ಮದ್ಯ ನಿಷೇಧಕ್ಕೆ ಒತ್ತಾಯ
Team Udayavani, May 11, 2020, 6:09 PM IST
ಸಾಂದರ್ಭಿಕ ಚಿತ್ರ
ಹಿರಿಯೂರು: ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಆರಂಭಿಸಿರುವ ಮದ್ಯದಂಗಡಿಗಳನ್ನು ಮುಚ್ಚಿ ರಾಜ್ಯದಲ್ಲಿ ಮದ್ಯಪಾನವನ್ನು ಸಂಪೂರ್ಣ ನಿಷೇಧ ಮಾಡಬೇಕೆಂದು ಒತ್ತಾಯಿಸಿ ಅಖೀಲ ಭಾರತ ವೀರಶೈವ ಮಹಾಸಭಾದ ಮಹಿಳಾ ಘಟಕದ ವತಿಯಿಂದ ತಹಶೀಲ್ದಾರ್ ಜಿ.ಎಚ್. ಸತ್ಯನಾರಾಯಣ ಅವರಿಗೆ ಮನವಿ ಸಲ್ಲಿಸಲಾಯಿತು.
ಸರ್ಕಾರ ಮದ್ಯವನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅವಕಾಶ ನೀಡಿರುವುದು ಆಘಾತಕಾರಿ ಬೆಳವಣಿಗೆ. ಕುಡಿತದ ಗೀಳಿಗೆ ಒಳಗಾದವರು ಸಮಾಜದ ಸ್ವಾಸ್ತ್ಯವನ್ನೇ ಹಾಳು ಮಾಡುತ್ತಿದ್ದಾರೆ. ಮದ್ಯ ನಿಷೇಧಕ್ಕೆ ಮಾಡುತ್ತಿರುವ ಹೋರಾಟ ಇಂದು ನಿನ್ನೆಯದಲ್ಲ. ರಾಜ್ಯದಲ್ಲಿ ಕೆಲವೇ ತಿಂಗಳುಗಳ ಹಿಂದೆ ಬಿರುಬಿಸಿಲಿನಲ್ಲಿ ಬರಿಗಾಲಿನಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಮಹಿಳೆಯರು ತಮ್ಮ ಚಿಕ್ಕ ಮಕ್ಕಳನ್ನು ಹೊತ್ತುಕೊಂಡು ವಿಧಾನಸೌಧದ ಹೊಸ್ತಿಲು ತುಳಿದು ಮದ್ಯ ನಿಷೇಧಕ್ಕೆ ಆಗ್ರಹಿಸಿದ್ದರು. ನೋವಿನಿಂದ ದಣಿದ ಹೆಜ್ಜೆಯ ಪಸೆ ಆರುವ ಮೊದಲೇ ಸರ್ಕಾರ ಮದ್ಯದಂಗಡಿಗಳಿಗೆ ಪರವಾನಗಿ ಕೊಟ್ಟಿರುವುದು ಖಂಡನೀಯ ಎಂದು ಮನವಿಯಲ್ಲಿ ಆಕ್ಷೇಪಿಸಲಾಗಿದೆ.
ಅಖೀಲ ಭಾರತ ವೀರಶೈವ ಮಹಾಸಭಾದ ಮಹಿಳಾ ಘಟಕದ ಅಧ್ಯಕ್ಷೆ ಶಶಿಕಲಾ ರವಿಶಂಕರ್, ಸರ್ವಮಂಗಳ ರಮೇಶ್, ಶ್ಯಾಮಲಾ ಸತೀಶ್, ತ್ರಿವೇಣಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.