ರೈತರ ಬಿಪಿಎಲ್‌ ಕಾರ್ಡ್‌ ರದ್ದತಿಗೆ ಆಕ್ಷೇಪ


Team Udayavani, Oct 24, 2021, 1:52 PM IST

Farmers’ BPL Card

ಚಿತ್ರದುರ್ಗ: ಜಿಲ್ಲೆಯಾದ್ಯಂತ ಅನೇಕ ರೈತರ ಬಿಪಿಎಲ್‌ಕಾರ್ಡ್‌ಗಳನ್ನು ರದ್ದು ಮಾಡಲಾಗಿದೆ. ಈ ಆದೇಶವನ್ನುಹಿಂಪಡೆದು ಮತ್ತೆ ರೈತರಿಗೆ ಬಿಪಿಎಲ್‌ ಕಾರ್ಡ್‌ನೀಡಬೇಕು ಎಂದು ರೈತ ಸಂಘದ ರಾಜ್ಯ ಗೌರವಾಧ್ಯಕ್ಷಈಚಘಟ್ಟ ಸಿದ್ಧವೀರಪ್ಪ ಒತ್ತಾಯಿಸಿದರು.

ನಗರದ ಪ್ರವಾಸಿಮಂದಿರದಲ್ಲಿ ಶನಿವಾರಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಸೇರಿದಂತೆ ಇಡೀ ದೇಶದಲ್ಲಿ ಕೊರೊನಾ ಸಂಕಷ್ಟದಿಂದಜನರು ತತ್ತರಿಸಿದ್ದಾರೆ. ಅದರಿಂದ ಇನ್ನೂ ಹೊರ ಬಂದಿಲ್ಲ.ದುಡಿಯುವ ಕೈಗಳಿಗೆ ಕೆಲಸವಿಲ್ಲದೆ ಕಷ್ಟಪಡುತ್ತಿದ್ದಾರೆ.

ರೈತರ ಜಮೀನುಗಳಲ್ಲಿ ಬೆಳೆಗಳು ಹಾಳಾಗಿ ನಷ್ಟಅನುಭವಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಜಿಲ್ಲೆಯಲ್ಲಿಅನೇಕ ಜನರ ಬಿಪಿಎಲ್‌ ಕಾರ್ಡ್‌ ರದ್ದು ಮಾಡಲಾಗಿದೆಎಂದು ಅಸಮಾಧಾನ ವ್ಯಕ್ತಪಡಿಸಿದರು.ಅನೇಕ ಜನರ ಜಮೀನುಗಳು ಅವರತಂದೆಯ ಹೆಸರಿನಲ್ಲಿವೆ. ಮಕ್ಕಳು ಆ ಜಮೀನನ್ನುಅನುಭವಿಸುತ್ತಿದ್ದಾರೆ.

ಇತ್ತೀಚಿನ ಮಳೆ ಪರಿಸ್ಥಿತಿ, ದುಬಾರಿಕೂಲಿ, ಕೃಷಿ ಉತ್ಪನ್ನಗಳಿಗೆ ಬೆಲೆ ಸಿಗದೆ ಇರುವುದು, ಈಎಲ್ಲಾ ಅಂಶಗಳಿಂದ ಕೃಷಿ ಮಾಡುವುದೇ ದುಸ್ತರವಾಗಿದೆ.ಸೂಕ್ತ ಬೆಲೆ ಇಲ್ಲದ ಕಾರಣ ಎಷ್ಟೋ ರೈತರು ಬೆಳೆ ಕಟಾವುಮಾಡಿಲ್ಲ. ಹೊಲದಲ್ಲೇ ಕೊಳೆಯುತ್ತಿದೆ. ಇಂತಹಪರಿಸ್ಥಿತಿಯಲ್ಲಿ ಸರ್ಕಾರ ನೀಡುವ ಪಡಿತರ ಧಾನ್ಯಅವರ ಜೀವನಕ್ಕೆ ನೆರವಾಗುತ್ತಿದೆ. ಈಗ ಬಿಪಿಎಲ್‌ಕಾರ್ಡ್‌ ರದ್ದು ಮಾಡಿರುವುದು ಗಾಯದ ಮೇಲೆ ಬರೆಎಳೆದಂತಾಗಿದೆ ಎಂದು ದೂರಿದರು.

ಜಿಲ್ಲೆಯಲ್ಲಿ ಈಗಾಗಲೇ 18 ಸಾವಿರಕ್ಕೂ ಹೆಚ್ಚುಕಾರ್ಡ್‌ಗಳನ್ನು ರದ್ದು ಮಾಡಲಾಗಿದೆ. ಇನೂ 9 ಸಾವಿರಕಾರ್ಡ್‌ಗಳ ರದ್ದು ಮಾಡಲು ಸಿದ್ಧತೆ ನಡೆಯುತ್ತಿದೆ.ಕಾರ್ಡ್‌ಗಳನ್ನು ಹಿಂಪಡೆಯುವ ಮುನ್ನ ರೈತರ ಸ್ಥಿತಿಗತಿಅರಿತುಕೊಳ್ಳಬೇಕು. ಕೆಲವು ಕುಟುಂಬದಲ್ಲಿ ಏಕವ್ಯಕ್ತಿಇದ್ದಾರೆ. ಮಕ್ಕಳು ಮರಿ ಇರುವುದಿಲ್ಲ. ಅಂತಹವರಿಗೆಕಾರ್ಡ್‌ ನೀಡಲಾಗಿಲ್ಲ. ಕುಟುಂಬದಲ್ಲಿ ಒಬ್ಬರುಆದಾಯ ತೆರಿಗೆ ಕಟ್ಟಿದಲ್ಲಿ ಆ ಕುಟುಂಬ ಎಲ್ಲ ಸದಸ್ಯರಿಗೆಪಡಿತರ ಧಾನ್ಯ ನೀಡಲು ನಿರಾಕರಿಸಲಾಗುತ್ತಿದೆ.

ಇದುಸರಿಯಲ್ಲ, ಈ ಕುರಿತು ಸಂಬಂ ಸಿದ ಅಧಿ ಕಾರಿಗಳುಪರಿಶೀಲನೆ ನಡೆಸಬೇಕೆಂದರು.ಜನರು ಕೊರೋನಾ ಸಂಕಷ್ಟದಿಂದ ಇನ್ನೂ ಹೊರಗೆಬಂದಿಲ್ಲ. ಹಾಗಾಗಿ ರದ್ದು ಮಾಡಿರುವ ಎಲ್ಲ ಕಾಡ್‌ìಗಳನ್ನು ಮುಂದಿನ ತಿಂಗಳ ಮೊದಲ ವಾರದೊಳಗಾಗಿ ನೀಡಬೇಕು.

ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ಹಂತಹಂತವಾಗಿ ಹೋರಾಟ ನಡೆಸಲಾಗುವುದು ಎಂದುಎಚ್ಚರಿಸಿದರು.ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷಡಿ.ಎಸ್‌.ಹಳ್ಳಿ ಮಲ್ಲಿಕಾರ್ಜುನ್‌, ಹೊಳಲ್ಕೆರೆ ತಾಲ್ಲೂಕು ಅಧ್ಯಕ್ಷ ಬಸವರಾಜಪ್ಪ, ಚಿತ್ರದುರ್ಗ ತಾಲ್ಲೂಕು ಅಧ್ಯಕ್ಷಜಿ.ಆರ್‌.ಹಳ್ಳಿ ಪ್ರವೀಣ್‌, ತೊಡರನಹಾಳ್‌, ಶಂಕರಪ್ಪ,ಚಿಕ್ಕಂದವಾಡಿ ನಾಗರಾಜ್‌ ಇತರರು ಇದ್ದರು.

ಟಾಪ್ ನ್ಯೂಸ್

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

6

Bantwal: ತುಂಬೆ ಜಂಕ್ಷನ್‌; ಸರಣಿ ಅಪಘಾತ

Untitled-1

Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು

Brahmavar

Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.