ಮಾಹಿತಿಯಿಲ್ಲಿದ ದಾಖಲಾತಿಯಲ್ಲಿ ಸರ್ಕಾರಿ ಸೀಲ್-ಸಹಿ!
Team Udayavani, Mar 31, 2022, 4:10 PM IST
ಚಳ್ಳಕೆರೆ: ಇಲ್ಲಿನ ತಾಲೂಕು ಕಚೇರಿಗೆ ಬುಧವಾರ ಸಲ್ಲಿಕೆಯಾದ ವಯಸ್ಸು ದೃಢೀಕರಣ ದಾಖಲಾತಿಯಲ್ಲಿ ಹಿರಿಯ ತಜ್ಞರು, ಜಿಲ್ಲಾ ಆಸ್ಪತ್ರೆ, ಚಿತ್ರದುರ್ಗ ಎಂಬ ಸೀಲ್ ಹಾಗೂ ಸಹಿ ಇರುವುದು ಪತ್ತೆಯಾಗಿದ್ದು, ಅದರಲ್ಲಿ ಯಾರಿಗೆ ನೀಡಲಾಗಿದೆ ಎಂಬ ಮಾಹಿತಿಯೇ ಇರಲಿಲ್ಲ.
ಇದರಿಂದ ಅನುಮಾನಗೊಂಡ ಗ್ರೇಡ್ -2 ತಹಶೀಲ್ದಾರ್ ಸಂಧ್ಯಾ, ದಾಖಲಾತಿ ಸಲ್ಲಿಸಿದ ವ್ಯಕ್ತಿಯನ್ನು ಈ ಬಗ್ಗೆ ಪ್ರಶ್ನಿಸಿದರು. ಆ ವ್ಯಕ್ತಿ ಅಲ್ಲಿ ಡಬ್ಟಾ ಅಂಗಡಿಯ ಲಕ್ಷ್ಮಕ್ಕ ಎಂಬಾಕೆ ನೀಡಿದ್ದಾಗಿ ತಿಳಿಸಿದ್ದಾನೆ. ನಂತರ ಗ್ರೇಡ್-2 ತಹಶೀಲ್ದಾರ್ ಸಂಧ್ಯಾ, ಶಿರಸ್ತೇದಾರ್ ಸದಾಶಿವ, ಕಂದಾಯಾಧಿಕಾರಿ ಲಿಂಗೇಗೌಡ, ಗ್ರಾಮಲೆಕ್ಕಿಗ ಪ್ರಕಾಶ್ ಮತ್ತಿತರರು ಮಹಿಳೆಯನ್ನು ಪ್ರಶ್ನಿಸಿದಾಗ ಮಹಿಳೆ ಉತ್ತರ ಕೊಡಲು ತಡವರಿಸಿದಳು. ಸಾರ್ವಜನಿಕವಾಗಿ ಪ್ರಶ್ನೆ ಮಾಡುತ್ತಿದ್ದ ಸಂದರ್ಭದಲ್ಲೇ ಎಲ್ಲರ ಕಣ್ತಪ್ಪಿಸಿ ನಾಪತ್ತೆಯಾಗಿದ್ದಾಳೆ. ಹಿರಿಯ ತಜ್ಞರು, ಜಿಲ್ಲಾ ಆಸ್ಪತ್ರೆ ಎಂಬ ಮೊಹರು ಇರುವ ದಾಖಲಾತಿಯನ್ನು ಪಡೆದಿದ್ದೇವೆ. ಇದನ್ನು ಪೊಲೀಸ್ ಠಾಣೆ ಹಸ್ತಾಂತರಿಸಿ ದೂರು ನೀಡುತ್ತೇವೆ. ಯಾರಿಗೆ ವಂಚನೆಯಾಗಿದೆ ಎಂಬುದನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುವುದಾಗಿ ಗ್ರೇಡ್-2 ತಹಶೀಲ್ದಾರ್ ಸಂಧ್ಯಾ ತಿಳಿಸಿದರು.
ಮಧ್ಯವರ್ತಿಗಳು ಇಂತಹ ಸುಳ್ಳು ದಾಖಲಾತಿ ನೀಡಿ ಮಂಜೂರಾತಿ ದೊರಕಿಸಿಕೊಡುತ್ತಿದ್ದಾರೆ. ಸರ್ಕಾರದ ತನಿಖೆ ಸಂದರ್ಭದಲ್ಲಿ ನಕಲಿ ಎಂದು ಸಾಬೀತಾದರೆ ಮಂಜೂರಾತಿ ರದ್ದಾಗಿ ಕಾನೂನು ಪ್ರಕಾರ ಶಿಕ್ಷೆಗೆ ಒಳಪಡಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
MUST WATCH
ಹೊಸ ಸೇರ್ಪಡೆ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.