ನಾಲ್ವರು ತಬ್ಲೀಘಿಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್
ಆರೋಗ್ಯ ಇಲಾಖೆ-ಜಿಲ್ಲಾಸ್ಪತ್ರೆ ಸಿಬ್ಬಂದಿಯೊಂದಿಗೆ ಪುಷ್ಪವೃಷ್ಟಿ ಮಾಡಿ ಬೀಳ್ಕೊಟ್ಟ ಜಿಲ್ಲಾಧಿಕಾರಿ
Team Udayavani, May 24, 2020, 12:56 PM IST
ಚಿತ್ರದುರ್ಗ: ಜಿಲ್ಲಾ ಕೋವಿಡ್ ಆಸ್ಪತ್ರೆ ಆವರಣದಲ್ಲಿ ಕೋವಿಡ್ ವಾರಿಯರ್ಗೆ ಪುಷ್ಪವೃಷ್ಟಿ ಮಾಡಿ ಅಭಿನಂದಿಸಲಾಯಿತು.
ಚಿತ್ರದುರ್ಗ: ಅಹಮದಾಬಾದ್‌ನಿಂದ ಜಿಲ್ಲೆಗೆ ಆಗಮಿಸುತ್ತಲೇ ಕೋವಿಡ್ ಸೋಂಕು ದೃಢಪಟ್ಟಿದ್ದ 6 ಮಂದಿ ತಬ್ಲೀಘಿ ಸದಸ್ಯರ ಪೈಕಿ ಗುಣಮುಖರಾದ ನಾಲ್ವರನ್ನು ಶನಿವಾರ ಆರೋಗ್ಯ ಇಲಾಖೆ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆ ಮಾಡಿತು. ಒಟ್ಟು 6 ರಲ್ಲಿ 4 ಜನರು ಕೋವಿಡ್ 19 ಸೋಂಕಿನಿಂದ ಗುಣಮುಖರಾಗಿದ್ದು, ಅವರಿಗೆ ಆಸ್ಪತ್ರೆಯಿಂದ ಮನೆಗೆ ಆತ್ಮೀಯವಾಗಿ ಬೀಳ್ಕೊಡಲಾಯಿತು. ಖುದ್ದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಕೋವಿಡ್ ಆಸ್ಪತ್ರೆ ಬಳಿ ಬಂದು ಜಿಲ್ಲಾಸ್ಪತ್ರೆ ಸಿಬ್ಬಂದಿ ಜತೆಗೂಡಿ ಪುಷ್ಪವೃಷ್ಟಿ ಮಾಡಿ ಬೀಳ್ಕೊಟ್ಟರು.
ನಗರದ ವಿವಿಧ ಬಡಾವಣೆಗಳ ನಿವಾಸಿಗಳಾದ 64 ವರ್ಷದ (ಪಿ-751), ಮಧ್ಯ ವಯಸ್ಕ 53 (ಪಿ-752), ಯುವಕರಾದ 34 ವರ್ಷದ (ಪಿ-787), 26 ವರ್ಷದ (ಪಿ-788) ಕೋವಿಡ್-19 ಕೊರೊನಾ ಗೆದ್ದು ಬಂದವರು. ಗುಜರಾತಿನ ಅಹಮದಾಬಾದಿನಿಂದ ಮೇ 5 ರಂದು ಜಿಲ್ಲೆಗೆ ಮರಳಿದ 15 ಜನ ತಬ್ಲೀಘಿಗಳ ಪೈಕಿ ಮೇ 8 ಮತ್ತು 9 ರಂದು ತಲಾ ಮೂವರು ಸೇರಿ ಒಟ್ಟು ಆರು ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿತ್ತು. ಅದರಲ್ಲಿ ನಾಲ್ವರು ಎರಡು ವಾರಗಳ ಚಿಕಿತ್ಸೆ ಪಡೆದು ಗುಣಮುಖರಾಗಿ ಹೊರಬಂದಿದ್ದಾರೆ. ಈ ವೇಳೆ ಕೊರೊನಾ ಗೆದ್ದು ಬಂದ ನಾಲ್ವರಲ್ಲೂ ಮಂದಹಾಸ ಮೂಡಿತ್ತು. ಜತೆಗೆ ಆರೋಗ್ಯ ಇಲಾಖೆ ಹಾಗೂ
ಜಿಲ್ಲಾಡಳಿತ ಶುಶ್ರೂಷೆ ಮಾಡಿದ ವೈದ್ಯರು ನರ್ಸ್‌ಗಳು ಸೇರಿದಂತೆ ಎಲ್ಲ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಿದರು. ಓರ್ವ ವೃದ್ಧರಂತೂ ನನ್ನ ಮಕ್ಕಳಿಗಿಂತಲೂ ಹೆಚ್ಚಾಗಿ ನಮ್ಮನ್ನು ನೋಡಿಕೊಂಡಿದ್ದಾರೆ. ಯಾವಾಗ ಕರೆದರೂ ಬಂದು ಚಿಕಿತ್ಸೆ ನೀಡಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದರು. ಮತ್ತೋರ್ವ
ಯುವಕ ಮಾತನಾಡಿ, ಕೊರೊನಾ ಸೋಂಕಿನ ಕಾರಣಕ್ಕೆ ಮಾನಸಿಕವಾಗಿ ಕುಗ್ಗಿ ಹೋಗಿದ್ದೆವು. ಆದರೆ ಇಲ್ಲಿ ನಮಗೆ ಚಿಕಿತ್ಸೆ ನೀಡಿದ ಸಿಬ್ಬಂದಿ ನಮಗೆ ಧೈರ್ಯ ತುಂಬಿದ್ದಾರೆ. ಬೇಗ ಗುಣಮುಖರಾಗುತ್ತಿರಿ ಎಂದು ಹೇಳುವ ಮೂಲಕ ಪ್ರೇರಣೆ ನೀಡಿದ್ದಾರೆ. ಅವರಿಗೆ ನಮಸ್ಕಾರಗಳು ಎಂದರು.
ಕೋವಿಡ್ ಆಸ್ಪತ್ರೆಯಲ್ಲಿ ವೈದ್ಯರು ನನಗೆ ಉತ್ತಮವಾಗಿ ಚಿಕಿತ್ಸೆ ನೀಡಿದ್ದಾರೆ. ಆಗಿಂದಾಗ್ಗೆ ನರ್ಸ್‌ಗಳು ಬಂದು ಥರ್ಮಲ್ ಸ್ಕ್ರೀನಿಂಗ್ ಮಾಡಿ ಔಷ ಧ ಕೊಟ್ಟು ಹೋಗುತ್ತಿದ್ದರು. ಜತೆಗೆ ಎಲ್ಲರೂ ಧೈರ್ಯ ತುಂಬುತ್ತಿದ್ದರು. ಅವರೆಲ್ಲರ ಶ್ರಮ, ದೇವರ ದಯೆಯಿಂದ ಗುಣಮುಖನಾಗಿ ಹೊರಬಂದಿದ್ದೇನೆ ಎಂದು ಪಿ-751 ತಿಳಿಸಿದರು.
ಗುಜರಾತಿನ ಅಹಮದಾಬಾದಿನಲ್ಲಿ ಇದ್ದಾಗಲೂ ಕೋವಿಡ್-19 ದೃಢಪಟ್ಟಿತ್ತು. ಅಲ್ಲಿ 14 ದಿನ ಚಿಕಿತ್ಸೆ ಪಡೆದು ಗುಣವಾದ ನಂತರ ಜಿಲ್ಲೆಗೆ ವಾಪಸ್ ಬಂದೆ. ಇಲ್ಲಿ
ಮತ್ತೂಮ್ಮೆ ಸಾಂಸ್ಥಿಕ ಕ್ವಾರಂಟೈನ್ ಮಾಡಿದರು. ಇಲ್ಲಿ ಪುನಃ ಪಾಸಿಟಿವ್ ಬಂದಾಗ ಗಾಬರಿಯಾಗಿತ್ತು. ಆದರೆ ಮೊದಲೇ ಚಿಕಿತ್ಸೆ ಪಡೆದಿದ್ದರಿಂದ ಭಯಪಡಲಿಲ್ಲ.
ಒಮ್ಮೊಮ್ಮೆ ರಾತ್ರಿ ಎಚ್ಚರವಾದಾಗ ಏನೇನೋ ಆಲೋಚನೆ ಬರುತ್ತಿತ್ತು. ಫೋನ್ ಕಿರಿಕಿರಿ ಬೇಡವೆಂದು ಸ್ವಿಚ್ ಆಫ್ ಮಾಡುತ್ತಿದ್ದೆ. ಈಗ ಗುಣಮುಖನಾಗಿದ್ದು ಮನೆಯಲ್ಲಿ ಪ್ರತ್ಯೇಕ ಕೋಣೆಯಲ್ಲಿ ವಾಸಿಸುತ್ತೇನೆ ಎಂದರು.
ಜಿಲ್ಲಾಧಿಕಾರಿ ವಿನೋತ್ ಪ್ರಿಯಾ, ಡಿಎಚ್‌ಒ ಡಾ| ಪಾಲಾಕ್ಷ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಬಸವರಾಜ್, ತಾಲೂಕು ಆರೋಗ್ಯಾಧಿಕಾರಿ ಡಾ| ಗಿರೀಶ್, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಮಂಜುನಾಥ್ ಹಾಗೂ ವೈದ್ಯಕೀಯ ಸಿಬ್ಬಂದಿ ಇದ್ದರು.
ಕೋವಿಡ್ ಪಾಸಿಟಿವ್ ಬಂದವರಿಗೆ 7 ಮತ್ತು 12ನೇ ದಿನ ಪರೀಕ್ಷೆ ಮಾಡಿದಾಗ ನೆಗೆಟಿವ್ ವರದಿ ಬಂದಿದೆ. 12ನೇ ದಿನ 24 ಗಂಟೆ ಅವ ಧಿಯಲ್ಲಿ ಎರಡು ಸಲ
ಪರೀಕ್ಷೆ ನಡೆಸಿದ್ದು, ನಾಲ್ಕು ಜನರ ವರದಿ ನೆಗೆಟಿವ್ ಬಂದಿದೆ. ಈಗ ಮನೆಯಲ್ಲಿ ಮತ್ತೆ 14 ದಿನಗಳ ಕಾಲ ಕ್ವಾರಂಟೈನ್ ಇರಲು ಸೂಚಿಸಿದ್ದೇವೆ.
ಡಾ| ಪಾಲಾಕ್ಷ, ಡಿಎಚ್‌ಒ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.