ಸರ್ಕಾರಕ್ಕಿಲ್ಲ ಜನಪರ ಕಾಳಜಿ: ತಿಪ್ಪೇಸ್ವಾಮಿ
Team Udayavani, Dec 4, 2020, 2:36 PM IST
ಹಿರಿಯೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರೈತ ವಿರೋಧಿ ಕಾಯ್ದೆ ಖಂಡಿಸಿ ದೆಹಲಿಯಲ್ಲಿ ರೈತರ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯವನ್ನು ಖಂಡಿಸಿ ತಾಲೂಕು ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.
ಹೆದ್ದಾರಿ ಸಂಚಾರಕ್ಕೆ ಅಡ್ಡಿ ಪಡಿಸಿದ್ದರಿಂದ ಪ್ರತಿಭಟನಾನಿರತ ರೈತರನ್ನು ಬಂಧಿ ಸಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದತಾಲೂಕು ರೈತ ಸಂಘದ ಅಧ್ಯಕ್ಷ ಕೆ.ಟಿ. ತಿಪ್ಪೇಸ್ವಾಮಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಜನಸಾಮಾನ್ಯರು ಹಾಗೂ ಬಗ್ಗೆ ರೈತರ ಬಗ್ಗೆ ಕಾಳಜಿ ಇಲ್ಲ. ಮಾರಕಕಾಯ್ದೆಗಳಾದ ಎಪಿಎಂಸಿ ಕಾಯ್ದೆ, ಭೂ ಸುಧಾರಣೆಕಾಯ್ದೆ, ವಿದ್ಯುತ್ ಕಾಯ್ದೆಗೆ ತಿದ್ದುಪಡಿ, ವಿದ್ಯುತ್ ಕ್ಷೇತ್ರದ ಖಾಸಗೀಕರಣಗೊಳಿಸುವ ಹುನ್ನಾರದಿಂದ ರೈತರ ಬದುಕು ಸರ್ವನಾಶವಾಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೇಂದ್ರ ಸರ್ಕಾರದ ಧೋರಣೆ ಮುಂದುವರಿದರೆ ದೇಶಾದ್ಯಂತ ರೈತರು ದಂಗೆ ಎದ್ದು ದೊಡ್ಡ ಹೋರಾಟ ಮಾಡುವಂತಹ ಸ್ಥಿತಿ ಎದುರಾಗಬಹುದು ಎಂದು ಎಚ್ಚರಿಸಿದರು.
ರೈತ ಮುಖಂಡ ಕಸವನಹಳ್ಳಿ ರಮೇಶ್ ಮಾತನಾಡಿ, ದೇಶದಲ್ಲಿ ಮೋದಿ ಆಡಳಿತ ಮಾಡುತ್ತಿಲ್ಲ.ಅಂಬಾನಿಯಂತಹ ಶ್ರೀಮಂತರು ಆಡಳಿತ ನಡೆಸುತ್ತಿದ್ದಾರೆ. ಚುನಾವಣೆ ಸಮಯದಲ್ಲಿರೈತರ ಆದಾಯವನ್ನು ದ್ವಿಗುಣ ಮಾಡುತ್ತೇವೆ,ನಿರುದ್ಯೋಗಿಗಳಿಗೆ ಉದ್ಯೋಗ ನೀಡುತ್ತೇವೆ,ಉದ್ಯೋಗ ಸೃಷ್ಟಿ ಮಾಡುತ್ತೇವೆ, ವಿದೇಶಲ್ಲಿನ ಕಪ್ಪುಹಣವನ್ನು ವಾಪಸ್ ತರುತ್ತೇವೆಂದು ಹೇಳಿ ಅಧಿಕಾರಕ್ಕೆ ಬಂದರು. ಅಧಿಕಾರ ಸಿಕ್ಕ ನಂತರ ಚುನಾವಣೆ ಸಮಯದಲ್ಲಿ ನೀಡಿದ ಭರವಸೆಗಳನ್ನು ಮರೆತು ವಚನ ಭ್ರಷ್ಟರಾದರು. ಮೋದಿ ಸರ್ಕಾರದಿಂದ ರೈತರ ಕತ್ತು ಹಿಸುಕುವ ಕೆಲಸ ಆಗುತ್ತಿದೆ ಎಂದು ದೂರಿದರು. ಪ್ರ
ತಿಭಟನೆಯಲ್ಲಿ ರೈತ ಮುಖಂಡರಾದ ಸಿದ್ದರಾಮಣ್ಣ, ಅರಳಿಕೆರೆ ತಿಪ್ಪೇಸ್ವಾಮಿ, ತಿಮ್ಮಾರೆಡ್ಡಿ, ಜೈರಾಂ, ಮಹಂತೇಶ್, ಶಿವಣ್ಣ, ವಿರೂಪಾಕ್ಷಪ್ಪ,ಮನೋಹರ, ಸಿದ್ದಪ್ಪ, ಶಶಿಕಲಾ, ತಿಮ್ಮಕ್ಕ ಮತ್ತಿತರರು ಭಾಗವಹಿಸಿದ್ದರು.
ರೈತ ಸಂಘದಿಂದ ರಸ್ತೆ ತಡೆ :
ಚಳ್ಳಕೆರೆ: ಕೇಂದ್ರ ಸರ್ಕಾರದ ರೈತ ವಿರೋಧಿ ಧೋರಣೆ ವಿರೋಧಿಸಿ ನವದೆಹಲಿಯ ಹೊರವಲಯದಲ್ಲಿ ಕಳೆದ ಎಂಟುದಿನಗಳಿಂದ ಮುಷ್ಕರ ನಡೆಸುತ್ತಿರುವ ರೈತರಿಗೆ ಬೆಂಬಲ ಸೂಚಿಸಿ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ರೆಡ್ಡಿಹಳ್ಳಿ ವೀರಣ್ಣ ನೇತೃತ್ವದಲ್ಲಿ ನಗರದಲ್ಲಿ ರಸ್ತೆ ತಡೆ ನಡೆಸಲಾಯಿತು.
ಸುಮಾರು 100ಕ್ಕೂ ಹೆಚ್ಚು ರೈತರು ಕೇಂದ್ರ ಸರ್ಕಾರ ವಿರುದ್ಧ ಧಿಕ್ಕಾರ ಗೂಗುತ್ತಾ ಚಳ್ಳಕೆರೆಯಮ್ಮ ದೇವಸ್ಥಾನದಿಂದ ನೆಹರೂ ಸರ್ಕಲ್‌ಗೆ ಆಗಮಿಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರೆಡ್ಡಿಹಳ್ಳಿ ವೀರಣ್ಣ, ದೇಶದ 130 ಕೋಟಿ ಜನರಿಗೆ
ಆಹಾರ ನೀಡುವ ರೈತರ ದಾರುಣ ಸ್ಥಿತಿಯ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕಾಳಜಿ ಇಲ. ಮುಷ್ಕರ ನಿರತ ರೈತರ ಸಮಸ್ಯೆಯನ್ನು ಆಲಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅಲ್ಲಿನ ರೈತರಿಗೆ ಬೆಂಬಲ ವ್ಯಕ್ತಪಡಿಸುವ ಸಲುವಾಗಿರಸ್ತೆ ತಡೆ ನಡೆಸುತ್ತಿರುವುದಾಗಿ ತಿಳಿಸಿದರು.ಪೊಲೀಸ್ ಇಲಾಖೆಯ ಅನುಮತಿ ಪಡೆದಯದೆ ರಸ್ತೆ ತಡೆ ನಡೆಸಿದ 20ಕ್ಕೂಹೆಚ್ಚು ರೈತರನ್ನು ಪೊಲೀಸರು ಬಂ ಸಿ ಬಿಡುಗಡೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರ ಪೈಕಿ ಓರ್ವ ಮೃತ್ಯು, ಸಹಸವಾರೆ ಗಾಯ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.