ಭಾರೀ ಮಳೆಗೆ ನೆಲ ಕಚ್ಚಿದ ಬೆಳೆ-ಜನರಿಗೆ ಆತಂಕ
ಮೊಳಕಾಲ್ಮೂರು ಪಟ್ಟಣ-ತಾಲೂಕಿನಲ್ಲಿ ಗಾಳಿ-ಮಳೆಯಿಂದ ಸಮಸ್ಯೆ ಸೃಷ್ಟಿ
Team Udayavani, May 23, 2022, 4:31 PM IST
ಮೊಳಕಾಲ್ಮೂರು: ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಪಟ್ಟಣ ಹಾಗೂ ತಾಲೂಕಿನ ಜನಜೀವನ ಅಸ್ತವ್ಯಸ್ತಗೊಂಡಿದೆ.
ಬಿರುಗಾಳಿ ಸಹಿತದ ಮಳೆಯಿಂದ ತಾಲೂಕಿನ ನಾಗಸಮುದ್ರ ಗ್ರಾಮದಲ್ಲಿ ಪಪ್ಪಾಯಿ ಹಾಳಾಗಿದೆ. ಇನ್ನುಳಿದ ಕಡೆ ತರಕಾರಿ, ಬಾಳೆ ಹಾಗೂ ಇನ್ನಿತರ ಬೆಳೆ ಹಾನಿಯಾಗುವ ಸಾಧ್ಯತೆ ಇದೆ. ಕರಡಿಹಳ್ಳಿ ಗ್ರಾಮದಲ್ಲಿ ವಾಸದ ಮನೆಯೊಂದಕ್ಕೆ ಭಾಗಶಃ ಹಾನಿಯಾಗಿದೆ. ಮಳೆಯಿಂದ ಪಟ್ಟಣ ಹಾಗೂ ತಾಲೂಕಿನ ಬಹುತೇಕ ಗ್ರಾಮಗಳಲ್ಲಿರುವ ಹಳೆ ಮನೆಗಳು, ಶಾಲಾ-ಕಾಲೇಜು ಹಾಗೂ ಕಚೇರಿಗಳ ಕಟ್ಟಡಗಳು ಕುಸಿಯುವ ಆತಂ ಎದುರಾಗಿದೆ. ರಸ್ತೆಗಳಲ್ಲಿನ ಗುಂಡಿಗಳಲ್ಲಿ ನೀರು ತುಂಬಿಕೊಂಡು ಸಂಚಾರ ಸಮಸ್ಯೆ ಉಂಟಾಗಿದೆ. ಮೊಳಕಾಲ್ಮೂರು ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ಕಾಮಗಾರಿ ಆಮೆಗತಿಯಲ್ಲಿ ನಡೆಯುತ್ತಿದೆ. ಕೆಸರು ಗದ್ದೆಯಂತಿರುವ ರಸ್ತೆಯಲ್ಲಿ ಸಂಚರಿಸುವ ದುಸ್ಥಿತಿ ನಿರ್ಮಾಣವಾಗಿದೆ.
ಮಳೆಯಿಂದ ವ್ಯಾಪಾರ ವಹಿವಾಟು ಕುಂಠಿತಗೊಂಡು ವ್ಯಾಪಾರಸ್ಥರಿಗೆ ಸಮಸ್ಯೆ ತಂದೊಡ್ಡಿದೆ. ತಾಲೂಕಿನಲ್ಲಿ ಕೂಲಿ ಕೆಲಸವನ್ನೇ ನಂಬಿಕೊಂಡು ಬದುಕುತ್ತಿರುವ ಕೂಲಿ ಕಾರ್ಮಿಕರಿಗೆ ಕೂಲಿ ಕೆಲಸವಿಲ್ಲದೆ ಜೀವನ ನಡೆಸಲು ಪರದಾಡುವಂತಾಗಿದೆ. ರಸ್ತೆ ಅಗಲೀಕರಣಕ್ಕಾಗಿ ರಸ್ತೆ ಬದಿಯಲ್ಲಿನವರ ಮನೆಗಳನ್ನು ತೆರವು ಮಾಡಿದ್ದರಿಂದ ಅಳಿದುಳಿದ ಮನೆಗಳಲ್ಲೇ ಜನರು ವಾಸಿಸುತ್ತಿದ್ದಾರೆ. ಆದರೆ ತಾಲೂಕು ಆಡಳಿತ ಹಾಗೂ ಪಟ್ಟಣ ಪಂಚಾಯಿತಿ ಭರವಸೆಗಳನ್ನು ಮಾತ್ರ ನೀಡುತ್ತಿವೆ. ಈವರೆಗೂ ಯಾವೊಬ್ಬ ಜನಪ್ರತಿನಿಧಿಗಳು ಸೂಕ್ತ ಪರ್ಯಾಯ ಮಾರ್ಗದ ಬಗ್ಗೆ ಚಕಾರ ಎತ್ತುತ್ತಿಲ್ಲ. ಪರಿಹಾರ ಕಲ್ಪಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಮೊಳಕಾಲ್ಮೂರು ಪಟ್ಟಣ ಹಾಗೂ ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ತಾಲೂಕಿನ ಬಹುತೇಕ ಗ್ರಾಮಗಳ ರಸ್ತೆಗಳು ಹಾಳಾಗಿದ್ದು ಸುಗಮ ಸಂಚಾರಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ಪಟ್ಟಣದಲ್ಲಿ ನಡೆಯುವ ರಸ್ತೆ ಕಾಮಗಾರಿಯಿಂದ ಮನೆ ಕಳೆದುಕೊಂಡವರಿಗೆ ಈವರೆಗೂ ತಾಲೂಕು ಆಡಳಿತ ಹಾಗೂ ಪಟ್ಟಣ ಪಂಚಾಯಿತಿ ಪರಿಹಾರ ನೀಡದೆ ಸುಳ್ಳು ಭರವಸೆ ನೀಡುತ್ತಿವೆ. -ಆರ್. ರವಿಚಂದ್ರ, ರಾಷ್ಟ್ರೀಯ ವಾಲ್ಮೀಕಿ ನಾಯಕ ಮಹಾವೇದಿಕೆ ರಾಜ್ಯಾಧ್ಯಕ್ಷ
ಮಳೆಯಿಂದ ಬಡವರ ಜೀವನ ಅಸ್ತವ್ಯಸ್ತಗೊಂಡಿದೆ. ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಜನಸಾಮಾನ್ಯರಿಗೆ ಯಾವುದೇ ಅನಾಹುತವಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. -ಎಂ. ರಾಮಾಂಜನೇಯ, ಕರ್ನಾಟಕ ನವನಿರ್ಮಾಣ ಸೇನಾ ಸಮಿತಿ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
ByPolls; ಕಾಂಗ್ರೆಸ್ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
MUDA CASE: ರಾಜಕೀಯ ಸುದ್ದಿಗಾಗಿ ಇ.ಡಿ. ಯತ್ನ : ಹರಿಪ್ರಸಾದ್ ಆರೋಪ
ಪ್ರೀತಿಸುವಂತೆ ಸಹಪಾಠಿಯ ಒತ್ತಡ: ಕಾಲೇಜಿನ 3ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.