ಶಿಕ್ಷಣ ಕ್ಷೇತ್ರ ಭ್ರಷ್ಟಾಚಾರ ನಿರ್ಮೂಲನೆಯೇ ಗುರಿ
ಗುಣಮಟ್ಟದ ಶಿಕ್ಷಣ ನೀಡಲು ರಾಜ್ಯ ಬಿಜೆಪಿ ಸರ್ಕಾರ ಬದ್ಧ: ಎಂಎಲ್ಸಿ ನಾರಾಯಣಸ್ವಾಮಿ
Team Udayavani, Jan 31, 2020, 4:45 PM IST
ಹೊಳಲ್ಕೆರೆ: ಶಿಕ್ಷಣ ಇಲಾಖೆಯ ಭ್ರಷ್ಟಾಚಾರವನ್ನು ಬೇರು ಸಹಿತ ಕಿತ್ತು ಹಾಕುವ ಮೂಲಕ ಭ್ರಷ್ಟಾಚಾರ ಮುಕ್ತ ಇಲಾಖೆಯನ್ನಾಗಿ ರೂಪಿಸಿ ಗುಣಾತ್ಮಕ ಶಿಕ್ಷಣ ದೊರಕಿಸಲು ಪ್ರಯತ್ನ ಮಾಡುವುದಾಗಿ ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಹೇಳಿದರು.
ಗುರುವಾರ ಪಟ್ಟಣದ ವಿವಿಧ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಶಾಲಾ ಕಾಲೇಜುಗಳಲ್ಲಿರುವ ಸಮಸ್ಯೆಗಳನ್ನು ಪರಿಶೀಲಿಸಿ ಶಿಕ್ಷಕರ ಕುಂದುಕೊರತೆ ಆಲಿಸಿ ಅವರು ಮಾತನಾಡಿದರು. ಶಿಕ್ಷಣ ಸಚಿವ ಸುರೇಶ್‌ಕುಮಾರ್‌ರವರು ಶಿಕ್ಷಣ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡುವ ಮೂಲಕ ಸಕಾಲದಲ್ಲಿ ಎಲ್ಲಾ ರೀತಿಯ ಶೈಕ್ಷಣಿಕ ಸೌಲಭ್ಯಗಳು ಮಕ್ಕಳಿಗೆ, ಶಿಕ್ಷಕರಿಗೆ ದೊರೆಯುವಂತೆ ಶ್ರಮಿಸುತ್ತಿದ್ದಾರೆ. ಇಲಾಖೆ ವ್ಯಾಪ್ತಿಯಲ್ಲಿ ವೇತನಕ್ಕಾಗಿ, ಪಿಂಚಣಿ ಸೇರಿದಂತೆ ವಿವಿಧ ಸೌಲಭ್ಯಗಳನ್ನು ನೀಡಲು ಸಣ್ಣಮಟ್ಟದ ಗುಮಾಸ್ತರಿಂದ ಅಧಿಕಾರಿ ವರ್ಗದವರೆಗೆ ನೆಡೆಯುತ್ತಿರುವ ಅಕ್ರಮ ಹಣ ವಸೂಲಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಭ್ರಷ್ಟಾಚಾರ ಮುಕ್ತ ಇಲಾಖೆಯನ್ನಾಗಿ ಮಾಡಲಾಗುವುದು ಎಂದರು.
ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳಿದ್ದರೂ ಅವುಗಳನ್ನು ಚರ್ಚೆ, ಸಂವಾದ, ಸಲಹೆ, ಚಿಂತನೆ ನಡೆಸುವ ಮೂಲಕ ಕಾನೂನುಬದ್ಧವಾಗಿ ಪರಿಹರಿಸಲು ನಮ್ಮ ಸರ್ಕಾರ ಶ್ರಮಿಸುತ್ತಿದೆ. ವರ್ಗವಣೆಯಲ್ಲಿ ಸರಳೀಕರಣ, ಪತಿ-ಪತ್ನಿ ವರ್ಗಾವಣೆ, ಆರೋಗ್ಯ ಸಮಸ್ಯೆಗಳ ವರ್ಗವಣೆಗಳಿಗೆ ವಿಶೇಷ ಕಾನೂನು ರೂಪಿಸಿ ಶಿಕ್ಷಣರಿಗೆ ಸಕಲ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಶಿಕ್ಷಣದ ಗುಣಮಟ್ಟವನ್ನು ದ್ವಿಗುಣಗೊಳಿಸಲು ಸರ್ಕಾರ ಸಾಕಷ್ಟು ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ ಎಂದು ಹೇಳಿದರು.
ರಾಜ್ಯದಲ್ಲಿರುವ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಕಾಲೇಜು ಮಟ್ಟದವರೆಗೆ ಕಂಪ್ಯೂಟರ್ ಶಿಕ್ಷಣವನ್ನು ಜಾರಿಗೆ ತರಲು ಶಿಕ್ಷಣ ಇಲಾಖೆ ಮುಂದಾಗಿದೆ. ಉಪನ್ಯಾಸಕರಿಗೆ ಕಾಲ್ಪನಿಕ ಭಡ್ತಿ, ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ, ಗುಣಮಟ್ಟದ ಸಮವಸ್ತ್ರ, ಪಾಠೊಪಕರಣ ನೀಡುವ ಮೂಲಕ ವಿದ್ಯಾರ್ಥಿಗಳು ಪರಿಣಾಮಕಾರಿಯಾಗಿ ಶಿಕ್ಷಣ ಪಡೆದುಕೊಳ್ಳುವಂತೆ ಸಕಲ ಸೌಲಭ್ಯಗಳನ್ನು ಕಲ್ಪಿಸುವುದಾಗಿ ತಿಳಿಸಿದರು.
ಒಂದು ವರ್ಷದ ಅವಧಿಯಲ್ಲಿ ನಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಎಲ್ಲಾ 1000 ಶಾಲೆಗಳಿಗೂ ಶುದ್ಧ ನೀರಿನ ಘಟಕಗಳನ್ನು ಅಳವಡಿಸಲು ಸುಮಾರು 2.98 ಕೋಟಿ ರೂ. ಅನುದಾನ ನೀಡಲಾಗಿದೆ. ಈ ಮೂಲಕ ವಿದ್ಯಾರ್ಥಿಗಳ ಆರೋಗ್ಯ ಕಾಪಾಡಲು ಒತ್ತು ನೀಡುವುದಾಗಿ ಹೇಳಿದರು. ತಾಲೂಕು ಬಿಜೆಪಿ ಅಧ್ಯಕ್ಷ ಎಂ.ಬಿ. ಸಿದ್ದೇಶ್, ಪಟ್ಟಣ ಪಂಚಾಯತ್ ಸದಸ್ಯರಾದ ಕೆ.ಸಿ. ರಮೇಶ್, ಪಿ.ಆರ್. ಮಲ್ಲಿಕಾರ್ಜುನ್, ಡಿ.ಎಸ್. ವಿಜಯ್, ಅಶೋಕ್, ಎಚ್.ಆರ್. ನಾಗರತ್ನ ವೇದಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ಜಗದೀಶ್, ತಾಪಂ ಇಒ ತಾರಾನಾಥ, ಸಮಾಜ ಕಲ್ಯಾಣಾಧಿ ಕಾರಿ ಒ. ಪರಮೇಶ್ವರ್, ಬಿಜೆಪಿ ಕಾರ್ಯದರ್ಶಿ ರೂಪಾ ಸುರೇಶ್, ಉಪನ್ಯಾಸಕ ರವಿಶಂಕರ್, ಜಯ ನಾಯ್ಕ, ಶಿವಮೂರ್ತಿ, ಜಯಣ್ಣ ಹಾಗೂ ವಿವಿಧ ಶಾಲಾ-ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಹೊಸ ಸೇರ್ಪಡೆ
Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.