ಕಾಲೇಜು ಆರಂಭಕ್ಕೆ ಭಿಕ್ಷೆ ಬೇಡಿ ಆಗ್ರಹ


Team Udayavani, Oct 14, 2020, 6:02 PM IST

cd-tdy-1

ಚಿತ್ರದುರ್ಗ: ಜಿಲ್ಲೆಗೆ ಮಂಜೂರಾಗಿರುವ ಸರ್ಕಾರಿ ಮೆಡಿಕಲ್‌ ಕಾಲೇಜು ನಿರ್ಮಾಣಕ್ಕೆ ಸರ್ಕಾರ ನಿರಾಸಕ್ತಿ ತೋರಿಸುತ್ತಿರುವಹಿನ್ನೆಲೆಯಲ್ಲಿ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ನಗರದಲ್ಲಿ ಮೆಡಿಕಲ್‌ ಕಾಲೇಜು ನಿರ್ಮಾಣಕ್ಕೆಭಿಕ್ಷೆ ಬೇಡಿ ಹಣ ಸಂಗ್ರಹಿಸುವ ಮೂಲಕ ವಿನೂತನವಾಗಿ ಪ್ರತಿಭಟಿಸಿದರು.

ಮಂಗಳವಾರ ನಗರದ ಗಾಂಧಿ ವೃತ್ತದಿಂದ ಒನಕೆ ಓಬವ್ವ ವೃತ್ತದವರೆಗೆ ಭಿಕ್ಷಾಟನೆ ಮಾಡುವ ಮೂಲಕ ಸಂಗ್ರಹವಾದ 1886 ರೂ.ಗಳನ್ನು ಮುಖ್ಯಮಂತ್ರಿಗಳ ನಿಧಿಗೆ ಪೋಸ್ಟ್‌ ಮೂಲಕ ರವಾನಿಸಿದರು. ಬರಪೀಡಿತ ಹಾಗೂ ಹಿಂದುಳಿದಿರುವ ಚಿತ್ರದುರ್ಗ ಜಿಲ್ಲೆಗೆ 2013ರಲ್ಲಿಯೇ ಸರ್ಕಾರಿ ಮೆಡಿಕಲ್‌ ಕಾಲೇಜು ಮಂಜೂರಾಗಿದ್ದು, ಇದಕ್ಕಾಗಿ ಜಿಲ್ಲಾಸ್ಪತ್ರೆ ಪಕ್ಕದಲ್ಲಿ 13.3 ಎಕರೆ ಭೂಮಿಯನ್ನು ಮೀಸಲಿಡಲಾಗಿದೆ. ಆದರೆ, ಸರ್ಕಾರ ಹಣ ಬಿಡುಗಡೆ ಮಾಡಿ ಕಟ್ಟಡ ಆರಂಭಿಸಲು ಮೀನಾಮೇಷ ಎಣಿಸುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಮೂರು ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋಗಿದ್ದು, ಸಾಕಷ್ಟು ಅಪಘಾತವಾಗುತ್ತಿವೆ. ಸಣ್ಣ ಪುಟ್ಟ ಕಾಯಿಲೆ ಹೊರತುಪಡಿಸಿ ಎಲ್ಲದಕ್ಕೂ ದೂರದ ಬೆಂಗಳೂರು, ಮಂಗಳೂರು, ಮಣಿಪಾಲ್‌, ದಾವಣಗೆರೆ ಖಾಸಗಿ ಆಸ್ಪತ್ರೆಗಳಿಗೆ ಓಡಾಡಬೇಕಾಗಿದೆ. ಸಕಾಲಕ್ಕೆ ಸೂಕ್ತ ಚಿಕಿತ್ಸೆ ದೊರೆಯದೆ ಸಾಕಷ್ಟು ಬಡವರ ಪ್ರಾಣಗಳು ಹೋಗಿವೆ. ಇಷ್ಟಾದರೂ ಎಚ್ಚೆತ್ತುಕೊಳ್ಳದ ಜಿಲ್ಲೆಯ ಜನಪ್ರತಿನಿಧಿ ಗಳು ಹಾಗೂ ರಾಜ್ಯ ಸರ್ಕಾರ ಜನರ ಜೀವದ ಜತೆಗೆ ಚೆಲ್ಲಾಟ ಆಡುತ್ತಿದೆ ಎಂದು ಕರ್ನಾಟಕ ನವ ನಿರ್ಮಾಣ ಸೇನೆ ಜಿಲ್ಲಾಧ್ಯಕ್ಷ ಕೆ.ಟಿ. ಶಿವಕುಮಾರ್‌ ಹೇಳಿದರು.

ಈಗಾಗಲೇ ಹಲವು ಹೋರಾಟ ಮಾಡಿದರೂ ಮಣಿಯದ ಸರ್ಕಾರದ ವಿರುದ್ಧ ಭಿಕ್ಷೆ ಬೇಡುವ ಮೂಲಕ ವಿನೂತನ ಪ್ರತಿಭಟನೆ ಮಾಡಿದ್ದೇವೆ. ಮುಂದೆಯೂ ಸರ್ಕಾರ ಮಣಿಯದಿದ್ದರೆ ಇದನ್ನು ಮುಂದುವರೆಸುತ್ತೇವೆ ಎಂದು ಎಚ್ಚರಿಸಿದರು. ಈ ವೇಳೆ ಮಹಿಳಾಘಟಕದ ಅಧ್ಯಕ್ಷೆ ವೀಣಾ ಗೌರಣ್ಣ, ನಗರಾಧ್ಯಕ್ಷ ಎಂ.ತಿಪ್ಪೇಸ್ವಾಮಿ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಬಿ.ಅನಿಲ್‌, ಉಪಾಧ್ಯಕ್ಷ ಹರೀಶ್‌, ವಿದ್ಯಾರ್ಥಿ ಘಟಕದ ಕಾರ್ಯದರ್ಶಿ ಧನರಾಜ್‌, ನಗರ ಘಟಕದ ಉಪಾಧ್ಯಕ್ಷ ಓಬಳೇಶ್‌, ಚೌಡೇಶ್‌, ಎಂ.ಮಂಜುನಾಥ್‌, ರವಿ, ಬಿ.ಶಿವರಾಜ್‌, ಕರುಣಾ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

Lokayukta

MUDA ಮಾಜಿ ಆಯುಕ್ತ ನಟೇಶ್‌ಗೆ ಲೋಕಾ ನೋಟಿಸ್‌

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.