ನಾರಾಯಣಗೌಡ ಬಿಟ್ಟು ನಾವ್ಯಾರೂ ಕಾಂಗ್ರೆಸ್ ಸೇರಲ್ಲ: ಸಚಿವ ಬಿ.ಸಿ.ಪಾಟೀಲ್
Team Udayavani, Mar 7, 2023, 6:40 AM IST
ಚಿತ್ರದುರ್ಗ: ಬಿಜೆಪಿಗೆ ವಲಸೆ ಬಂದ 17 ಶಾಸಕರ ಪೈಕಿ ಸಚಿವ ನಾರಾಯಣಗೌಡ ಮಾತ್ರ ಕಾಂಗ್ರೆಸ್‌ಗೆ ಹೋಗುತ್ತಾರೆ ಎನ್ನುವ ಮಾಹಿತಿಯಿದೆ. ನಾವ್ಯಾರೂ ಕಾಂಗ್ರೆಸ್ ಸೇರುವುದಿಲ್ಲ. ಕಾಂಗ್ರೆಸ್, ಜೆಡಿಎಸ್ ಪಕ್ಷಗಳಿಂದಲೇ ಅನೇಕರು ಬಿಜೆಪಿಗೆ ಬರಲಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್‌ನವರಿಗೆ ಮಾಡಲು ಕೆಲಸವಿಲ್ಲ. ಹೀಗಾಗಿ ಮಾ.9ರಂದು ಬಂದ್ ಮಾಡಲು ಹೊರಟಿದ್ದಾರೆ. ಅವರು ನಿರುದ್ಯೋಗಿಗಳು, ಜೀವಂತ ಇದ್ದೇವೆ ಎನ್ನುವುದನ್ನು ತೋರಿಸಲು ಪ್ರತಿಭಟಿಸುತ್ತಾರೆ. ಆದರೆ ನಮಗೆ ಮಾಡಲು ಸಾಕಷ್ಟು ಅಭಿವೃದ್ಧಿ ಕೆಲಸಗಳಿವೆ. ಡಿ.ಕೆ. ಶಿವಕುಮಾರ್ ಕಲೆಕ್ಷನ್ ಶೂರರು. ಸಿಎಂ ಬಗ್ಗೆ ಅವರಾಡುವ ಮಾತು ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತಾಗುತ್ತದೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಯಾವ ಬೆಂಬಲಿಗರಿಗೂ ಟಿಕೆಟ್ ತಪ್ಪುವ ಭೀತಿ ಇಲ್ಲ. ಇದು ಸತ್ಯಕ್ಕೆ ದೂರವಾದ ಮಾತು.
ಯಡಿಯೂರಪ್ಪ ನಮ್ಮ ಪಕ್ಷದ ಭೀಷ್ಮ. ಮಾಡಾಳು ವಿರೂಪಾಕ್ಷಪ್ಪ ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಈಗಾಗಲೇ ಲುಕ್‌ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಲೋಕಾಯುಕ್ತ ಸಂಸ್ಥೆ ಸ್ವತಂತ್ರವಾಗಿ ತನಿಖೆ ಮಾಡುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ಹೊಸ ಸೇರ್ಪಡೆ
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.