ಕೋವಿಡ್ ನಿರ್ಮೂಲನೆಗೆ ಸಂಕಲ್ಪಮಾಡಿ: ಪೂರ್ಣಿಮಾ
Team Udayavani, Jun 29, 2020, 3:37 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹಿರಿಯೂರು: ಆರೋಗ್ಯ ಇಲಾಖೆ ಹಾಗೂ ಸರ್ಕಾರದ ನಿಯಮಗಳನ್ನು ಎಲ್ಲರೂ ಪಾಲಿಸಿ ಕೋವಿಡ್ ವೈರಸ್ ಹೊಡೆದೋಡಿಸಲು ಸಂಕಲ್ಪ ಮಾಡಬೇಕು ಎಂದು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕರೆ ನೀಡಿದರು.
ನಗರದ ತಾಲೂಕು ಕ್ರೀಡಾಂಗಣದಲ್ಲಿ ಕೋವಿಡ್ ವಾರಿಯರ್ಸ್‌ಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ ಮೂರು ತಿಂಗಳುಗಳಿಂದ ತಾಲೂಕು ಆಡಳಿತದ ಸಿಬ್ಬಂದಿ ವರ್ಗ, ಪೊಲೀಸ್ ಮತ್ತು ಆರೋಗ್ಯ ಇಲಾಖೆ, ಪೌರಕಾರ್ಮಿಕರು, ಆಶಾ ಕಾರ್ಯಕರ್ತೆಯರ ಸೇವೆ ಅಭಿನಂದನಾರ್ಹ. ಇವರ ಜೊತೆಗೆ ಶಿಕ್ಷಣ ಇಲಾಖೆ, ವಿವಿಧ ಇಲಾಖೆಗಳ ನೌಕರರು ಕೂಡ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಸಮಾಜದಲ್ಲಿನ ಪ್ರತಿಯೊಬ್ಬ ಯುವಕರೂ ಕೋವಿಡ್ ವಾರಿಯರ್ ಆಗಬೇಕೆಂದರು.
ಆರೋಗ್ಯ ಇಲಾಖೆಯ ಡಾ| ರಂಗನಾಥ್ ಮಾತನಾಡಿ, ಕೋವಿಡ್ ವೈರಸ್ ಬಗ್ಗೆ ಸಾರ್ವಜನಿಕರು ಭಯ ಪಡದೆ ಎಚ್ಚರಿಕೆ ವಹಿಸಿ ಮಾರ್ಗಸೂಚಿಗಳನ್ನು ಅನುಸರಿಸುವುದು ಬಹಳ ಮುಖ್ಯ. ಕೋವಿಡ್ ರೋಗಿಗಳೆಲ್ಲರೂ ಸಾಯುವುದಿಲ್ಲ. ನಮ್ಮ ದೇಶದಲ್ಲಿ ಸಾವಿನ ಪ್ರಮಾಣ ಕಡಿಮೆ ಇದೆ. ದೀರ್ಘ ಕಾಲ ಅನಾರೋಗ್ಯಪೀಡಿತರಾಗಿದ್ದು ರೋಗ ನಿರೋಧಕ ಶಕ್ತಿ ಕಡಿಮೆ ಇದ್ದಂಥವರು ಮಾತ್ರ ಸಾವನ್ನಪ್ಪುತ್ತಾರೆ. ಯಾವುದೇ ಕಾಯಿಲೆಗೆ ಔಷಧಿ ಕಂಡು ಹಿಡಿದು ಪ್ರಯೋಗ ಮಾಡಿ ಬಿಡುಗಡೆ ಮಾಡಲು ಕನಿಷ್ಠ ಎಂಟು ತಿಂಗಳು ಬೇಕು. ಈ ಕಾಯಿಲೆ ಬಂದು ಕೇವಲ ನಾಲ್ಕು ತಿಂಗಳಾಗಿದೆ. ಕಾಯಿಲೆ ಗುಣಪಡಿಸುವಂತಹ ಲಸಿಕೆಯ ಪ್ರಯೋಗ ನಡೆದಿದೆ ಎಂದು ತಿಳಿಸಿದರು.
ಬಿಜೆಪಿ ಮುಖಂಡ ಡಿ.ಟಿ. ಶ್ರೀನಿವಾಸ್, ತಾಲೂಕು ಆರೋಗ್ಯ ಅಧಿಕಾರಿ ಡಾ| ವೆಂಕಟೇಶ್, ತಾಪಂ ಇಒ ಹನುಮಂತಪ್ಪ, ಡಿವೈಎಸ್‌ಪಿ ರೋಷನ್ ಜಮೀರ್, ಪೌರಾಯುಕ್ತರಾದ ಲೀಲಾವತಿ, ಬಿಇಒ ಪಿ. ರಾಮಯ್ಯ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ. ಶಿವಾನಂದ, ಕೇಶವಮೂರ್ತಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.