ಶೀಘ್ರವೇ ಇನ್ಫೋಸಿಸ್‌ನಿಂದ ಮೇವು ವಿತರಣೆ
Team Udayavani, Apr 30, 2019, 5:16 PM IST
ಚಳ್ಳಕೆರೆ: ತಾಲೂಕಿನ ತಳಕು ಹೋಬಳಿಯ ಚಿತ್ರನಾಯಕನಹಳ್ಳಿ ಗ್ರಾಮದ ದೇವರ ಎತ್ತುಗಳಿಗೆ ಮೇವು ವಿತರಿಸಲು ಪಾವಗಡದ ಶ್ರೀರಾಮಕೃಷ್ಣ ಸೇವಾಶ್ರಮದ ಜಪಾನಂದಸ್ವಾಮಿ ಭರವಸೆ ನೀಡಿದ್ದಾರೆ ಎಂದು ಗೋರಕ್ಷಣಾ ಸಮಿತಿ ಸದಸ್ಯ ಸಿ.ಪಿ.ಮಹೇಶ್‌ಕುಮಾರ್ ತಿಳಿಸಿದ್ದಾರೆ.
‘ಚಿತ್ರನಾಯಕನಹಳ್ಳಿ ದೇವರ ಎತ್ತುಗಳ ರಕ್ಷಣೆಗೇಕೆ ನಿರ್ಲಕ್ಷ್ಯ’ ಎಂಬ ಶಿರ್ಷಿಕೆಯಡಿ ಏ.29ರಂದು ಉದಯವಾಣಿಯಲ್ಲಿ ವಿಸ್ತೃತ ವರದಿ ಪ್ರಕಟವಾಗಿತ್ತು. ಈ ಸುದ್ದಿಯನ್ನು ಗಮನಿಸಿದ ಜಪಾನಂದಸ್ವಾಮೀಜಿ ಈಗಾಗಲೇ ಕಳೆದ ಕೆಲವು ತಿಂಗಳನಿಂದ ಚಳ್ಳಕೆರೆ ತಾಲೂಕಿನ ನನ್ನಿವಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋಸೇದೇವರಹಟ್ಟಿ, ಕುರುಡಿಹಳ್ಳಿ ಲಂಬಾಣಿ ಹಟ್ಟಿ ಮುಂತಾದ ಗ್ರಾಮಗಳ ದೇವರ ಎತ್ತುಗಳಿಗೆ ಮೇವನ್ನು ಉಚಿತವಾಗಿ ಪೂರೈಸಲಾಗುತ್ತಿದೆ.
ಚಿತ್ರನಾಯಕನಹಳ್ಳಿಯ ದೇವರ ಎತ್ತುಗಳಿಗೂ ಸಹ ಬೆಂಗಳೂರಿನ ಇನ್ಫೋಸಿಸ್ ಫೌಂಡೇಶನ್ ವತಿಯಿಂದ ಶೀಘ್ರವೇ ಮೇವು ಪೂರೈಸಲಾಗುವುದು. ಸುದ್ದಿಯನ್ನು ಗಮನಿಸಿದ ನಮ್ಮ ಆಶ್ರಮ ಕೂಡಲೇ ಬೆಂಗಳೂರಿನ ಇನ್ಫೋಸಿಸ್ ಫೌಂಡೇಶನ್ ಗಮನಕ್ಕೆ ತಂದಾಗ ಅವರು ಕೂಡಲೇ ತಾತ್ಕಾಲಿಕವಾಗಿಯಾದರೂ ಒಂದು ಲೋಡ್ ಮೇವು ಗ್ರಾಮಕ್ಕೆ ತಲುಪಿಸುವಂತೆ ಸೂಚನೆ ನೀಡಿದ್ದಾರೆ. ಅವರ ಸೂಚನೆ ಹಿನ್ನೆಲೆಯಲ್ಲಿ ಈಗಾಗಲೇ ಮೇವು ಪೂರೈಕೆಗಾಗಿ ಕ್ರಮ ಕೈಗೊಂಡಿದ್ದು, ಒಂದೆರಡು ದಿನಗಳಲ್ಲಿ ಚಿತ್ರನಾಯಕನಹಳ್ಳಿ ಗ್ರಾಮದ ದೇವರ ಎತ್ತುಗಳಿಗೆ ಮೇವು ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.
ಕಳೆದ ಕೆಲವು ವರ್ಷಗಳಿಂದ ಈ ಭಾಗದಲ್ಲಿ ಮಳೆ ಸಂಪೂರ್ಣ ಕೈಕೊಟ್ಟಿದ್ದು, ತಾಲೂಕಿನ ಲಕ್ಷಾಂತರ ಜಾನುವಾರುಗಳು ಮೇವು ಹಾಗೂ ನೀರು ಇಲ್ಲದೆ ಸಂಕಷ್ಟಕ್ಕೆ ಸಿಲುಕಿವೆ. ಪ್ರತಿನಿತ್ಯ ಜಾನುವಾರುಗಳಿಗೆ ಮೇವು, ನೀರು ಪೂರೈಸುವುದೇ ರೈತರಿಗೆ ಸವಾಲಿನ ಕೆಲಸವಾಗಿದ್ದು, ಜಿಲ್ಲಾಡಳಿತವಾಗಲಿ, ತಾಲೂಕು ಆಡಳಿತವಾಗಲಿ ಈ ಬಗ್ಗೆ ಗಮನಹರಿಸದಿರುವುದಕ್ಕೆ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಡೆ ಪಕ್ಷ ಮಳೆ ಬರುವವರೆಗಾದರೂ ತಾಲೂಕಿನ ಜಾನುವಾರುಗಳಿಗೆ ಮೇವು ಬ್ಯಾಂಕ್ ಸ್ಥಾಪಿಸಿ ಮೇವು ನೀಡುವಂತೆ ಮಹೇಶ್‌ಕುಮಾರ್ ಜಿಲ್ಲಾ ಆಡಳಿತಕ್ಕೆ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.