ಸರ್ಕಾರದ ಸೌಲಭ್ಯ ನಿರಾಶ್ರಿತರಿಗೆ ತಲುಪಿಸಲು ಕರೆ
Team Udayavani, May 23, 2019, 10:02 AM IST
ಚಿತ್ರದುರ್ಗ: ನಿರಾಶ್ರಿತರಿಗೆ ಸರ್ಕಾರ ನೂರಾರು ಸೌಲಭ್ಯಗಳನ್ನು ನೀಡಿದ್ದು ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಆರ್. ದಿಂಡಲಕೊಪ್ಪ ಹೇಳಿದರು.
ತಾಲೂಕಿನ ಗೋನೂರು ಸಮೀಪದ ಮುತ್ತಯ್ಯನಹಟ್ಟಿಯಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ನಿರಾಶ್ರಿತರಿಗಾಗಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಪುಸ್ತಕ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಗೋನೂರು ನಿರಾಶ್ರಿತರ ಪರಿಹಾರ ಕೇಂದ್ರ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಸ್ವಚ್ಛತೆ, ಗುಣಮಟ್ಟದ ಆಹಾರ ಸೇರಿದಂತೆ ಎಲ್ಲವನ್ನೂ ವ್ಯವಸ್ಥಿತ ರೀತಿಯಲ್ಲಿ ನೀಡಲಾಗುತ್ತಿದೆ. ಇಲ್ಲಿನ ಅಧಿಧೀಕ್ಷಕ ಮಹದೇವಯ್ಯನವರು ನಿಮ್ಮ ಮೇಲೆ ತೋರುತ್ತಿರುವ ಕಾಳಜಿಯೇ ಇದಕ್ಕೆ ಕಾರಣ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಪುಸ್ತಕ ಓದಿ ಗಳಿಸುವ ಜ್ಞಾನಾರ್ಜನೆಯಿಂದ ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ಪುಸ್ತಕ ಓದುವ ಹವ್ಯಾಸ ತುಂಬಾ ಒಳ್ಳೆಯದು. ನಿಮಗೆ ಪುಸ್ತಕ ಓದುವ ಆಸಕ್ತಿಯಿದ್ದರೆ ಓದಿ. ಇಲ್ಲವೇ ಬೆರೆಯವರು ಓದಿ ಎಲ್ಲರಿಗೂ ವಿಚಾರಗಳನ್ನು ತಿಳಿಸಬಹುದು. ಇಲ್ಲಿನ ಸವಲತ್ತುಗಳನ್ನು ಸದುಪಯೋಗಪಡಿಸಿಕೊಂಡು ನೆಮ್ಮದಿಯ ಜೀವನವನ್ನು ನಿಮ್ಮದಾಗಿಸಿಕೊಳ್ಳಿ ಎಂದರು.
ಹಿರಿಯ ನ್ಯಾಯವಾದಿ ಬಿ.ಕೆ. ರಹಮತ್‌ವುಲ್ಲಾ ಮಾತನಾಡಿ, ಗೋನೂರು ನಿರಾಶ್ರಿತರ ಪರಿಹಾರ ಕೇಂದ್ರ ಸ್ವಚ್ಛತೆ ಸೇರಿದಂತೆ ಎಲ್ಲ ವಿಚಾರದಲ್ಲೂ ಹೈಟೆಕ್ ಆಗಿದೆ. ಇಲ್ಲಿ ನಿರಾಶ್ರಿತರಿಗೆ ದೊರೆಯುತ್ತಿರುವ ಸವಲತ್ತು ಯಾವ
ಅಧಿಕಾರಿಗಳಿಗೂ ಇಲ್ಲ ಎನ್ನುವುದು ಇಲ್ಲಿ ಬಂದು ನೋಡಿದಾಗ ತಿಳಿಯುತ್ತದೆ. ಸರ್ಕಾರ ಇಷ್ಟೊಂದು ಸೌಲಭ್ಯಗಳನ್ನು ನೀಡಿರುವುದು ನಿಮ್ಮ ಅದೃಷ್ಟ. ನಾನಾ ಕಾರಣಗಳಿಂದ ಕೆಲವರು ಇಲ್ಲಿ ಬಂದು ನಿರಾಶ್ರಿತರಂತೆ ಜೀವನ ಮಾಡುತ್ತಿರಬಹುದು. ಮನಸ್ಸಿನಲ್ಲಿರುವ ಕಲ್ಮಶ ತೆಗೆದು ಹಾಕಿ ಸಮಾಜದಲ್ಲಿ ಎಲ್ಲರಂತೆ ಗುರುತಿಸಿಕೊಂಡು ಜೀವನ ಮಾಡಿ ಎಂದು ಹಾರೈಸಿದರು.
ಚಿತ್ರದುರ್ಗ ವಕೀಲರ ಸಂಘದ ಕಾರ್ಯದರ್ಶಿ ಅನಿಲ್ಕುಮಾರ್ ಮಾತನಾಡಿ, ಪುಸ್ತಕಗಳನ್ನು ಓದಿದಷ್ಟೂ ಜ್ಞಾನ ವೃದ್ಧಿಯಾಗುತ್ತದೆ. ಪುಸ್ತಕ ಎಂದರೆ ಬಹುದೊಡ್ಡ ಸಂಪತ್ತು. ನಾನಾ ವಿಚಾರಗಳನ್ನು ತಿಳಿದುಕೊಳ್ಳಬಹುದು. ನಿರಾಶ್ರಿತ ರೆಂಬುದನ್ನು ಮರೆತು ಇಲ್ಲಿಂದ ಹೊರ ಹೋಗಿ ಸಮಾಜಮುಖೀಯಾಗಿ ಬಾಳಿರಿ ಎಂದರು.
ನ್ಯಾಯವಾದಿ ಪ್ರತಾಪ್ ಜೋಗಿ ಮಾತನಾಡಿ, ಪುಸ್ತಕ ಎಂದರೆ ಜ್ಞಾನಭಂಡಾರ. ಇಂತಹ ಜ್ಞಾನಭಂಡಾರ ಓದುವುದರಿಂದ ಮಾನಸಿಕ ಸ್ಥೈರ್ಯವನ್ನು ಹೆಚ್ಚಿಸಿಕೊಂಡು ಮನಸ್ಸಿನ ನೋವನ್ನು ನಿವಾರಿಸಿಕೊಳ್ಳಬಹುದು. ಮಹಾನ್ ನಾಯಕರ ಪುಸ್ತಕಗಳನ್ನು ಓದಿ ಅವರ ಆದರ್ಶಗಳನ್ನು ಪಾಲಿಸಬೇಕು. ಜೊತೆಗೆ ದೇಶಭಕ್ತಿಯನ್ನು ಮೈಗೂಡಿಸಿಕೊಳ್ಳಬೇಕು ಎಂದರು.
ಗೋನೂರು ನಿರಾಶ್ರಿತರ ಪರಿಹಾರ ಕೇಂದ್ರದ ಅಧೀಕ್ಷಕ ಮಹದೇವಯ್ಯ, ಜೈಲು ಅಧೀಕ್ಷಕಿ ಅಪೇಕ್ಷ ಎಸ್. ಪವಾರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.