ಬೆಸ್ಕಾಂ ಕಾರ್ಯವೈಖರಿಗೆ ರೈತರ ಆಕ್ರೋಶ
Team Udayavani, Feb 16, 2021, 6:34 PM IST
ಹೊಳಲ್ಕೆರೆ: ನೀರಾವರಿ ಅಧಾರಿತ ಕೃಷಿ ಹಾಗೂ ತೋಟಗಾರಿಕೆ ಬೆಳೆ ಉಳಿಸಿಕೊಳ್ಳಲು ನೀರು ಬೇಕು. ಆದರೆ ಕೊಳವೆಬಾವಿಗಳಿಗೆ ಬೆಸ್ಕಾಂ ಸಮರ್ಪಕ ವಿದ್ಯುತ್ ಸಂಪರ್ಕ ಕಲ್ಪಿಸುತ್ತಿಲ್ಲ ಎಂದು ಆರೋಪಿಸಿ ತಾಲೂಕು ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಪಟ್ಟಣದ ಬೆಸ್ಕಾಂ ಕಚೇರಿ ಮುಂಭಾಗದಲ್ಲಿ ಅನಿರ್ದಿಷ್ಟ ಧರಣಿ ನಡೆಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ರೈತ ಸಂಘದ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ಧವೀರಪ್ಪ ಮಾತನಾಡಿ, ಕಳೆದ ಎರಡು ವರ್ಷಗಳಿಂದ ಸಮರ್ಪಕ ವಿದ್ಯುತ್‌ಸೌಲಭ್ಯವಿಲ್ಲದೆ ತಾಲೂಕಿನ ರೈತರು ಸಂಕಷ್ಟದಲ್ಲಿದ್ದಾರೆ.ತೋಟಗಾರಿಕೆ ಬೆಳೆಗಳನ್ನು ಉಳಿಸಿಕೊಳ್ಳಲು ಹೋರಾಟನಡೆಸುವ ಸ್ಥಿತಿ ನಿರ್ಮಾಣವಾಗಿದೆ. ಇಂಧನ ಇಲಾಖೆ ದಿನಕ್ಕೆ 7 ಗಂಟೆ ಬದಲಿಗೆ 1 ಗಂಟೆ ವಿದ್ಯುತ್ ನೀಡುತ್ತಿದೆ. ಇದರಿಂದ ತೋಟಗಾರಿಕೆ ಬೆಳೆ ನೀರಿಲ್ಲದೆ ಒಣಗುವ ಸ್ಥಿತಿ ತಲುಪಿದೆ. ಜತೆಗೆ ರಾತ್ರಿ ಹೊತ್ತು ವಿದ್ಯುತ್ ನೀಡುವ ಕ್ರಮ ಸರಿಯಲ್ಲ. ರಾತ್ರಿ ಹೊತ್ತು ದೂರದ ತೋಟಗಳಲ್ಲಿ ಒಬ್ಬರೇ ನೀರು ಕಟ್ಟಲು ಸಾಧ್ಯವಿಲ್ಲ. ವನ್ಯಮೃಗ ಹಾಗೂ ವಿಷ ಜಂತುಗಳಿಗೆ ರೈತರು ಬಲಿಯಾಗುತ್ತಿದ್ದಾರೆ.
ಹಾಗಾಗಿ ನಿತ್ಯ 5 ಗಂಟೆ ವಿದ್ಯುತ್ ಸೌಲಭ್ಯ ಕಲ್ಪಿಸಿ ಕೊಡುವ ತನಕ ಬೆಸ್ಕಾಂ ಕಚೇರಿ ಆವರಣ ಬಿಟ್ಟು ಯಾವ ರೈತರೂ ಮನೆಗಳಿಗೆ ಹೋಗುವುದಿಲ್ಲ ಎಂದು ಘೋಷಿಸಿದರು. ಪ್ರತಿಭಟನೆಯಲ್ಲಿ ರೈತ ಸಂಘದ ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ, ಜಿಲ್ಲಾಧ್ಯಕ್ಷ ಚಿಕ್ಕಬ್ಬಿಗೆರೆ ನಾಗರಾಜು, ಜಿಲ್ಲಾ ಕಾರ್ಯಾಧ್ಯಕ್ಷ ಎಸ್. ಬಯಲಪ್ಪ,ಹೊಳಲ್ಕೆರೆ ತಾಲೂಕು ಅಧ್ಯಕ್ಷ ಅಪ್ಪರಸನಹಳ್ಳಿ ಎಂ.ಬಸವರಾಜಪ್ಪ, ನಗರಾಧ್ಯಕ್ಷ ಲೋಕೇಶ್, ಕಾರ್ಯದರ್ಶಿಅಜಯ್, ಕೋಟ್ರೆ ಶಂಕರಪ್ಪ ಸೇರಿದಂತೆ ಹೊಸದುರ್ಗ, ಚಳ್ಳಕೆರೆ, ಹಿರಿಯೂರು, ಚಿತ್ರದುರ್ಗ ರೈತ ಸಂಘದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.
ಇದಕ್ಕೂ ಮುನ್ನ ಪಟ್ಟಣದ ಚಿತ್ರದುರ್ಗ ಪೆಟ್ರೋಲ್ ಬಂಕ್‌ನಿಂದ ಬೆಸ್ಕಾಂ ಕಚೇರಿ ತನಕ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಕೆರೆಗಳಿಗೆ ನೀರು ತುಂಬಿಸುವ ಕೆಲಸದಿಂದ ತಾಲೂಕಿನಲ್ಲಿರುವ ವಿದ್ಯುತ್ ಸಮಸ್ಯೆಗೆಮುಕ್ತಿ ಸಿಗುವುದಿಲ್ಲ. ಅದರ ಬದಲಿಗೆ ಇನ್ನಷ್ಟು ಭೀಕರ ಪರಿಸ್ಥಿತಿ ಎದುರಿಸಬೇಕಾಗಿ ಬರಬಹುದು. ತಕ್ಷಣ ತಾಲೂಕಿನ ವಿದ್ಯುತ್‌ಸಾಮರ್ಥ್ಯವನ್ನು ದ್ವಿಗುಣಗೊಳಿಸಬೇಕು. ಅದಕ್ಕೆ ಬೇಕಾದ ಎಲ್ಲಾ ಮಾದರಿಯ ಸಿದ್ಧತೆಗಳನ್ನು ಸರಕಾರ ಕೈಗೊಳ್ಳಬೇಕು. –ಈಚಘಟ್ಟದ ಸಿದ್ಧವೀರಪ್ಪ, ರೈತ ಸಂಘದ ಕಾರ್ಯಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.