ಕೋನಸಾಗರದಲ್ಲಿ ಉತ್ತಮ ಮಳೆ
Team Udayavani, Jun 29, 2020, 12:38 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕೊಂಡ್ಲಹಳ್ಳಿ: ಕೋನಸಾಗರದಲ್ಲಿ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ. ಆರಿದ್ರಾ ಮಳೆಯ ಅಬ್ಬರಕ್ಕೆ ಹಳ್ಳ, ಕೃಷಿ ಹೊಂಡ, ಚೆಕ್‌ಡ್ಯಾಂಗಳು, ಹೊಲಗಳು ನೀರಿನಿಂದ ಮೈದುಂಬಿಕೊಂಡಿವೆ.
ಸಂಜೆ 6ಕ್ಕೆ ಆರಂಭವಾದ ಮಳೆ, ಒಂದೂವರೆ ಗಂಟೆಗೂ ಹೆಚ್ಚು ಕಾಲ ಮಳೆ ಸುರಿಯಿತು. ಕೊಂಡ್ಲಹಳ್ಳಿ ಮಾರ್ಗದಲ್ಲಿನ ಹಳ್ಳ, ಬಡತಿಮ್ಮಪ್ಪ ಹಳ್ಳಗಳಲ್ಲಿ ನೀರು ತುಂಬಿ ರಸ್ತೆಯಲ್ಲಿ ಭಾನುವಾರ ಬೆಳಿಗ್ಗೆವರೆಗೂ ಹರಿದಿದೆ. ಕೋನಸಾಗರ ಗ್ರಾಪಂ ವ್ಯಾಪ್ತಿಯ ಉಡೇವು ಗ್ರಾಮದಲ್ಲೂ ಮಳೆಯಾಗಿದ್ದು, ಹಳ್ಳ, ಚೆಕ್‌ಡ್ಯಾಂ, ಕೃಷಿ ಹೊಂಡಗಳು ಭರ್ತಿಯಾಗಿವೆ. ಗ್ರಾಮದಂಚಿನಲ್ಲಿರುವ ಆಂಧ್ರಪ್ರದೇಶ ಮಾರ್ಗದ ರಸ್ತೆಯ ತಿರುವಿನ ಸೇತುವೆಯಿಂದ ಊರೊಳಗಿನ ಅಂಗಡಿ ಮುಂಗಟ್ಟುಗಳಿಗೆ ಹಾಗೂ ಮನೆಗಳಿಗೂ ನೀರು ನುಗ್ಗಿ ತೊಂದರೆಯಾಗಿದೆ.
ಹೊಲ-ತೋಟಗಳಲ್ಲಿನ ಒಡ್ಡು, ಚೆಕ್‌ಡ್ಯಾಂ, ಕೃಷಿ ಹೊಂಡಗಳು, ರೈತರ ಹೊಲ-ತೋಟಗಳ ರಸ್ತೆಗಳು ಕಿತ್ತು ಹೋಗಿ ಸಂಚಾರಕ್ಕೆ ತೊಂದರೆಯಾಗಿದೆ. ಕೋನಸಾಗರದ ಸಮೀಪದ ಶೇಂಗಾ ಹೊಲವೊಂದಕ್ಕೆ ಮಳೆ ನೀರು ನುಗ್ಗಿ ಬೆಳೆ ಸಂಪೂರ್ಣ ಹಾಳಾಗಿದೆ. ಬಿ.ಜಿ. ಕೆರೆ ಹಾಗೂ ಕೊಂಡ್ಲಹಳ್ಳಿ ಗ್ರಾಮಗಳಲ್ಲೂ ಸ್ವಲ್ಪ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್ ಅಯ್ಯರ್
GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ
JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ
Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.