಶ ಮತ್ತು ಅನುಕರಣೀಯ. ಅಹಿಂದ ಬಗ್ಗೆ ಸಿದ್ದರಾಮಯ್ಯ ಅವರಿಗೆ ಇರುವ ಬದ್ಧತೆಯನ್ನು ಹಿಂದುಳಿದ ವರ್ಗದ ಜನರು ಅರ್ಥ ಮಾಡಿಕೊಳ್ಳಬೇಕು. ರಾಜ್ಯದ ಜನರು ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲಬೇಕು. ಅವರು ಕನ್ನಡಿಗರ ಆಸ್ತಿಯಾಗಿದ್ದು, ಕೋಟ್ಯಂತರ ಜನರ ಮನಸ್ಸಿನಲ್ಲಿ ಹಾಸು ಹೊಕ್ಕಾಗಿದ್ದಾರೆ. ಅದನ್ನು ಯಾರಿಂದಲೂ ಅಳಿಸಿ ಹಾಕಲು ಸಾಧ್ಯವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.