ಕ್ರೀಡೆಗೂ ಶಿಕ್ಷಣದಷ್ಟೇ ಪ್ರಾಮುಖ್ಯತೆ ನೀಡಿ

ಸರ್ಕಾರಿ ನೌಕರರ ಕ್ರೀಡಾಕೂಟ ಸಾಂಸ್ಕೃತಿಕ ಸ್ಪರ್ಧೆ ಮುಕ್ತಾಯ

Team Udayavani, Apr 24, 2022, 3:19 PM IST

sports

ಚಿತ್ರದುರ್ಗ: ಶಿಕ್ಷಣಕ್ಕೆ ನೀಡುವ ಪ್ರಾಮುಖ್ಯತೆಯನ್ನು ಕ್ರೀಡೆಗೂ ನೀಡಬೇಕು. ಆರೋಗ್ಯ ವೃದ್ಧಿಗೆ ಕ್ರೀಡೆ ಸಹಕಾರಿ ಎಂದು ಒಂದನೇ ಅಪರ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಬನ್ನಿಕಟ್ಟೆ ಹನುಮಂತಪ್ಪ ಆರ್‌. ಹೇಳಿದರು.

ನಗರದ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಆಯೋಜಿಸಲಾದ 2022 ನೇ ಸಾಲಿನ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಸಮಾರೋಪ ಸಮಾರಂಭ ಉದ್ಘಾಟಿಸಿ, ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.

ಪ್ರೌಢಶಾಲೆ ಮತ್ತು ಕಾಲೇಜು ಮಟ್ಟದಿಂದ ಕ್ರೀಡಾ ಆಸಕ್ತಿ ಬೆಳೆಸಿಕೊಂಡ ನೌಕರರು ಕ್ರೀಡೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಾರೆ. ಹಾಗೇ ಉಳಿದ ನೌಕರರು ಆಸಕ್ತಿಯಿಂದ ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು. ಹಿಂದೆ ಹಳ್ಳಿಗಳಲ್ಲಿ ಕಬಡ್ಡಿ, ಖೋ-ಖೋ ಆಟಗಳನ್ನು ಗ್ರಾಮಸ್ಥರು ಪ್ರೋತ್ಸಾಹಿಸುತ್ತಿದ್ದರು. ನಗರೀಕರಣವಾದಂತೆ ಕ್ರೀಡೆಯಲ್ಲಿ ಆಸಕ್ತಿ ಕುಂಠಿತವಾಗಿದೆ. ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿದರೆ ದೈಹಿಕವಾಗಿ ಸದೃಢರಾಗಿರುತ್ತೀರಿ ಎಂದರು.

ನೌಕರರ ಸಂಘದಿಂದ ತಾಲೂಕು ಮಟ್ಟದಲ್ಲೂ ಕ್ರೀಡಾಕೂಟ ಆಯೋಜನೆ ಮಾಡುವ ಕಾರ್ಯವಾಗಬೇಕು. ಮಹಿಳೆಯರು ಕ್ರೀಡೆಗಳಲ್ಲಿ ಉತ್ತಮ ಸಾಧನೆ ತೋರುತ್ತಿದ್ದಾರೆ. ಅವರನ್ನು ಪ್ರೋತ್ಸಾಹಿಸುವ ಕೆಲಸವಾಗಬೇಕು ಎಂದರು.

ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ ಮಾತನಾಡಿ, ಕ್ರೀಡೆ ಮತ್ತು ಆರೋಗ್ಯ ಒಂದು ನಾಣ್ಯದ ಎರಡು ಮುಖಗಳು. ಇವು ಅವಿಭಾಜ್ಯ ಅಂಗಗಳು. ಕ್ರೀಡೆಗೆ ಮಹತ್ವ ನೀಡುವುದು ಅಗತ್ಯವಾಗಿದೆ. ಅಂತಾರಾಷ್ಟ್ರೀಯ ಕ್ರೀಡಾ ಕೂಟದಲ್ಲಿ ಭಾರತಕ್ಕಿಂತ ಸಣ್ಣ ದೇಶಗಳ ಸಾಧನೆ ಹೆಚ್ಚಿದೆ. ಕ್ರೀಡೆಗೆ ಮಹತ್ವ, ಪ್ರೋತ್ಸಾಹ ನೀಡುವುದರೊಂದಿಗೆ ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಉತ್ತಮ ಸಾಧನೆ ಮಾಡುವಂತೆ ಆಗಬೇಕು. ಸ್ವಾಸ್ಥ್ಯ ದೇಹದಲ್ಲಿ ಸ್ವಾಸ್ಥ್ಯ ಮನಸ್ಸು ಇರುತ್ತದೆ. ಕ್ರೀಡೆಯಲ್ಲಿ ಸಾಧನೆ ಮಾಡಿದವರನ್ನು ನೋಡಿ ಸುಮ್ಮನಾಗದೆ ಉಳಿದ ನೌಕರರು ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು. ದಿನನಿತ್ಯ ಮನೆಗಳಲ್ಲಿ ಲಘು ವ್ಯಾಯಾಮ, ನಡಿಗೆ ಮಾಡುವುದರ ಮೂಲಕ ಆರೋಗ್ಯವಾಗಿರಬಹುದು ಎಂದರು.

ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಕೆ.ಮಂಜುನಾಥ ಮಾತನಾಡಿ, 2022 ಸಾಲಿನ ಕ್ರೀಡಾಕೂಟ ಯಶಸ್ವಿಯಾಗಿ ಪೂರ್ಣಗೊಂಡಿದೆ. ಸಂಘ ನೌಕರರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದೆ. ರಾಜ್ಯಾಧ್ಯಕ್ಷ ಷಡಕ್ಷರಿಯವರು ನೌಕರರ ಸಮಸ್ಯೆಗಳನ್ನು ಪಟ್ಟಿ ಮಾಡಿ ಹಂತಹಂತವಾಗಿ ಬಗೆಹರಿಸುತ್ತಿದ್ದಾರೆ ಎಂದರು.

ಕ್ರೀಡಾಕೂಟದಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ

ದಾವಣಗೆರೆಯಲ್ಲಿ ಜರುಗಿದ 2020-21 ಸಾಲಿನ ರಾಜ್ಯ ಮಟ್ಟದ ಕ್ರೀಡಾ ಕೂಟದ ಕುಸ್ತಿಯಲ್ಲಿ ವಿಜೇತರಾದ ನ್ಯಾಯಾಂಗ ಇಲಾಖೆ ಸುರೇಶ್‌ ಟಿ.ಬಿ. ಸಮಾಜ ಕಲ್ಯಾಣ ಇಲಾಖೆ ಶ್ರೀಕಾಂತ ಬೀರಪ್ಪ ಶಿರೋಳ, ಹಿಂದುಳಿದ ವರ್ಗಗಳ ಇಲಾಖೆ ಪೃಥ್ವಿ ಎಸ್‌, ಪಶು ಇಲಾಖೆಯ ತಿಮ್ಮೇಶ್‌, ಈಜು ಸ್ಪರ್ಧೆಗಳಲ್ಲಿ ಪ್ರಶಸ್ತಿ ಪಡೆದ ಹಿಂದುಳಿದ ವರ್ಗಗಳ ಇಲಾಖೆ ಚೇತನ ಅದಲಾಟ್ಟಿ, ಚೆಸ್‌ನಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ವೀರೇಶ್.ಟಿ, ಶಾಟ್‌ಪುಟ್‌ನಲ್ಲಿ ಪ್ರಶಸ್ತಿ ಪಡೆದ ಕಂದಾಯ ಇಲಾಖೆಯ ಸೌಮಶ್ರೀ, ರನ್ನಿಂಗ್‌ ಹಾಗೂ ಹೈಜಂಪ್‌ನಲ್ಲಿ ಪ್ರಶಸ್ತಿ ಪಡೆದ ಕಾರಾಗೃಹ ಇಲಾಖೆಯ ವೃಂದ.ಬಿ, ಶಟಲ್‌ ಬ್ಯಾಡ್ಮಿಂಟನ್‌ ಡಬಲ್ಸ್ ನಲ್ಲಿ ಪ್ರಶಸ್ತಿ ಪಡೆದ ಪೊಲೀಸ್‌ ಇಲಾಖೆಯ ಅನಿತ. ಜೆ, ಶಿಕ್ಷಣ ಇಲಾಖೆಯ ವಿಜಯಲಕ್ಷ್ಮೀ 100 ಮೀ ರನ್ನಿಂಗ್‌ ನಲ್ಲಿ ಪ್ರಶಸ್ತಿ ಪಡೆದ ಶ್ರೀನಿವಾಸ.ಜಿ ಅವರನ್ನು ಸನ್ಮಾನಿಸಲಾಯಿತು. ಪ್ರಸಕ್ತ ಕ್ರೀಡಾ ಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಕೆ.ಆರ್.ಜಯಲಕ್ಷ್ಮಿ ಬಾಯಿ, ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರದೀಪ್‌ ಕುಮಾರ್‌, ಉಪಾಧ್ಯಕ್ಷ ರಾಘವೇಂದ್ರ, ಗೌರವ ಅಧ್ಯಕ್ಷ ವೀರಣ್ಣ, ಹಿರಿಯೂರು ತಾಲೂಕು ನೌಕರರ ಸಂಘದ ಅಧ್ಯಕ್ಷ ಶಿವಕುಮಾರ್‌ ಹೊಸದುರ್ಗ ತಾಲೂಕು ನೌಕರರ ಸಂಘದ ಅಧ್ಯಕ್ಷ ಶಶಿಧರ, ಕ್ರೀಡಾ ಕಾರ್ಯದರ್ಶಿಗಳಾದ ವೆಂಕಟಪತಿ, ಶಶಿಧರ್‌, ಕ್ರೀಡಾ ತರಬೇತುದಾರ ಮಹಿಬುಲ್ಲಾ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.