ರೈತರಿಗಿದೆ ಸರ್ಕಾರದ ಸಾಲ ತೀರಿಸುವ ಸಾಮರ್ಥ್ಯ
Team Udayavani, Jan 15, 2022, 9:53 PM IST
ಭರಮಸಾಗರ: ಬಿಚ್ಚುಗತ್ತಿ ಭರಮಣ್ಣನಾಯಕ 332 ವರ್ಷಗಳ ಹಿಂದೆ ಕೆರೆ ಕಟ್ಟಿಸಿದ್ದರಿಂದ ಭರಮಸಾಗರ ಕೆರೆಗೆ ನೀರು ತುಂಬಿಸಲು ಸಾಧ್ಯವಾಯಿತು ಎಂದು ಸಿರಿಗೆರೆ ತರಳಬಾಳು ಬೃಹನ್ಮಠದ ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಇಲ್ಲಿನ ದೊಡ್ಡಕೆರೆಯಲ್ಲಿ ಆಯೋಜಿಸಿದ್ದ ಬಾಗಿನ ಅರ್ಪಣೆ ಮತ್ತು ಗಂಗಾ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಜಗಳೂರು ಮತ್ತು ಭರಮಸಾಗರ ಏತ ನೀರಾವರಿ ಯೋಜನೆಗಳು ಅವಳಿ ಜವಳಿ ಮಕ್ಕಳಿದ್ದಂತೆ ಎಂದರು. ರೈತರು ಸೋಮಾರಿಗಳಲ್ಲ. ರೈತರಿಗೆ ನೀರು ನೀಡಿದರೆ ಸರ್ಕಾರದ ಸಾಲ ತೀರಿಸುವ ಸಾಮರ್ಥ್ಯವಿದೆ. ಜಗಳೂರು ಏತನೀರಾವರಿ ಯೋಜನೆ ಇಷ್ಟೋತ್ತಿಗೆ ಯಶಸ್ವಿಯಾಗಿ ಪೂರ್ಣಗೊಳ್ಳಬೇಕಿತ್ತು. ಆದರೆ ದಾವಣಗೆರೆ ತಾಲೂಕಿನ ಕಕ್ಕರಗೊಳ್ಳ ಗ್ರಾಮದ ಬಳಿ 800 ಮೀಟರ್ ಉದ್ದದ ಪೈಪ್‌ಲೈನ್ ಕಾಮಗಾರಿಗೆ ಕೆಲ ರೈತರು ಅಡ್ಡಿಪಡಿಸುತ್ತಿದ್ದಾರೆ. ಆರು ಕೋಟಿ ಪರಿಹಾರ ಕೇಳುತ್ತಿದ್ದಾರೆ.
ಮನುಷ್ಯನ ಸ್ವಾರ್ಥಕ್ಕೆ ಕೊನೆಯೇ ಇಲ್ಲವಾಗಿದೆ. ನಮ್ಮ ಹೆಸರಿನ ಮುಂದೆ 1108 ಎಂಬ ಸಂಖ್ಯೆಯಿದೆ. ಅದು ನಮ್ಮ ಮಠದ ಶ್ರೇಷ್ಠತೆಗೆ ರಾಜಮಹಾರಾಜರು ಕೊಟ್ಟ ಬಿರುದಾವಳಿಯಾಗಿದೆ. ಮರಳಸಿದ್ದರಿಂದ ಇಲ್ಲಿಯವರೆಗೆ ನಾವು 21ನೇ ಗುರುಗಳಾಗಿದ್ದೇವೆ ಎಂದರು. ಪೂರ್ಣ ಕುಂಭ ಹೊತ್ತ ಮಹಿಳೆಯರು ಶ್ರೀಗಳನ್ನು ಸ್ವಾಗತಿಸಿದರು. ಗಂಗಾಪೂಜೆ, ಶ್ರೀಗಳಪಾದ ಪೂಜೆ ಸಲ್ಲಿಸಲಾಯಿತು. ಬಳಿಕ ಕೆರೆಗೆ ಬಾಗಿನ ಅರ್ಪಿಸಲಾಯಿತು. ಜಗಳೂರು ಮಾಜಿ ಶಾಸಕ ಎಚ್.ಪಿ. ರಾಜೇಶ್, ಎಚ್. ಎನ್. ತಿಪ್ಪೇಸ್ವಾಮಿ, ಡಿ.ವಿ. ಶರಣಪ್ಪ, ಶಶಿ ಪಾಟೀಲ್, ಎಚ್.ಎಂ. ಮಂಜುನಾಥ್, ತೀರ್ಥಪ್ಪ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.