ನೆರೆ ಪರಿಹಾರ: ಮೋದಿ, ಶಾ ಜೊತೆ ಚರ್ಚಿಸಿದ್ದೇನೆ: ಸಚಿವ ಡಿ.ವಿ. ಸದಾನಂದ ಗೌಡ
Team Udayavani, Oct 4, 2019, 7:09 PM IST
ಚಿತ್ರದುರ್ಗ: ನೆರೆ ಸಂತ್ರಸ್ತರಿಗೆ ಕೇಂದ್ರದಿಂದ ಪರಿಹಾರ ಕಾರ್ಯ ವಿಳಂಬಕ್ಕೆ ಸಂಬಂಧಿಸಿ ಪ್ರಧಾನಿ ಮೋದಿ, ಗೃಹ ಸಚಿವ ಅಮೀತ್ ಶಾ ಭೇಟಿ ಮಾಡಿ ಚರ್ಚಿಸಿದ್ದೇನೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದರು.
ಚಿತ್ರದುರ್ಗ ಮುರುಘಾ ಮಠದ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಅವರು, ಕರ್ನಾಟಕದ ಅಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ ರಜೆ ದಿನ ಬಂದ ಹಿನ್ನಲೆ ಪರಿಹಾರ ಕಾರ್ಯ ವಿಳಂಬವಾಗಿದೆ ಎಂದರು. ವಿಜಯದಶಮಿ ಬಳಿಕ ನೆರೆ ಸಂತ್ರಸ್ತರಿಗೆ ಪರಿಹಾರ ಸಿಗುವ ವಿಶ್ವಾಸವಿದೆ. ಈ ಹಿಂದೆ ನೆರೆ ಬಂದಾಗೆಲ್ಲಾ 3 4 ತಿಂಗಳ ಬಳಿಕ ಪರಿಹಾರ ನೀಡಿದೆ. ಕೇಂದ್ರದಿಂದ ಈ ಹಿಂದೆ ನೆರೆ ಪರಿಹಾರ ನೀಡಿದ್ದರ ಬಗ್ಗೆ ದಾಖಲೆಗಳಿವೆ ಎಂದ ಸದಾನಂದ ಗೌಡರು.
ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಗೆ ಶೋಕಾಸ್ ನೋಟಿಸ್ ವಿಚಾರಕ್ಕೆ ಪ್ರತಿಕ್ರಿಸಿದ ಅವರು ಈ ಅದರ ಬಗ್ಗೆ ಯಾವುದೇ ಮಾಹಿತಿ ತಿಳಿದಿಲ್ಲ ಎಂದರು.
ರಾಜ್ಯ ಸರ್ಕಾರದಿಂದ ಅಗತ್ಯ ಪರಿಹಾರ: ಸಚಿವ ಜಗದೀಶ ಶೆಟ್ಟರ್
ಚಿತ್ರದುರ್ಗ: ನೆರೆ ಸಂತ್ರಸ್ತರಿಗೆ ಈಗಾಗಲೇ ರಾಜ್ಯ ಸರ್ಕಾರದಿಂದ ಅಗತ್ಯ ಪರಿಹಾರ ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ಕೂಡ ಶೀಘ್ರದಲ್ಲೇ ಪರಿಹಾರ ನೀಡಲಿದೆ ಎಂದು
ಸಚಿವ ಜಗದೀಶ ಶೆಟ್ಟರ್ ಹೇಳಿದರು.
ಸಂತ್ರಸ್ತರಿಗೆ ರಾಜ್ಯದ ಇತಿಹಾಸದಲ್ಲೇ ಹೆಚ್ಚು ಪರಿಹಾರ ನೀಡಲಾಗುತ್ತಿದೆ. ಹತ್ತು ಸಾವಿರ ಹಣ ಸಂತ್ರಸ್ಥರ ಖಾತೆಗೆ ಜಮಾ ಆಗಿದೆ. ನೆರೆಯಲ್ಲಿ ಶೇ. 25 ರಷ್ಟು ನಷ್ಟವಾದ ಮನೆ ಮಾಲೀಕರ ಉಳಿತಾಯ ಖಾತೆಗೆ 25.000ರೂ ಜಮಾ ಆಗಿದೆ ಎನ್ ಡಿಆರ್ ಎಫ್ ನಿಯಮಾನುಸಾರ ಪರಿಹಾರ ನೀಡಲು ಹಣವಿಲ್ಲ ಎಂದು ಸಿಎಂ ಹೇಳಿದ್ದಾರೆ ಎಂದು ತಿಳಿಸಿದರು. ನೆರೆ ಸಂತ್ರಸ್ತರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರದ ಮೇಲೆ ಹೆಚ್ಚಿನ ನಿರೀಕ್ಷೆ ಇದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.