Chitradurga: ಬಿಜೆಪಿ ಅವಧಿಯಲ್ಲಿ ಬೋವಿ ನಿಗಮದಲ್ಲೂ 100 ಕೋ. ರೂ. ಅವ್ಯವಹಾರ: ಗೂಳಿಹಟ್ಟಿ


Team Udayavani, Jun 6, 2024, 11:02 PM IST

Chitradurga: ಬಿಜೆಪಿ ಅವಧಿಯಲ್ಲಿ ಬೋವಿ ನಿಗಮದಲ್ಲೂ 100 ಕೋ. ರೂ. ಅವ್ಯವಹಾರ: ಗೂಳಿಹಟ್ಟಿ

ಚಿತ್ರದುರ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂ. ಅವ್ಯವಹಾರ ಬಯಲಿಗೆ ಬಂದ ಬೆನ್ನಲ್ಲೇ ಮಾಜಿ ಸಚಿವ ಗೂಳಿಹಟ್ಟಿ ಶೇಖರ್‌ ಅವರು ಬಿಜೆಪಿ ಸರಕಾರದ ಅವಧಿಯಲ್ಲಿ ಬೋವಿ ಅಭಿವೃದ್ಧಿ ನಿಗಮದಲ್ಲೂ 100 ಕೋ. ರೂ.ಗಳ ಅವ್ಯವಹಾರ ನಡೆದಿದ್ದು, ಅದರ ತನಿಖೆ ಮಾಡಿಸುವಂತೆ ಸರಕಾರವನ್ನು ಆಗ್ರಹಿಸಿದ್ದಾರೆ. ಅಲ್ಲದೆ, ಇದಕ್ಕೆ ಆಗ ಸಚಿವರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರೇ ಹೊಣೆ ಎಂದು ಆರೋಪಿಸಿದ್ದಾರೆ.

ತಮ್ಮ ವಾಟ್ಸ್‌ಆ್ಯಪ್‌ ಸ್ಟೇಟಸ್‌ ಆಡಿಯೋದಲ್ಲಿ ಈ ಕುರಿತು ಮಾತನಾಡಿರುವ ಗೂಳಿಹಟ್ಟಿ, ಕೊನೆಯ ಮೂರು ತಿಂಗಳ ಅವಧಿ ಯಲ್ಲಿ ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ನನ್ನನ್ನು ಬೋವಿ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷನನ್ನಾಗಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅಲ್ಲಿನ ಎಲ್ಲ ವಿಚಾರಗಳೂ ನನಗೆ ಗೊತ್ತು. ನಾನು ಸೋತು ಮನೆಯಲ್ಲಿರುವುದರಿಂದ ಮಾಧ್ಯಮಗಳ ಮುಂದೆ ಬಂದು ಹೇಳುತ್ತಿಲ್ಲ ಎಂದಿದ್ದಾರೆ.

ಹಿಂದಿನ ಸರಕಾರದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಮಂತ್ರಿಯಾಗಿದ್ದಾಗ ಬೋವಿ ನಿಗಮದಲ್ಲಿ 100 ಕೋಟಿ ರೂ. ಅವ್ಯವಹಾರ ಆಗಿದೆ. ಇದನ್ನು ಸುಪ್ರೀಂ ಕೋರ್ಟ್‌ ನ್ಯಾಯಾ ಧೀಶರ ಮೂಲಕ ತನಿಖೆ ಮಾಡಿಸಿ. ಕೋಟ ಅವರಂತಹ ಪ್ರಾಮಾಣಿಕ ದೇಶದಲ್ಲೇ ಇಲ್ಲ. ಆದರೂ ಅವರು 50-60 ಕೋ. ರೂ. ಮೌಲ್ಯದ ಆಸ್ತಿ ಮಾಡಿದರು. ಅದು ಎಲ್ಲಿಂದ ಬಂದಿದೆ ಎಂದು ಹೇಳಿಲ್ಲ. ಬಿಜೆಪಿ ಸರಕಾರದಲ್ಲಿ ಬೋವಿ ಅಭಿವೃದ್ಧಿ ನಿಗಮದ ಕೋಟಿ ಕೋಟಿ ರೂ. ನುಂಗಿದ್ದಾರೆ. ಸಚಿವರಿಗೆ ಶೇ.15, ಅಧ್ಯಕ್ಷರಿಗೆ ಶೇ.5ರಷ್ಟು ವಿವೇಚನಾ ಕೋಟ ಇರುತ್ತದೆ. ಈ ದುಡ್ಡು ಬಿಡುಗಡೆಯಲ್ಲೂ ಅವ್ಯವಹಾರವಾಗಿದೆ. ಇದ್ಯಾವುದಕ್ಕೂ ದಾಖಲೆ ಇಲ್ಲ. ಇದಕ್ಕೆ ಕೋಟ ಶ್ರೀನಿವಾಸ ಪೂಜಾರಿ ನೇರ ಹೊಣೆ ಎಂದು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈರ್‌ ಬ್ರ್ಯಾಂಡ್‌ʼ ಎಂಟ್ರಿ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Basangouda Patil Yatnal

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

042174

WFI: ಕುಸ್ತಿಪಟುಗಳಿಗೆ ಡಬ್ಲ್ಯುಎಫ್ಐ ತಡೆ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

655

Fraud: ಹಳೆ ಬ್ಯಾಟರಿ ನೀಡುವುದಾಗಿ ವಂಚನೆ

02554

Padubidri: 10 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.