ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ಆಕ್ರೋಶ
Team Udayavani, Jul 8, 2020, 3:16 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹಿರಿಯೂರು: ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಮಂಗಳವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮಾಜಿ ಸಚಿವ ಡಿ. ಸುಧಾಕರ್ ಮಾತನಾಡಿ, ಬಿಜೆಪಿ ಸರ್ಕಾರ ಜನರ ಸಂಕಷ್ಟಕ್ಕೆ ಸ್ಪಂದಿಸದೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ದಿನೇ ದಿನೇ ಏರಿಸುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಕುಸಿದಿದ್ದು, ಕೇವಲ ಮೂವತ್ತು ರೂ. ಗೆ ಸಿಗುವಂತಹ ಪೆಟ್ರೋಲ್ ಅನ್ನು 85 ರೂ. ಗೆ ಮಾರಾಟ ಮಾಡಲಾಗುತ್ತಿದೆ. ಈ ರೀತಿ 18 ಲಕ್ಷ ಕೋಟಿ ರೂ. ತೆರಿಗೆ ರೂಪದಲ್ಲಿ ಸಂಗ್ರಹಿಸಿ ಗ್ರಾಹಕರ ಮೇಲೆ ಹೊರೆ ಹಾಕಿದೆ ಎಂದು ಆರೋಪಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್ ಮಾತನಾಡಿ, ಎಲ್ಲೆಡೆ ಕೋವಿಡ್ ವೈರಸ್‌ನಿಂದ ಜನರು ತತ್ತರಿಸುತ್ತಿರುವ ಸಂದರ್ಭದಲ್ಲಿ ಸರ್ಕಾರ ಭೂ ಸುಧಾರಣಾ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿದೆ. ಕೋವಿಡ್ ರೋಗ ಪೀಡಿತರಿಗೆ ಸೂಕ್ತ ಚಿಕಿತ್ಸೆ ನೀಡುವಲ್ಲಿ ವಿಫಲವಾಗಿದೆ. ರೋಗಿಗಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಸರ್ಕಾರ ಮುಂದಾಗಬೇಕು. ಅಗತ್ಯ ವಸ್ತುಗಳ ಬೆಲೆ ಕಡಿಮೆ ಮಾಡಬೇಕು ಎಂದು ಒತ್ತಾಯಿಸಿದರು. ಜಿಪಂ ಸದಸ್ಯ ಪಾಪಣ್ಣ, ತಾಪಂ ಸದಸ್ಯ ಓಂಕಾರಪ್ಪ, ನಗರಸಭೆ ಸದಸ್ಯ ಈರಲಿಂಗೇಗೌಡ, ಕೆಪಿಸಿಸಿ ಸದಸ್ಯ ಅಮೃತೇಶ್ವರಸ್ವಾಮಿ, ಮುಖಂಡರಾದ ಕಲ್ಲಟ್ಟಿ ತಿಪ್ಪೇಸ್ವಾಮಿ, ಜಿ.ಎಲ್. ಮೂರ್ತಿ, ಎಲ್. ಜಿ. ರತ್ನಮ್ಮ, ಗುಂಡೇಗೌಡ, ಮದಲ ಮರಿಯಾ, ಗೀತಾ, ಕವಿತಾ, ದಾದಾಪೀರ್, ಲೋಕೇಶ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.