ಕ್ಷೇತ್ರ ಹೊಂದಾಣಿಕೆಯೇ ಸವಾಲು


Team Udayavani, Feb 14, 2021, 3:18 PM IST

Field coordination is the challenge

ಚಿತ್ರದುರ್ಗ: ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗೆ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ತಯಾರಿ ನಡೆಸುತ್ತಿದ್ದು, ಈ ನಿಟ್ಟಿನಲ್ಲಿ ಕ್ಷೇತ್ರಗಳ ಪುನರ್‌ ವಿಂಗಡಣೆ ಮಾಡಲು ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದೆ.

ಈ ನಿಟ್ಟಿನಲ್ಲಿ ಜಿಲ್ಲೆಯ ಚುನಾವಣಾ ತಹಶೀಲ್ದಾರ್‌ ಹಾಗೂ ಸಿಬ್ಬಂದಿ ಅಗತ್ಯ ಮಾಹಿತಿ ಸಿದ್ಧಪಡಿಸಿಕೊಂಡು ಫೆ. 22 ರಂದು ಚುನಾವಣಾ ಆಯೋಗದ ಕಚೇರಿಗೆ ತೆರಳಲು ಆಯೋಗ ಅ ಧಿಸೂಚನೆ ನೀಡಿದೆ. ಚುನಾವಣಾ ಆಯೋಗ ಜಿಲ್ಲೆಯ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಸ್ಥಾನಗಳನ್ನು ನಿಗ ದಿಪಡಿಸಿದ್ದು ಅದಕ್ಕೆ ಸಂಬಂಧಿ ಸಿ ಕ್ಷೇತ್ರಗಳನ್ನು ಹೊಂದಾಣಿಕೆ ಮಾಡುವ ಸವಾಲು ಈಗ ಜಿಲ್ಲಾಡಳಿತದ ಮುಂದಿದೆ. ಜಿಲ್ಲಾ ಪಂಚಾಯಿತಿಯಲ್ಲಿ ಈವರೆಗೆ 37 ಜಿಪಂ ಕ್ಷೇತ್ರಗಳಿದ್ದವು. ಚುನಾವಣಾ ಆಯೋಗ ಇದಕ್ಕೆ ಮತ್ತೆ 4 ಕ್ಷೇತ್ರಗಳನ್ನು ಸೇರಿಸಲು ಸೂಚಿಸಿದ್ದು, ಇದರಿಂದಾಗಿ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಸಂಖ್ಯೆ 41ಕ್ಕೆ ಏರಿಕೆಯಾಗಲಿದೆ.

ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ ಹಾಗೂಹಿರಿಯೂರು ತಾಲೂಕಿನಲ್ಲಿ ತಲಾ ಒಂದೊಂದು ಜಿಪಂ ಕ್ಷೇತ್ರಗಳು  ಹೆಚ್ಚಳವಾಗಲಿದ್ದು, ಮೊಳಕಾಲ್ಮೂರು ಹಾಗೂ ಹೊಸದುರ್ಗ ತಾಲೂಕಿನ ಜಿಪಂ ಕ್ಷೇತ್ರಗಳಲ್ಲಿ ಯಾವುದೇ ಬದಲಾವಣೆ ಇಲ್ಲ.

ಇದನ್ನೂ ಓದಿ:ಶಿಥಿಲಾವಸ್ಥೆಯ ಕಚೇರಿಯನ್ನು ಸ್ವತಃ ಸ್ವಚ್ಚಗೊಳಿಸಿದ ಕಲಬುರಗಿ ತಹಶೀಲ್ದಾರ್

ತಾಲೂಕು ಪಂಚಾಯಿತಿಗೆ ಶಾಕ್‌: ರಾಜ್ಯದಲ್ಲಿ ಈಗಾಗಲೇ ತಾಲೂಕು ಪಂಚಾಯಿತಿಗಳನ್ನು ರದ್ದು ಮಾಡಬೇಕು ಎಂಬ ಚರ್ಚೆ ನಡೆಯುತ್ತಿದ್ದು, ಈ ಬಗ್ಗೆ ಕೇಂದ್ರಕ್ಕೆ ಶಿಫಾರಸು ಕೂಡಾ ಕಳುಹಿಸಲಾಗುತ್ತಿದೆ. ಇದರಿಂದ ಸಾಕಷ್ಟು ತಾಲೂಕು ಪಂಚಾಯಿತಿ ಸದಸ್ಯರು, ಅಧ್ಯಕ್ಷರು ಅಸಮಾಧಾನ ವ್ಯಕ್ತಪಡಿಸಿ, ರದ್ದು ಮಾಡುವ ಬದಲು ಅನುದಾನ ಕೊಡಿ ಎಂದು ಅಭಿಪ್ರಾಯಪಟ್ಟಿದ್ದರು. ಈಗ ರಾಜ್ಯ ಚುನಾವಣಾ ಆಯೋಗ ತಾಲೂಕು ಪಂಚಾಯಿತಿಗಳಲ್ಲೂ ಮರು ಹೊಂದಾಣಿಕೆ ಅಥವಾ ಪುನರ್‌ ವಿಂಗಡಣೆ ಮಾಡಲು ಸೂಚನೆ ನೀಡಿದೆ. ಜಿಲ್ಲಾ ಪಂಚಾಯಿತಿಯಲ್ಲಿ 4 ಕ್ಷೇತ್ರಗಳು ಹೆಚ್ಚಾದರೆ, ತಾಲೂಕು ಪಂಚಾಯಿತಿಯಲ್ಲಿ ಬರೋಬ್ಬರಿ 27 ಕ್ಷೇತ್ರಗಳು ಕಡಿಮೆಯಾಗಲಿವೆ.

ಕ್ಷೇತ್ರ ಪುನರ್‌ ವಿಂಗಡಣೆ ಮಾನದಂಡಗಳೇನು?: ಪ್ರತಿ ಜಿಲ್ಲಾ ಪಂಚಾಯಿತಿಗೆ 35 ರಿಂದ 40 ಸಾವಿರ ಜನಸಂಖ್ಯೆ ಇರುವಂತೆ ನೋಡಿಕೊಂಡು, ಯಾವುದೇ ಗ್ರಾಮ ಪಂಚಾಯಿತಿಗಳನ್ನು ವಿಭಜನೆ ಮಾಡದೆ ಜಿಪಂ ಕ್ಷೇತ್ರ ರಚನೆ ಮಾಡಬೇಕು. ಸಂಚಾರ, ಸಂಪರ್ಕ ವ್ಯವಸ್ಥೆ, ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ನದಿ, ಜಲಾಶಯ, ಬೆಟ್ಟ, ಗುಡ್ಡ, ಅರಣ್ಯ ಇತ್ಯಾದಿಗಳನ್ನು ಪಟ್ಟಿ ಮಾಡಬೇಕು. ಆಯಾ ಕ್ಷೇತ್ರ ವ್ಯಾಪ್ತಿಯಲ್ಲಿ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಗ್ರಾಮದ ಹೆಸರನ್ನೇ ಕ್ಷೇತ್ರದ ಹೆಸರನ್ನಾಗಿ ನಾಮಕರಣ ಮಾಡಬೇಕು. 2011ನೇ ಜನಗಣತಿ ಆಧಾರದಲ್ಲಿ ಯಾವುದೇ ಬದಲಾವಣೆ ಇಲ್ಲದಿದ್ದರೂ, ಕ್ಷೇತ್ರವಾರು ಜನಸಂಖ್ಯೆಯಲ್ಲಿ ಆಗಿರುವ ಗಣನೀಯ ಬದಲಾವಣೆಗಳನ್ನು ಗಮನಿಸಿ ಹೊಸ ಕ್ಷೇತ್ರಗಳನ್ನು ರಚಿಸಬೇಕಿದೆ.

ಜಿಲ್ಲಾಡಳಿತ ಏನು ಮಾಡಲಿದೆ?: ಹೊಸ ಜಿಲ್ಲಾ  ಪಂಚಾಯಿತಿಕ್ಷೇತ್ರಗಳು ಕೇವಲ 4 ಮಾತ್ರ ಹೆಚ್ಚಾಗುವುದರಿಂದ ಇಡೀ ತಾಲೂಕನ್ನು ಮುಂದಿಟ್ಟುಕೊಂಡು ನಾಲ್ಕು ತಾಲೂಕುಗಳಲ್ಲಿ ನಾಲ್ಕು ಕ್ಷೇತ್ರಗಳನ್ನು ಹೊಂದಿಸಬಹುದು. ಆದರೆ ಈಗ ಇರುವ 136 ತಾಲೂಕು ಪಂಚಾಯಿತಿ ಕ್ಷೇತ್ರಗಳನ್ನು 109ಕ್ಕೆ ಇಳಿಸುವ ಸವಾಲಿದೆ. ಪ್ರತಿ ತಾಲೂಕಿನಲ್ಲಿ ಸಮೀಕ್ಷೆ ನಡೆಸಿ ಭೌಗೋಳಿಕವಾಗಿ ಗಮನಿಸಿ, ಜನಸಂಖ್ಯೆ ಮಿತಿ ಇಟ್ಟುಕೊಂಡು ಚುನಾವಣಾ ಆಯೋಗದ ನಿಬಂಧನೆಗಳಂತೆ ಕ್ಷೇತ್ರ ಪುನರ್‌ ವಿಂಗಡಣೆ ಮಾಡಿಕೊಂಡು ಫೆ. 22 ರಂದು ಚುನಾವಣಾ ತಹಶೀಲ್ದಾರ್‌ ಆಯೋಗದ ಮುಂದೆ ಹೋಗಬೇಕಿದೆ.

ತಿಪ್ಪೇಸ್ವಾಮಿ ನಾಕೀಕೆರೆ

ಟಾಪ್ ನ್ಯೂಸ್

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

1

Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.