ಬರ ಅಧ್ಯಯನ ತಂಡದೆದುರು ಕಣ್ಣೀರಿಟ್ಟ ರೈತರು


Team Udayavani, Nov 19, 2018, 3:53 PM IST

cta-1.jpg

ಚಿತ್ರದುರ್ಗ: ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಕೇಂದ್ರ ಬರ ಅಧ್ಯಯನ ತಂಡ ಭಾನುವಾರ ಭೇಟಿ ನೀಡಿ ಬೆಳೆ ಹಾನಿ ಅಧ್ಯಯನ ನಡೆಸಿತು. ಕೇಂದ್ರ ನೀತಿ ಆಯೋಗದ ಜಂಟಿ ಸಲಹೆಗಾರ ಮಾನಸ್‌ ಚೌಧರಿ ನೇತೃತ್ವದ ನಾಲ್ವರು ಅಧಿಕಾರಿಗಳನ್ನೊಳಗೊಂಡ ಕೇಂದ್ರ ಬರ ಅಧ್ಯಯನ ತಂಡದಲ್ಲಿ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಡೆಪ್ಯೂಟಿ ಜನರಲ್‌ ಮ್ಯಾನೇಜರ್‌ ಸತ್ಯಕುಮಾರ್‌, ಕೇಂದ್ರ ಆರ್ಥಿಕ ವೆಚ್ಚಗಳ ಇಲಾಖೆ ಜಂಟಿ ನಿರ್ದೇಶಕ ಸುಭಾಶ್ಚಂದ್ರ ಮೀನಾ ಹಾಗೂ
ಎಂಎನ್‌ಸಿಎಫ್‌ಸಿಯ ಸಹಾಯಕ ನಿರ್ದೇಶಕಿ ಡಾ| ಶಾಲಿನಿ ಸಕ್ಸೇನಾ ಇದ್ದರು.

ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಲಿಂಗದಹಳ್ಳಿ ಮೂಲಕ ಚಿತ್ರದುರ್ಗ ಜಿಲ್ಲೆಗೆ ಆಗಮಿಸಿದ ತಂಡ, ಚಳ್ಳಕೆರೆ ತಾಲೂಕಿನ ಕೆಂಚಮ್ಮನಹಳ್ಳಿ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ಅವಲೋಕಿಸಿತು. ಅಲ್ಲಿಂದ ಪರಶುರಾಂಪುರ ಗ್ರಾಮಕ್ಕೆ ಆಗಮಿಸಿ ಹತ್ತಾರು ವರ್ಷಗಳ ಕಾಲ ಮಳೆಯಿಲ್ಲದೆ ಸಂಪೂರ್ಣ ಒಣಗಿರುವ ಕೆರೆ ಪರಿಶೀಲನೆ ನಡೆಸಿತು. ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಂಡಿರುವ ಕೆರೆ ಕಾಮಗಾರಿ ಹಾಗೂ ಜನ ಜಾನುವಾರುಗಳಿಗೆ ಮಾಡಲಾಗಿರುವ ಟ್ಯಾಂಕರ್‌ ನೀರು ಪೂರೈಕೆ ವ್ಯಸ್ಥೆಯನ್ನು ಪರಿಶೀಲಿಸಿತು. ಬಳಿಕ ತಿಮ್ಮನಹಳ್ಳಿಯ ಜಮೀನುಗಳಲ್ಲಿ ಶೇಂಗಾ ಕಾಯಿ ಕಟ್ಟದೆ ಒಣಗಿರುವ ಬೆಳೆ ವೀಕ್ಷಣೆ ಮಾಡಿದ ತಂಡದ ಸದಸ್ಯರು, ರೈತರ ಸಮಸ್ಯೆಗಳನ್ನು ಆಲಿಸಿದರು. ಪುರ್ಲೆಹಳ್ಳಿ, ನನ್ನಿವಾಳ ಗ್ರಾಮಗಳ ಬರಪೀಡಿತ ಪ್ರದೇಶ ಹಾಗೂ ಗೋಶಾಲೆಗೆ ಭೇಟಿ ನೀಡಿದರು.

ಕಣ್ಣೀರಿಟ್ಟ ರೈತರು: ಬರ ಅಧ್ಯಯನ ತಂಡದ ಎದುರು ಬೆಳೆ ಕಳೆದುಕೊಂಡ ರೈತರು ಕಣ್ಣೀರಿಟ್ಟರು. ಹೀಗೆ ಬಂದು ಹಾಗೆ ಹೋಗುವ ಕೆಲಸ ಮಾಡಬೇಡಿ. ಸತತ ಹತ್ತು ವರ್ಷಗಳಿಂದ ಜಿಲ್ಲೆಯ ರೈತರು ತೀವ್ರ ಬರಗಾಲಕ್ಕೆ ತುತ್ತಾಗಿ ಸಾಲದ ಸುಳಿಯಲ್ಲಿ ಸಿಲುಕಿದ್ದಾರೆ. ಸಾಲ ಮಾಡಿ ಬಿತ್ತನೆ ಮಾಡಿದ ಶೇಂಗಾ, ಸೂರ್ಯ ಕಾಂತಿ, ಮೆಕ್ಕೆಜೋಳ, ಈರುಳ್ಳಿ ಸೇರಿದಂತೆ ತೋಟಗಾರಿಕೆ ಬೆಳೆಗಳು ಸಂಪೂರ್ಣ ಒಣಗಿ ಹೋಗಿ ಕೋಟ್ಯಂತರ ರೂ.ಗಳ ಬೆಳೆ ಹಾನಿಯಾಗಿದೆ. ಸಾವಿರ ಅಡಿ ಕೊಳವೆಬಾವಿ ಕೊರೆಸಿದರೂ ಹನಿ ನೀರು ಬರುತ್ತಿಲ್ಲ. ಜಾನುವಾರುಗಳನ್ನು ಮಾರಾಟ ಮಾಡಿ ಉದ್ಯೋಗಕ್ಕಾಗಿ ಗುಳೆ ಹೋಗಬೇಕಾಗಿದೆ ಎಂದು ಅಹವಾಲು ಹೇಳಿಕೊಂಡರು. ಬರದ ಬವಣೆಯಿಂದ ಬೇಸತ್ತಿರುವ ರೈತರಿಗೆ ಹೆಚ್ಚಿನ ಪರಿಹಾರ ಕೊಡಿಸುವಂತೆ ಮನವಿ ಮಾಡಿದರು.

ಅಧಿಕಾರಿಗಳು ನೀಡುವ ಅಂಕಿ ಅಂಶಗಳನ್ನು ಪಡೆದು ವಾಪಸ್‌ ಹೋದರೆ ಮತ್ತೆ ಅವರು ಬರುವುದು ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಿದಾಗಲೇ. ಕೇಂದ್ರ ಬರ ಅಧ್ಯಯನ ತಂಡ “ಬಂದ ಪುಟ್ಟ ಹೋದ ಪುಟ್ಟ’ ಎನ್ನುವಂತಾಗಿದೆ. ಕೇಂದ್ರ ಬರ ಅಧ್ಯಯನ ತಂಡ ನೀಡಿದ ಬೆಳೆ ಹಾನಿ ವರದಿಯಿಂದ ಒಂದಿಷ್ಟೂ ಉಪಯೋಗವಾಗಿಲ್ಲ ಎಂದು ಆರೋಪಿಸಿದರು. 

ಸತತ ಬರದ ದವಡೆಗೆ ಸಿಲುಕಿರುವ ಜಿಲ್ಲೆಯಲ್ಲಿ ಈ ವರ್ಷ ಬೆಳೆ ಹಾನಿಯಾಗಿ ನೂರಾರು ಕೋಟಿ ರೂ. ನಷ್ಟವಾಗಿದೆ. ಕೇಂದ್ರ ತಂಡ ಬರಪೀಡಿತ ಪ್ರದೇಶಗಳಿಗೆ ಹಾಗೆ ಬಂದು ಹೀಗೆ ಹೋಗಿದ್ದು ರೈತರ ಕಣ್ಣೊರೆಸುವ ತಂತ್ರವಾಗಿದೆ ಎಂದು ಹಲವಾರು ರೈತರು ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.