79 ಪರೀಕ್ಷಾ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ: ಡಿಡಿಪಿಐ ಪರಮೇಶ್ವರ
Team Udayavani, May 31, 2020, 6:38 PM IST
ಹೊನ್ನಾಳಿ: ಜಿಲ್ಲೆಯಲ್ಲಿ 20, 927 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿದ್ದಾರೆ ಎಂದು ಡಿಡಿಪಿಐ ಪರಮೇಶ್ವರಪ್ಪ ತಿಳಿಸಿದರು. ಪಟ್ಟಣದ ಹಳದಮ್ಮ ದೇವಿ ಬಾಲಕಿಯರ ಪ್ರೌಢಶಾಲೆಗೆ ಶನಿವಾರ ಭೇಟಿ ನೀಡಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಈಗಾಗಲೇ ಎಸ್ಸೆಸ್ಸೆಲ್ಸಿ ಪರೀಕ್ಷೆ ಬಗ್ಗೆ ವಿಡಿಯೋ ಕಾನ್ಫರೆನ್ಸ್ ನಡೆಸಲಾಗಿದೆ ಜೂನ್ 25 ರಿಂದ ಜುಲೈ 4 ರವರೆಗೆ ನಡೆಯುವ ಪರೀಕ್ಷೆಗೆ ಜಿಲ್ಲಾದ್ಯಂತ 79 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದರು. ಹೆಚ್ಚುವರಿಯಾಗಿ 14 ಬ್ಲಾಕ್ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಅಳವಡಿಸಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಸಿಬ್ಬಂದಿಗೆ ಎರಡು ಮಾಸ್ಕ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದೆ. ಒಂದು ಮಾಸ್ಕ್ ಶಿಕ್ಷಣ ಇಲಾಖೆ ನೀಡಿದರೆ, ಮತ್ತೊಂದನ್ನು ಜಿಲ್ಲಾ ಸ್ಕೌಟ್ಸ್ ಆ್ಯಂಡ್ ಗೈಡ್‌ನವರು ನೀಡಿದ್ದಾರೆ. ಪರೀಕ್ಷಾ ಕೊಠಡಿಯಲ್ಲಿ ಕೇವಲ 16 ರಿಂದ 20 ವಿದ್ಯಾರ್ಥಿಗಳಿಗೆ ಅವಕಾಶ ನೀಡಿದ್ದು ವಿದ್ಯಾರ್ಥಿಗಳನ್ನು ಒಂದು ಮೀಟರ್ ಅಂತರದಲ್ಲಿ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಸಿಬ್ಬಂದಿಗೆ ಥರ್ಮಲ್ ಸ್ಕ್ಯಾನಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಸಿಬ್ಬಂದಿ ಪರೀಕ್ಷೆಗಿಂತ ಒಂದು ಗಂಟೆ ಮುಂಚಿತವಾಗಿ ಬರಲಿದ್ದಾರೆ. ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ಉಚಿತ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದರು. ಇದೇ ಸಂದರ್ಭದಲ್ಲಿ ಎಸ್.ಎಸ್. ಮೊಂಜಿಲ್ ಉಚಿತ ಮನೆಪಾಠದ ಸಂಸ್ಥಾಪಕಿ ಷಹಜಾನ್ ಅವರು ಹೊನ್ನಾಳಿ ತಾಲೂಕಿನ 2900 ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿಗೆ ಉಚಿತವಾಗಿ ಮಾಸ್ಕ್ ನೀಡುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.